ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಹೃತಿಕ್ ರೋಷನ್ ಮಾಜಿ ಪತ್ನಿ ಸುಸೇನ್; ಕಾರಣವೆನು?
ಬಾಲಿವುಡ್ ನ ಖ್ಯಾತ ನಟ, ಹ್ಯಾಂಡ್ ಸಮ್ ಹಂಕ್ ಹೃತಿಕ್ ರೋಷನ್ ಮಾಜಿ ಪತ್ನಿ ಸುಸೇನ್ ಖಾನ್ ಇಂದು (ಡಿಸೆಂಬರ್ 12) ಬೆಳ್ಳಂಬೆಳಗ್ಗೆ ಪೊಲೀಸ್ ಸ್ಟೇಷನ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಬಾಂದ್ರಾ ಪೊಲೀಸ್ ಸ್ಟೇಷನ್ ನಲ್ಲಿ ಹೃತಿಕ್ ಮಾಜಿ ಪತ್ನಿ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪೊಲೀಸ್ ಠಾಣೆಗೆ ಹೋಗುತ್ತಿರುವ ಸುಸೇನ್ ಮತ್ತು ಸ್ನೇಹಿತರ ಜೊತೆ ಪೊಲೀಸರು ಸಹ ಇರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಹೃತಿಕ್ ಮಾಜಿ ಪತ್ನಿ ಸುಸೇನ್ ದಿಢೀರನೆ ಯಾಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ.
ಸದ್ಯ ಚಿತ್ರರಂಗದಲ್ಲಿ ಡ್ರಗ್ ಮಾಫಿಯಾದ ಸದ್ದು ಜೋರಾಗಿ ಕೇಳಿಬರುತ್ತಿದೆ. ಬಾಲಿವುಡ್ ನ ಅನೇಕ ಸೆಲೆಬ್ರಿಟಿಗಳು ಡ್ರಗ್ ಮಾಫಿಯಾ ವಿಚಾರವಾಗಿ ಎನ್ ಸಿ ಬಿ ವಿಚಾರಣೆ ಎದುರಿಸಿದ್ದಾರೆ. ಈ ಸಮಯದಲ್ಲಿ ಸುಸೇನ್ ಖಾನ್ ಪೋಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿರುವುದು ಅನೇಕರ ಅನುಮಾನಕ್ಕೆ ಕಾರಣವಾಗಿದೆ.

ಆದರೆ ಸುಸೇನ್ ಪೊಲೀಸ್ ಸ್ಟೇಷನ್ ಗೆ ಎಂಟ್ರಿ ಕೊಟ್ಟಿರುವ ಕಾರಣನೇ ಬೇರೆ. ಹೃತಿಕ್ ಮಾಜಿ ಪತ್ನಿ ವೃತ್ತಿಯಲ್ಲಿ ಇಂಟೀರಿಯರ್ ಡಿಸೈನರ್. ಪೊಲೀಸ್ ಸ್ಟೇಷನ್ ಮರು ನಿರ್ಮಾಣ ಮಾಡಲಾಗುತ್ತಿದೆಯಂತೆ. ಆ ಉದ್ದೇಶದಿಂದ ಸ್ಟೇಷನ್ ಗೆ ಎಂಟ್ರಿ ಕೊಟ್ಟಿದ್ದರು. ಈ ಬಗ್ಗೆ ಐ ಎ ಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ಜೊತೆ ಮಾತನಾಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಸುಸೇನ್ ಖಾನ್ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಸದಾ ಒಂದಲ್ಲೊಂದು ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಪತಿಯಿಂದ ವಿಚ್ಛೇದನ ಪಡೆದು ದೂರವಾದರು ಸಹ ಹೃತಿಕ್ ರೋಷನ್ ಜೊತೆ ಉತ್ತಮವಾದ ಸ್ನೇಹ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಜೋಡಿ 2014ರಲ್ಲಿ ವಿಚ್ಛೇದನ ಪಡೆದು ಪ್ರತ್ಯೇಕವಾಗಿದ್ದಾರೆ.
ಮಕ್ಕಳಿಗಾಗಿ ಈ ಜೋಡಿ ಸದಾ ಜೊತೆಯಲ್ಲೇ ಇರುತ್ತಾರೆ. ಕೊರೊನಾ ಲಾಕ್ ಡೌನ್ ಸಮಯದಲ್ಲಿ ಸುಸೇನ್ ಇಬ್ಬರು ಮಕ್ಕಳಿಗಾಗಿ ಹೃತಿಕ್ ರೋಷನ್ ಮನೆಯಲ್ಲೇ ವಾಸವಿದ್ದರು. ಈ ಬಗ್ಗೆ ಹೃತಿಕ್ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಬಹಿರಂಗ ಪಡಿಸಿದ್ದರು.


Click it and Unblock the Notifications











