ಇರ್ಫಾನ್ ಖಾನ್, ರಿಷಿ ಕಪೂರ್ ಅವಹೇಳನೆ: ಕೆಆರ್‌ಕೆ ವಿರುದ್ಧ ಎಫ್‌ಐಆರ್
ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಸ್ವಯಂ ಘೋಷಿತ ಚಿತ್ರ ವಿಮರ್ಶಕ ಕಮಾಲ್ ಆರ್ ಖಾನ್ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಬಾಂದ್ರಾದಲ್ಲಿನ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Recommended Video
ಕಳೆದ ತಿಂಗಳು ಮೃತಪಟ್ಟ ಬಾಲಿವುಡ್ ದಿಗ್ಗಜರಾದ ಇರ್ಫಾನ್ ಖಾನ್ ಮತ್ತು ರಿಷಿ ಕಪೂರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೆಆರ್‌ಕೆ ಅವಮಾನಕಾರಿಯಾದ ಟ್ವೀಟ್‌ಗಳನ್ನು ಮಾಡಿದ್ದಾರೆ ಎಂದು ಯುವ ಸೇನಾ ಎಂಬ ಸಂಘಟನೆಯ ಸದಸ್ಯ ರಾಹುಲ್ ಕನಾಲ್ ದೂರು ನೀಡಿದ್ದರು.
ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಈಗ ಲಿಕ್ಕರ್ ಅಂಗಡಿಗಳು ತೆರೆಯುವುದಿಲ್ಲ ಎಂಬ ಕಾರಣಕ್ಕೆ ರಿಷಿ ಕಪೂರ್ ಸಾಯಬಾರದಿತ್ತು ಎಂಬುದಾಗಿ ಏ. 30ರಂದು ಕೆಆರ್‌ಕೆ ಟ್ವೀಟ್ ಮಾಡಿದ್ದರು ಎನ್ನಲಾಗಿದೆ. ಹಾಗೆಯೇ ಇರ್ಫಾನ್ ಕುರಿತೂ ಅವರು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ನಿಧನರಾದ ಇಬ್ಬರು ನಟರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಮಾಲ್ ಆರ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 294 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯ ಅಥವಾ ಪದ ಬಳಕೆ) ಮತ್ತು ಇತರೆ ನಿಯಮಗಳ ಅಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Click it and Unblock the Notifications











