ಪತ್ನಿಗೆ ವಿಚ್ಛೇದನ ನೀಡುತ್ತಿದ್ದಂತೆ ಬಾಲಿವುಡ್ ನಟಿಯ ಹಿಂದೆ ಬಿದ್ದ ಹಾರ್ದಿಕ್ ಪಾಂಡ್ಯ: ಏನು ನಡೀತಿದೆ?
ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೊವಿಚ್ ವಿಚ್ಚೇದನ ಸುದ್ದಿಯನ್ನು ಘೋಷಣೆ ಮಾಡಿದ್ದರು. ಕಳೆದ ಹಲವು ದಿನಗಳಿಂದ ಇಬ್ಬರ ನಡುವೆ ದಾಂಪತ್ಯದಲ್ಲಿ ಸಾಮರಸ್ಯವಿಲ್ಲ ಅನ್ನೋ ಸುದ್ದಿ ಓಡಾಡುತ್ತಿತ್ತು. ಇಬ್ಬರೂ ವಿಚ್ಛೇದನದ ಸುದ್ದಿಯನ್ನು ಇನ್‌ಸ್ಟಾಗ್ರಾಂ ಮೂಲಕ ಮೂಲಕ ಅನೌನ್ಸ್ ಮಾಡಿದ್ದರು.
ಸದ್ಯ ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಚ್ ಭಾರತದ ತೊರೆದಿದ್ದಾರೆ. ತಮ್ಮ ತವರು ದೇಶ ಸೆರ್ಬಿಯಾಗೆ ಮಗನೊಂದು ಪಯಣ ಬೆಳೆಸಿದ್ದಾರೆ. ಈ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಜೊತೆ ಮತ್ತೊಬ್ಬ ಬಾಲಿವುಡ್ ನಟಿಯ ಹೆಸರು ಕೇಳಿ ಬರುತ್ತಿದೆ. ವಿಚ್ಚೇದನಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಜೊತೆ ಯೂಟ್ಯೂಬರ್ ಕಾಣಿಸಿಕೊಂಡಿದ್ದರು. ಆಗಲೂ ಕೂಡ ಹೀಗೆ ಸುದ್ದಿಯಾಗಿತ್ತು.

ನತಾಶಾ ಸ್ಟಾಂಕೋವಿಚ್ ಸೆರ್ಬಿಯಾಗೆ ತೆರಳುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ಜೊತೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ಹೆಸರು ತಳುಕು ಹಾಕಿಕೊಂಡಿದೆ. ಅದಕ್ಕೆ ಕಾರಣವಾಗಿದ್ದು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ. ಈ ಮದುವೆ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರೆ, ಇಷ್ಟು ಸುದ್ದಿಯಾಗುತ್ತಿರಲಿಲ್ಲ. ಆದರೆ, ಆನಂತರ ಇಬ್ಬರ ನಡೆ ಗುಸುಗುಸುಗೆ ಕಾರಣವಾಗಿದೆ.
ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು ಗೊತ್ತೇ ಇದೆ. ಈ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಸೇರಿದಂತೆ ಬಂದಿದ್ದ ಗಣ್ಯರೆಲ್ಲರೂ ಭರ್ಜರಿಯಾಗಿ ಹೆಜ್ಜೆ ಹಾಕಿದ್ದರು. ಅದರಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಮಸ್ತ್ ಆಗಿ ಹೆಜ್ಜೆ ಹಾಕಿದ್ದರು. ಅದರಲ್ಲಿ ಅನನ್ಯಾ ಪಾಂಡೆ ಕೂಡ ಇದ್ದರು.
ಅನಂತ್ ಅಂಬಾನಿ ಮದುವೆಯಲ್ಲಿ ಜೊತೆಯಾಗಿ ಭರ್ಜರಿ ಹೆಜ್ಜೆ ಅಷ್ಟೇ ಹಾಕಿದ್ದರೆ, ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯಾ ಪಾಂಡೆ ಇಷ್ಟೊಂದು ಸದ್ದು ಮಾಡುತ್ತಿರಲಿಲ್ಲ. ಮದುವೆ ಸಮಾರಂಭ ಮುಗಿಸಿ ಹೊರಬರುತ್ತಿದ್ದಂತೆ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯಾ ಪಾಂಡೆ ಇಬ್ಬರೂ ಒಬ್ಬರನ್ನೊಬ್ಬರು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡುವುದಕ್ಕೆ ಶುರು ಮಾಡಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎದ್ದಿದೆ.

ಇಬ್ಬರ ಈ ನಡೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುವುದಕ್ಕೆ ಶುರುವಾಗಿದೆ. ಹಾರ್ದಿಕ್ ಪಾಂಡ್ಯ ವಿಚ್ಛೇದನದ ಬಳಿಕ ಬಾಲಿವುಡ್ ನಟಿಯ ಹಿಂದೆ ಬಿದ್ರಾ? ಅನ್ನೋ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕೆಲವರು ಪತ್ನಿಗೆ ವಿಚ್ಛೇದನ ನೀಡಿದ ಬಳಿಕವೇ ಇನ್ನೊಬ್ಬ ನಟಿಗೆ ಹಾರ್ದಿಕ್ ಪಾಂಡ್ಯ ಮನ ಸೋತರೇ? ಎಂದು ಪ್ರಶ್ನೆ ಮಾಡುವುದಕ್ಕೆ ಶುರು ಮಾಡಿದ್ದಾರೆ. ಸದ್ಯ ಈ ಸುದ್ದಿ ಬಾಲಿವುಡ್ ಅಂಗಳದಲ್ಲಿ ಬಾರಿ ಚರ್ಚೆಯಾಗುತ್ತಿದೆ.
ಈ ಹಿಂದೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ಹೆಸರು ಮತ್ತೊಬ್ಬ ಬಾಲಿವುಡ್ ನಟ ಆದಿತ್ಯ ರಾಯ್ ಕಪೂರ್ ಜೊತೆ ತಳುಕು ಹಾಕಿಕೊಂಡಿತ್ತು. ಅನನ್ಯಾ ಪಾಂಡೆ ಹಾಗೂ ಆದಿತ್ಯ ರಾಜ್ ಕಪೂರ್ ಇಬ್ಬರೂ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ, ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯದ ಬಗ್ಗೆ ಬಾಯಿಬಿಟ್ಟಿರಲಿಲ್ಲ. ಹಾಗೇ ಕೆಲವು ದಿನಗಳ ಹಿಂದಷ್ಟೇ ಈ ಜೋಡಿ ಬ್ರೇಕಪ್ ಮಾಡಿಕೊಂಡಿದೆ ಅನ್ನೋ ಸುದ್ದಿನೂ ಓಡಾಡಿತ್ತು.
ಈ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯಾ ಪಾಂಡೆ ಇಬ್ಬರು ಅನಂತ್ ಅಂಬಾನಿ ಮದುವೆಯಲ್ಲಿ ಕನೆಕ್ಟ್ ಆಗಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡುವುದಕ್ಕೆ ಶುರು ಮಾಡಿದ್ದಾರೆ. ಇಬ್ಬರ ಸ್ನೇಹ ಎಂತದ್ದು ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಬಹುದು.


Click it and Unblock the Notifications











