ಹೃತಿಕ್ ರೋಷನ್ 'ಸೂಪರ್ 30' ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

ಬಾಲಿವುಡ್ ನ ಹ್ಯಾಂಡ್ ಸಮ್ ಹಂಕ್ ಹೃತಿಕ್ ರೋಷನ್ ಅಭಿನಯದ ಬಹು ನಿರೀಕ್ಷೆಯ 'ಸೂಪರ್ 30' ಚಿತ್ರದ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಬಾಲಿವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ 'ಸೂಪರ್ 30' ಚಿತ್ರ.

ಸದ್ಯ ರಿಲೀಸ್ ಗೆ ತಯಾರಿ ಮಾಡಿಕೊಳ್ಳುತ್ತಿದೆ 'ಸೂಪರ್ 30' ಸಿನಿಮಾ. ಸದ್ಯ ಬಾಲಿವುಡ್ ನಲ್ಲಿ ಕುತೂಹಲ ಕೆರಳಿಸಿರುವ 'ಸೂಪರ್ 30' ಚಿತ್ರದ ಟ್ರೈಲರ್ ಇದೆ ತಿಂಗಳು ತೆರೆಗೆ ಬರುತ್ತಿದೆ. ಹೌದು, ನಾಳೆ ಜೂನ್ 4ಕ್ಕೆ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿದೆ.

'ಕಾಬಿಲ್' ಚಿತ್ರದ ನಂತರ ಹೃತಿಕ್ ರೋಷನ್ ಅಭಿನಯದ ಚಿತ್ರಗಳು ತೆರೆಗೆ ಬಂದಿಲ್ಲ. ಹಾಗಾಗಿ ಹ್ಯಾಂಡ್ ಸಮ್ ಹಂಕ್ ನನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಾಗಾಗಿ 'ಸೂಪರ್ 30' ಚಿತ್ರದ ಮೇಲೆ ಭಾರಿ ನಿರೀಕ್ಷೆ ಮತ್ತು ಕಾತುರ ಮೂಡಿಸಿದೆ.

Hrithik Roshan starrer Super 30 film trailer will release on June 4th

ಈ ಬಗ್ಗೆ ಹೃತಿಕ್ ರೋಷನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಪೋಸ್ಟರ್ ಈಗಾಗಲೆ ಅಭಿಮಾನಿಗಳ ನಿದ್ದೆ ಗೆಡಿಸಿದೆ. ಈ ಚಿತ್ರದಲ್ಲಿ ಹೃತಿಕ್ ಗಣಿತ ಲೆಕ್ಚರ್ ಆಗಿ ಕಾಣಿಸಿಕೊಂಡಿದ್ದಾರೆ.

ಅಂದ್ಹಾಗೆ 'ಸೂಪರ್ 30' ಚಿತ್ರ ನೈಜ ಘಟನೆ ಆಧಾರಿತ ಸಿನಿಮಾ. ಚಿತ್ರಾಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ 'ಸೂಪರ್ 30' ಸಿನಿಮಾ ಜುಲೈನಲ್ಲಿ ತೆರೆಗೆ ಬರಲಿದೆ.

More from Filmibeat

English summary
Bollywood actor Hrithik Roshan starrer 'Super 30' film trailer will release on June 4th. This movie is set to be release in July.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X