For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್ ಸಿನಿಮಾದಲ್ಲಿ ಪ್ರಭಾಸ್: 'ಬಾಹುಬಲಿ' ನಟನಿಗೆ ಜೋಡಿಯಾದ ಸ್ಟಾರ್ ನಟಿ

  |

  ಟಾಲಿವುಡ್ ಖ್ಯಾತ ನಟ ಪ್ರಭಾಸ್ ಸದ್ಯ ಆದಿಪುರುಷ್ ಮತ್ತು ಸಲಾರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಏಕಕಾಲಕ್ಕೆ ಎರಡು ಸಿನಿಮಾಗಳ ಚಿತ್ರೀಕರಣದಲ್ಲಿ ನಿತರಾಗಿರುವ ಪ್ರಭಾಸ್ ಬಳಿ ನಿರ್ದೇಶಕ ನಾಗ್ ಅಶ್ವಿನ್ ಅವರ ಸಿನಿಮಾ ಕೂಡ ಇದೆ. ಸದ್ಯದಲ್ಲೇ ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲೂ ಭಾಗಿಯಾಗಲಿದ್ದಾರೆ.

  ಈ ನಡುವೆ ಪ್ರಭಾಸ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ಸ್ಟಾರ್ ಪ್ರಭಾಸ್ ಹಿಂದಿ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಪ್ರಭಾಸ್ ಬಾಲಿವುಡ್ ನ ಖ್ಯಾತ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

  ಕೊರೊನಾ ನಡುವೆಯೂ ಪ್ರಭಾಸ್ 'ರಾಧೆ ಶ್ಯಾಮ್' ಓವರ್ ಸೀಸ್ ರೈಟ್ಸ್ ದಾಖಲೆ ಬೆಲೆಗೆ ಮಾರಾಟಕೊರೊನಾ ನಡುವೆಯೂ ಪ್ರಭಾಸ್ 'ರಾಧೆ ಶ್ಯಾಮ್' ಓವರ್ ಸೀಸ್ ರೈಟ್ಸ್ ದಾಖಲೆ ಬೆಲೆಗೆ ಮಾರಾಟ

  ಸಿದ್ಧಾರ್ಥ್ ಪ್ರಭಾಸ್ ಗಾಗಿ ಈಗಾಗಲೇ ಕಥೆ ಬರೆದಿದ್ದು, ಪ್ರಭಾಸ್ ಗೆ ಹೇಳಿದ್ದಾರಂತೆ. ಕಥೆ ಕೇಳಿ ಥ್ರಿಲ್ ಆಗಿರುವ ಪ್ರಭಾಸ್ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸದ್ಯದಲ್ಲೇ ಹೊಸ ಸಿನಿಮಾ ಅನೌನ್ಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ.

  ಇನ್ನು ವಿಶೇಷ ಎಂದರೆ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಕಾಣಿಸಿಕೊಳ್ಳಲಿದ್ದಾರಂತೆ. ಸಿದ್ಧಾರ್ಥ್ ಆನಂದ್ ಜೊತೆ ಬ್ಯಾಂಗ್ ಬ್ಯಾಂಗ್ ಚಿತ್ರದಲ್ಲಿ ಕೆಲಸ ಮಾಡಿದ್ದ ಕತ್ರಿನಾ, ಮತ್ತೆ ಪ್ರಭಾಸ್ ಜೊತೆಗಿನ ಚಿತ್ರಕ್ಕಾಗಿ ಸಿದ್ಧಾರ್ಥ್ ಆನಂದ್ ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ.

  ಅನುಷ್ಕ ಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ವಿರಾಟ್ ಕೊಹ್ಲಿ | Filmibeat Kannada

  ಸಿದ್ಧಾರ್ಥ್ ಆನಂದ್ ಸದ್ಯ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಬಳಿಕ ಪ್ರಭಾಸ್ ಜೊತೆ ಸಿನಿಮಾ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಇಬ್ಬರ ಸಿನಿಮಾದ ಬಗ್ಗೆ ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳು ಸಾಧ್ಯತೆ ಇದೆ.

  English summary
  Bollywood Actress Katrina Kaif to romance Prabhas in Siddharth Anand's next film.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X