ಶೂಟಿಂಗ್ ವೇಳೆ ಗಾಯಗೊಂಡ ಶಾರುಖ್ ಖಾನ್: ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ

ಬಾಲಿವುಡ್ ನಟ ಶಾರುಖ್ ಖಾನ್ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಅವರಿಗೆ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗ್ತಿದೆ ಎಂದು ವರದಿಯಾಗಿದೆ. ಲಾಸ್‌ ಎಂಜಲ್ಸ್‌ನಲ್ಲಿ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದ್ದು ಕಿಂಗ್ ಖಾನ್ ಮೂಗಿಗೆ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಸಿಬ್ಬಂದಿ ಶಾರುಖ್ ಖಾನ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಆತಂಕಪಡುವ ಅಗತ್ಯ ಇಲ್ಲ ಎಂದಿದ್ದಾರೆ.

ಶಾರುಖ್‌ ಖಾನ್‌ಗೆ ಪೆಟ್ಟಾದ ಕೂಡಲೇ ಮೂಗಿನಿಂದ ರಕ್ತ ಸೋರಲು ಆರಂಭಿಸಿತು. ಕೂಡಲೇ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದರು ಎಂದು ಹೇಳಲಾಗುತ್ತಿದೆ. ರಕ್ತಸ್ರಾವ ನಿಲ್ಲಲು ಸಣ್ಣ ಶಸ್ತ್ರಚಿಕಿತ್ಸೆ ಅಗತ್ಯ ಎಂದು ವೈದ್ಯರು ಹೇಳಿದ್ದರು. ಶಸ್ತ್ರ ಚಿಕಿತ್ಸೆ ನಂತರ ಶಾರುಖ್ ಮೂಗಿಗೆ ಬ್ಯಾಂಡೇಜ್ ಹಾಕಲಾಗಿದ್ದು ಅವರು ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಫ್ಯಾಮಿಲಿ ಜೊತೆ ಮನೆಯಲ್ಲೇ ರೆಸ್ಟ್ ಮಾಡುತ್ತಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳಲ್ಲಿ ವರದಿಯಾಗಿದೆ.

Jawaan actor ShahRukh Khan got injured in US and had to undergo a minor surgery

ತಮ್ಮ 31 ವರ್ಷ ಸಿನಿಕರಿಯರ್‌ನಲ್ಲಿ ಶಾರುಖ್ ಖಾನ್ ಹಲವು ಬಾರಿ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಸಣ್ಣ ಪುಟ್ಟ ಶಸ್ತ್ರ ಚಿಕಿತ್ಸೆಗೂ ಒಳಗಾಗಿದ್ದರು. 'ರಯೀಸ್' ಶೂಟಿಂಗ್ ಸಮಯದಲ್ಲೂ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. 'ಚೆನ್ನೈ ಎಕ್ಸ್‌ಪ್ರೆಸ್' ಚಿತ್ರೀಕರಣ ಮುಗಿದ ನಂತರ ಶಾರುಖ್ 8ನೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಾರುಖ್ ಖಾನ್ 2009ರಲ್ಲಿ ಎಡಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.

'ಪಠಾಣ್' ಆಗಿ ಕಿಂಗ್‌ಖಾನ್ ಕಂಬ್ಯಾಕ್

4 ವರ್ಷಗಳ ಹಿಂದೆ 'ಜೀರೋ' ಸಿನಿಮಾ ಮಾಡಿ ಸೋತಿದ್ದ ಶಾರುಖ್ ಈ ವರ್ಷ 'ಪಠಾಣ್' ಆಗಿ ಗೆದ್ದಿದ್ದರು. ಸಿನಿಮಾ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಬರೆದಿತ್ತು. ಇದರ ಬೆನ್ನಲ್ಲೇ 'ಜವಾನ್' ಸಿನಿಮಾ ಕಾವು ಪಡೆದುಕೊಂಡಿದೆ. ತಮಿಳು ನಿರ್ದೇಶಕ ಅಟ್ಲಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ದಳಪತಿ ವಿಜಯ್, ದೀಪಿಕಾ ಪಡುಕೋಣೆ, ಸಂಜತ್ ದತ್ ಸೇರಿದಂತೆ ಘಟಾನುಘಟಿ ಕಲಾವಿದರು ಚಿತ್ರದಲ್ಲಿ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ.

ಆಡಿಯೋ ರೈಟ್ಸ್ ಮಾರಾಟ

'ಜವಾನ್' ಚಿತ್ರದ ಆಡಿಯೋ ರೈಟ್ಸ್‌ಗೆ ಭಾರೀ ಬೇಡಿಕೆ ಇತ್ತು. ಇದೀಗ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ 36 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗಿರುವ ಸುದ್ದಿ ಬಂದಿದೆ. ಆಡಿಯೋ ಹಕ್ಕುಗಳನ್ನು ಭಾರತದ ಖ್ಯಾತ ಆಡಿಯೋ ಸಂಸ್ಥೆಯಾದ ಟಿ-ಸೀರೀಸ್ ತನ್ನದಾಗಿಸಿಕೊಂಡಿದ್ದು, 36 ಕೋಟಿ ರೂ.ಗಳನ್ನು ಕೊಟ್ಟು ಹಕ್ಕುಗಳನ್ನು ಪಡೆದಿದೆ ಎಂದು ಹೇಳಲಾಗಿದೆ. ಚಿತ್ರಕ್ಕೆ ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ ಟ್ಯೂನ್ ಹಾಕಿದ್ದಾರೆ. ಈ ಚಿತ್ರದ ಮೂಲಕ ಅನಿರುದ್ಧ್ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಸೆಪ್ಟೆಂಬರ್ 7ಕ್ಕೆ ಸಿನಿಮಾ ರಿಲೀಸ್

ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ 'ಜವಾನ್' ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ನಿರ್ಮಿಸುತ್ತಿದ್ದಾರೆ. 'ಜವಾನ್' ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಹಳ ಅದ್ಧೂರಿಯಾಗಿ ಸಿನಿಮಾ ರಿಲೀಸ್ ಪ್ಲ್ಯಾನ್ ನಡೀತಿದೆ.

More from Filmibeat

English summary
Jawaan actor ShahRukh Khan got injured in US and had to undergo a minor surgery. He met with an accident In Los Angeles during a shoot. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X