200 ಕೋಟಿ ಪ್ರಕರಣ: ರೊಮ್ಯಾಂಟಿಕ್ ಫೋಟೊ ಬಗ್ಗೆ ಪತ್ರ ಬರೆದ ನಟಿ ಜಾಕ್ವೆಲಿನ್!
200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ಕೇಳಿ ಬಂದಿದೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜೊತೆಗೆ ಜಾಕ್ವೆಲಿನ್‌ಗೆ ಸಂಪರ್ಕವಿದೆ ಎನ್ನುವ ಕಾರಣಕ್ಕೆ ಜಾಕ್ವೆಲಿನ್ ಫರ್ನಾಂಡಿಸ್ ಮೇಲೂ ಅನುಮಾನ ಮೂಡಿದೆ. ಇತ್ತೀಚೆಗೆ ಇಬ್ಬರೂ ಆಪ್ತವಾಗಿದ್ದ ಫೋಟೋಗಳು ವೈರಲ್ ಆಗಿದ್ದವು. ಈಗ ಮತ್ತೊಂದು ಹೊಸ ಫೋಟೋ ಹೊರಬಿದ್ದಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರು ಆಪ್ತವಾಗಿ ಇರುವ ರೊಮ್ಯಾಂಟಿಕ್ ಪೋಟೋ ಒಂದು ಹೊರ ಬಂದಿದೆ. ಜಾಕ್ವೆಲಿನ್‌ಗೆ ಸುಕೇಶ್ ಮುತ್ತಿಡುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.
ಇಷ್ಟು ದಿನ ಏನೇ ಗಾಸಿಪ್ ಹಬ್ಬಿದರು ಸುಮ್ಮನೆ ಇದ್ದ ಜಾಕ್ವೆಲಿನ್, ಹೊಸ ಫೋಟೊ ಹೊರ ಬರುತ್ತಿದ್ದ ಹಾಗೆ, ಈ ಬಗ್ಗೆ ಮಾತನಾಡುತ್ತಿದ್ದಾರೆ. ಮೊದಲ ಬಾರಿಗೆ ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
"ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇಲ್ಲಿ ನನಗೆ ಹಲವಾರು ಸ್ನೇಹಿತರು ಇದ್ದಾರೆ. ಅದರಲ್ಲಿ ಮಾಧ್ಯಮದ ಸ್ನೇಹಿತರೂ ಸೇರಿದ್ದಾರೆ. ಅವರಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ. ಪ್ರಸ್ತುತ ಕಷ್ಟದ ದಿನಗಳನ್ನು ನೋಡುತ್ತಿದ್ದೇನೆ. ನನ್ನ ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಇದು ಅರ್ಥವಾಗುತ್ತದೆ ಎಂದು ಭಾವಿಸಿದ್ದೇನೆ. ನನ್ನ ವೈಯಕ್ತಿಕ ಫೋಟೋಗಳನ್ನು ಪ್ರಸಾರ ಮಾಡದಂತೆ ನಾನು ಕೋರುತ್ತಿದ್ದೇನೆ. ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಮಾಡುವುದಿಲ್ಲ, ಅದೇ ರೀತಿ ನನಗೂ ಈ ರೀತಿ ಮಾಡುವುದಿಲ್ಲ ಎಂದು ನನಗೆ ಖಾತ್ರಿಯಿದೆ. ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು" ಎಂದು ಜಾಕ್ವೆಲಿನ್ ಬರೆದುಕೊಂಡಿದ್ದಾರೆ.



Click it and Unblock the Notifications











