ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಕಂಗನಾ ರಣೌತ್

ಮುಂಬೈ ಪೊಲೀಸ್ v/s ಕಂಗನಾ ರಣೌತ್ ಶೀಥಲ ಯುದ್ಧ ಶೀಘ್ರದಲ್ಲಿ ಮುಗಿಯುವ ಯಾವ ಲಕ್ಷಣವೂ ಕಾಣುತ್ತಿಲ್ಲ.

ಸಮಾಜದಲ್ಲಿ ಬಿರುಕು ಮೂಡಿಸುವ, ದ್ವೇಷ ಹುಟ್ಟಿಸುವ ಯತ್ನ ಆರೋಪದ ಮೇಲೆ ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದಾರೆ.

ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್‌ ಸಹ ಕಂಗನಾ ಹಾಗೂ ಸಹೋದರಿ ರಂಗೋಲಿಯನ್ನು ವಿಚಾರಣೆಗೆ ಒಳಪಡಿಸುವಂತೆ ಮುಂಬೈ ಪೊಲೀಸರಿಗೆ ಆದೇಶ ಹೊರಡಿಸಿತ್ತು.

 Kangana Moved To Bombay Highcourt To Squash FIR Filled Against Her

ಆದರೆ ವಿಚಾರಣೆಗೆ ಈ ವರೆಗೆ ಹಾಜರಾಗದ ಕಂಗನಾ, ಮುಂಬೈ ಪೊಲೀಸರ ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂಬೈ ಪೊಲೀಸರು ದಾಖಲಿಸುರುವ ಎಫ್‌ಐಆರ್ ಅನ್ನು ರದ್ದು ಮಾಡಬೇಕು ಎಂದು ಕಂಗನಾ ಹಾಗೂ ರಂಗೋಲಿ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೊತೆಗೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಆದೇಶವನ್ನೂ ಸಹ ರದ್ದು ಮಾಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದೆ.

ಕಂಗನಾ ರಣೌತ್ ಹಾಗೂ ಅವರ ಸಹೋದರಿ ರಂಗೋಲಿ ಅವರು ಸಮಾಜದಲ್ಲಿ ದ್ವೇಷ ಬಿತ್ತುವ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಲಿ ಸೈಯ್ಯದ್ ಎಂಬುವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದರು.

More from Filmibeat

English summary
Kangana Ranaut and Rangoli moved to Bombay high court to squash FIR filled by Mumbai police against them.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X