twitter
    For Quick Alerts
    ALLOW NOTIFICATIONS  
    For Daily Alerts

    ಕಂಗನಾ ರಣಾವತ್ 'ತಲೈವಿ' ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕೆ ಎದುರಾಗಿದೆ ಸಮಸ್ಯೆ

    |

    ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಬಹುನಿರೀಕ್ಷೆಯ ಜಯಲಲಿತಾ ಬಯೋಪಿಕ್ 'ತಲೈವಿ' ಚಿತ್ರೀಕರಣಕ್ಕೆ ತೊಂದರೆ ಎದುರಾಗಿದೆ. ಲಾಕ್ ಡೌನ್ ಬಳಿಕ 'ತಲೈವಿ' ಸಿನಿಮಾತಂಡ ಮತ್ತೆ ಚಿತ್ರೀಕರಣ ಪ್ರಾರಂಭಮಾಡಿದ್ದು, ಈಗಾಗಲೇ ಒಂದು ಶೆಡ್ಯೂಲ್ ಅನ್ನು ಯಶಸ್ವಿಯಾಗಿ ಮುಗಿಸಿದ್ದಾರೆ.

    ನಟಿ ಕಂಗನಾ ರಣಾವತ್ 7 ತಿಂಗಳ ಬಳಿಕ ಚಿತ್ರೀಕರಣದಲ್ಲಿ ಹಾಜರಾಗಿದ್ದು, ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಖುಷಿ ಹಂಚಿಕೊಂಡಿದ್ದರು. ಆದರೀಗ ಚಿತ್ರತಂಡ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕೆ ತೊಂದರೆ ಎದುರಿಸುತ್ತಿದೆ. ಕೊರೊನಾ ವೈರಸ್ ಮಧ್ಯೆ ಚಿತ್ರೀಕರಣ ಪ್ರಾಂಭಮಾಡಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಚಿತ್ರೀಕರಣ ಮಾಡುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿದೆ.

    ರೈತ ವಿರೋಧಿ ಹೇಳಿಕೆ: ಕಂಗನಾ ವಿರುದ್ಧ FIR ದಾಖಲಿಸಲು ತುಮಕೂರು ಕೋರ್ಟ್ ಆದೇಶರೈತ ವಿರೋಧಿ ಹೇಳಿಕೆ: ಕಂಗನಾ ವಿರುದ್ಧ FIR ದಾಖಲಿಸಲು ತುಮಕೂರು ಕೋರ್ಟ್ ಆದೇಶ

    ಹೌದು, ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಸುಮಾರು 350ಕ್ಕು ಹೆಚ್ಚು ಜನ ಇರಬೇಕಂತೆ. ಆದರೀಗ ಸಾಮಾಜಿಕ ಅಂತರದ ಕಾರಣ ಇಷ್ಟು ಜನರನ್ನು ಚಿತ್ರೀಕರಣದಲ್ಲಿ ಸೇರಿಸುವ ಹಾಗಿಲ್ಲ. ಹಾಗಾಗಿ ಈ ಸಮಯದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡುವುದು ಅಸಾಧ್ಯವಾಗಿದೆ. ಪರಿಸ್ಥಿತಿ ಸುಧಾರಿಸುವವರೆಗೂ ಕ್ಲೈಮ್ಯಾಕ್ಸ್ ಚಿತ್ರೀಕರಣ ನಿಲ್ಲಿಸುವ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ.

    Kangana Ranaut’s Thalaivi makers find it difficult to shoot the climax due to COVID-19

    ಈಗಾಗಲೇ ಚಿತ್ರೀಕರಣ ಬಹುತೇಕ ಮುಗಿಯುತ್ತ ಬಂದಿದೆ. 15 ದಿನಗಳ ಚಿತ್ರೀಕರಣ ಬಾಕಿಯಿದೆಯಂತೆ. ಮುಂದಿನ ಹಂತದ ಚಿತ್ರೀಕರಣವನ್ನು ಮಾಡಲು ಸಿನಿಮಾತಂಡ ಪ್ಲಾನ್ ಮಾಡುತ್ತಿದೆಯಂತೆ. ತಲೈವಿ ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜೀವನಚರಿತ್ರೆ, ತಮಿಳು ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

    Recommended Video

    ನಾನು ತುಂಬಾ ಸಿಂಪಲ್ ಅಂತ ಮತ್ತೆ ಪ್ರೂವ್ ಮಾಡಿದ Shivanna | Filmibeat Kannada

    ಈ ಚಿತ್ರಕ್ಕಾಗಿ ಕಂಗನಾ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಸುಮಾರು 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ಲುಕ್ ಅನ್ನು ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರಕ್ಕೆ ಎ.ಎಲ್ ವಿಜಯ್ ಆಕ್ಷಯ್ ಕಟ್ ಹೇಳುತ್ತಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

    English summary
    Bollywood Actress Kangana Ranaut’s Thalaivi makers find it difficult to shoot the climax due to COVID-19.
    Tuesday, October 13, 2020, 9:37
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X