Just In
Don't Miss!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Automobiles
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಮುಂಬೈನಿಂದ ಶಿಮ್ಲಾಗೆ ಕೇಸ್ ವರ್ಗಾಯಿಸಿ': ಸುಪ್ರೀಂ ಮೊರೆ ಹೋದ ಕಂಗನಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ಕೋರ್ಟ್‌ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈ ಎಲ್ಲ ಕೇಸ್‌ಗಳನ್ನು ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಎಂದು ಸುಪ್ರೀಂಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ.
ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದಿರುವ ಆರೋಪದಡಿ ದಾಖಲಾಗಿರುವ ಕೇಸ್, ಜಾವಿದ್ ಅಖ್ತರ್ ಹೂಡಿರುವ ಮಾನನಷ್ಟ ಮೊಕದ್ದಮೆ ಕೇಸ್ ಸೇರಿದಂತೆ ಹಲವು ಕೇಸ್‌ಗಳು ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ವಿರುದ್ಧ ದಾಖಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳು ಕ್ಷುಲ್ಲಕ ಹಾಗೂ ತಮಗೆ ಕಿರುಕುಳ ನೀಡುವ ದುರುದ್ದೇಶ ಹೊಂದಿದೆ. ಮತ್ತು ಸಾರ್ವಜನಿಕ ತಮ್ಮ ವ್ಯಕ್ತಿತ್ವ ಕೆಡಿಸುವ ದುರುದ್ದೇಶದಿಂದ ಕೂಡಿದೆ ಎಂದು ಕಂಗನಾ ಮತ್ತು ರಂಗೋಲಿ ಆರೋಪಿಸಿದ್ದಾರೆ.
ರೈತ ವಿರೋಧಿ ಟ್ವೀಟ್: ರಾಜ್ಯ ಹೈಕೋರ್ಟ್‌ನಲ್ಲಿ ಕಂಗನಾಗೆ ಹಿನ್ನಡೆ
ದೇಶದ ನ್ಯಾಯಾಲಯಗಳ ಬಗ್ಗೆ ಅತ್ಯಂತ ನಂಬಿಕೆ ಮತ್ತು ಗೌರವವಿದ್ದರೂ, ಮುಂಬೈನಲ್ಲಿ ಪ್ರಕರಣಗಳ ವಿಚಾರಣೆ ಮುಂದುವರಿದರೆ ನಟಿ ಹಾಗೂ ಅವರ ಸಹೋದರಿಗೆ ಜೀವ ಮತ್ತು ಆಸ್ತಿಗೆ ಬೆದರಿಕೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
"ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಅರ್ಜಿದಾರರಿಗೆ (ಕಂಗನಾ ಹಾಗೂ ರಂಗೋಲಿ) ಕಿರುಕುಳ ನೀಡುತ್ತಿದೆ'' ಎಂದು ವಕೀಲ ನೀರಜ್ ಶೇಖರ್ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಅಂದ್ಹಾಗೆ, ನಟಿ ಕಂಗನಾ ರಣಾವತ್ ಮೂಲತಃ ಹಿಮಾಚಲ ಪ್ರದೇಶದವರು. ಹಾಗಾಗಿ, ತಮ್ಮದೇ ರಾಜ್ಯದಲ್ಲಿ ಈ ಕೇಸ್ ಮುನ್ನಡೆಸಲು ನಿರ್ಧರಿಸಿದ್ದು, ಮುಂಬೈನಿಂದ ಶಿಮ್ಲಾಗೆ ವರ್ಗಾಯಿಸಿ ಎಂದು ಕೇಳಿಕೊಂಡಿದ್ದಾರೆ.