For Quick Alerts
  ALLOW NOTIFICATIONS  
  For Daily Alerts

  ಬೆಳ್ಳಂಬೆಳಗ್ಗೆ ಪುರಿ ಜಗನ್ನಾಥನ ದರ್ಶನ ಪಡೆದ ನಟಿ ಕಂಗನಾ ರಣಾವತ್

  |

  ಬಾಲಿವುಡ್ ನಟಿ ಕಂಗನಾ ರಣಾವತ್ ಒಂದಲ್ಲೊಂದು ವಿಚಾರದ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಳಿಗಿಂತ ಹೆಚ್ಚಾಗಿ ಸದಾ ವಿವಾದಗಳ ಮೂಲಕವೇ ಸದ್ದು ಮಾಡುತ್ತಿರುವ ನಟಿ ಕಂಗನಾ ಸದ್ಯ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಧಾಕಡ್ ಮತ್ತು ತೇಜಸ್ ಚಿತ್ರಗಳಿಗಾಗಿ ಕಂಗನಾ ಸಾಕಷ್ಟು ಕಸರತ್ತು ಮಾಡುತ್ತಿದ್ದಾರೆ.

  ಸದ್ಯ ಧಾಕಡ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ನಡುವೆಯೂ ಕಂಗನಾ ಒಡಿಶಾದ ಪ್ರಸಿದ್ಧ ಪುರಿ ಜಗನ್ನಾಥ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಜಗನ್ನಾಥನ ದರ್ಶನ ಪಡೆದ ಬಳಿಕ ಕಂಗನಾ ಕಂಗನಾ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.

  ಕಂಗನಾ ಸಿನಿಮಾ ವಿರೋಧಿಸಿದ ಶಾಸಕನ ಕಚೇರಿ ಮೇಲೆ ಐಟಿ ದಾಳಿ

  ನಟಿ ಕಂಗನಾ ದೇವರನ್ನು ಆಪರವಾಗಿ ನಂಬುತ್ತಾರೆ. ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇದೀಗ ಜಗನ್ನಾಥನ ದರ್ಶನ ಪಡೆದು ಧನ್ಯರಾಗಿದ್ದಾರೆ. ಬಿಳಿ ಬಣ್ಣದ ಗ್ರ್ಯಾಂಡ್ ಡ್ರೆಸ್ ಧರಿಸಿದ್ದ ಕಂಗನಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಫೋಟೋವನ್ನು ಶೇರ್ ಮಾಡಿ ಕಂಗನಾ, 'ನಾವು ಯಾವಾಗಲು ಕೃಷ್ಣನನ್ನು ರಾಧಾ ಅಥವಾ ರುಕ್ಮಣಿ ಜೊತೆ ನೋಡುತ್ತೇವೆ. ಆದರೆ ಪುರಿಯಲ್ಲಿ ಶ್ರೀಕೃಷ್ಣನು ತನ್ನ ಒಡಹುಟ್ಟಿದವರಾದ ಬಲರಾಮ ಮತ್ತು ಸುಭದ್ರಾ ಜೊತೆ ಇದ್ದಾನೆ' ಎಂದು ಬರೆದುಕೊಂಡಿದ್ದಾರೆ.

  ಸದ್ಯ ಕಂಗನಾ ಧಾಕಡ್ ಸಿನಿಮಾದಲ್ಲಿ ನಟಿಸುತ್ತಿದ್ದು, ಮಧ್ಯಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರದಲ್ಲಿ ಕಂಗನಾ ಏಜೆಂಟ್ ಅಗ್ನಿಯಾಗಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಫಸ್ಟ್ ಲುಕ್ ಶೇರ್ ಮಾಡಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹಿನಿರೀಕ್ಷೆಯ ಸಿನಿಮಾ ಮುಂದಿನ ವರ್ಷ ಅಕ್ಟೋಬರ್ 2ಕ್ಕೆ ತೆರೆಗೆ ಬರುತ್ತಿದೆ.

  English summary
  Bollywood Actress Kangana Ranaut visits puri jagannath temple in Odisha.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X