ಫೋಟೋ ನೋಡಿ: ದೀಪಿಕಾ ಪಡುಕೋಣೆ ಮನೆಯಲ್ಲಿ ಮದುವೆ ಸಂಭ್ರಮ ಶುರು
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ವಿವಾಹ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನವೆಂಬರ್ 14 ಹಾಗೂ 15 ರಂದು ದೀಪಿಕಾ-ರಣ್ವೀರ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ವರದಿಗಳ ಪ್ರಕಾರ, ಇಟಲಿಯಲ್ಲಿ ದೀಪಿಕಾ ಪಡುಕೋಣೆ-ರಣ್ವೀರ್ ಸಿಂಗ್ ವಿವಾಹ ಸಮಾರಂಭ ನಡೆಯಲಿದೆ. ಬಳಿಕ ಬೆಂಗಳೂರು ಹಾಗೂ ಮುಂಬೈನಲ್ಲಿ ಗ್ರ್ಯಾಂಡ್ ರಿಸೆಪ್ಷನ್ ಜರುಗಲಿದೆ.

ಮದುವೆಗೆ ಹನ್ನೆರಡು ದಿನಗಳು ಬಾಕಿ ಉಳಿದಿರುವಾಗಲೇ, ದೀಪಿಕಾ ಮನೆಯಲ್ಲಿ ವಿವಾಹ ಸಂಭ್ರಮ ಜೋರಾಗಿದೆ. ಬೆಂಗಳೂರಿನಲ್ಲಿ ಇರುವ ದೀಪಿಕಾ ಪಡುಕೋಣೆ ಮನೆಯಲ್ಲಿ ನಿನ್ನೆ ನಂದಿ ಪೂಜೆ ನಡೆಯಿತು.
ಕೇಸರಿ ಬಣ್ಣದ ಸಲ್ವಾರ್ ತೊಟ್ಟು ನಟಿ ದೀಪಿಕಾ ಪಡುಕೋಣೆ ನಂದಿ ಪೂಜೆ ನೆರವೇರಿಸಿದರು. ಈ ಪೂಜೆ ಕೈಂಕರ್ಯಗಳಲ್ಲಿ ದೀಪಿಕಾ ಪಡುಕೋಣೆ ಕುಟುಂಬಸ್ಥರು ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು.
ರಣ್ವೀರ್ ಸಿಂಗ್ ಜೊತೆಗೆ ಹೊಸ ಜೀವನಕ್ಕೆ ಕಾಲಿಡಲು ನಟಿ ದೀಪಿಕಾ ಪಡುಕೋಣೆ ಉತ್ಸುಕರಾಗಿದ್ದಾರೆ. ಮದುಮಗಳ ಮೊಗದಲ್ಲಿ ಸಂತಸ ಮನೆ ಮಾಡಿದೆ. ಅದಕ್ಕೆ ಈ ಫೋಟೋಗಳೇ ಸಾಕ್ಷಿ.
English summary
First picture: Deepika Padukone's pre wedding function begins.


Click it and Unblock the Notifications