ವಂಚನೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾಗಲಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್

By ಫಿಲ್ಮಿಬೀಟ್ ಡೆಸ್ಕ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಾಲಿವುಡ್ ಖ್ಯಾತ ನಟಿ ಜಾಕ್ವೇಲಿನ್ ಫರ್ನಾಂಡಿಸ್ ಇಂದು (ಸೆಪ್ಟಂಬರ್ 25) ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಟಿ ಜಾಕ್ವೆಲಿನ್ ವಿಚಾರಣೆ ಎದುರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಸುಕೇಶ್ ಚಂದ್ರಶೇಖರ್ ಗೆ ಸಂಬಂಧ ಪಟ್ಟ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಅವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿದ್ದು, ಸೆಪ್ಟಂಬರ್ 25ರಂದು ಇಡಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ.

ಈ ಹಿಂದೆ ಆಗಸ್ಟ್ ನಲ್ಲಿ ಜಾಕ್ವೆಲಿನ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಜಾಕ್ವೆಲಿನ್ ಅವರನ್ನು ಪ್ರಶ್ನೆ ಮಾಡಲಾಗಿತ್ತು. ಇದೀಗ ಮತ್ತೊಂದು ಸುತ್ತಿನ ವಿಚಾರಣೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ. ವರದಿ ಪ್ರಕಾರ ನಟಿ ಜಾಕ್ವೆಲಿನ್ ಅವರಿಗೆ ಪ್ರಶ್ನೆಯನ್ನು ಪೂರ್ಣಗೊಳಿಸದ ಕಾರಣ ಮತ್ತೊಮೆ ವಿಚಾರಣೆಗೆ ಕರೆಯಲಾಗಿದೆ ಎನ್ನಲಾಗಿದೆ.

Jacqueline Fernandez will questioned by Enforcement Directorate today

ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿದೆ. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ.

ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಜೊತೆಗೆ ಇನ್ನು ಬೇರೆ ಸೆಲೆಬ್ರಿಟಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ನಟಿ, ಡಾನ್ಸರ್ ನೋರಾ ಫತೇಹಿ ಅವರಿಗೂ ನೋಟೀಸ್ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮೊದಲ ಬಾರಿಗೆ ಕನ್ನಡ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಸಿನಿಮಾ ಮೂಲಕ ಜಾಕ್ವೆಲಿನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಜಾಕ್ವೆಲಿನ್ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಸುದೀಪ್ ಜೊತೆ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜಾಕ್ವೆಲಿನ್ ಅವರನ್ನು ಸುದೀಪ್ ಜೊತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

More from Filmibeat

English summary
Bollywood Actress Jacqueline Fernandez will questioned by Enforcement Directorate today.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X