ಪ್ರಭಾಸ್ 'ಅದಿಪುರುಷ್' ಸಿನಿಮಾಗೆ ನಾಯಕಿ ಫಿಕ್ಸ್; ಯಾರಾಗ್ತಿದ್ದಾರೆ ಸೀತೆ?

ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಅಭಿನಯದ ಆದಿಪುರುಷ್ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಚಿತ್ರ ಸೆಟ್ಟೇರುವ ಮೊದಲೇ ಟಾಲಿವುಡ್ ನಿಂದ ಬಾಲಿವುಡ್ ವರೆಗು ಸದ್ದು ಮಾಡುತ್ತಿರುವ ಆದಿಪುರುಷ್ ಸಿನಿಮಾಗೆ ನಾಯಕಿಯಾರಾಗಲಿದ್ದಾರೆ ಎನ್ನುವ ಚರ್ಚೆ ಅನೇಕ ದಿನಗಳಿಂದ ನಡೆಯುತ್ತಿದೆ. ಬಾಹುಬಲಿ ಪ್ರಭಾಸ್ ಜೊತೆ ಯಾರು ನಟಿಸಲಿದ್ದಾರೆ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿತ್ತು.

ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ. ಆದಿಪುರುಷ್ ಸಿನಿಮಾದಲ್ಲಿ ನಾಯಕಿಯಾಗಿ ಬಾಲಿವುಡ್ ನ ಖ್ಯಾತ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿ, ಅನುಷ್ಕಾ ಶರ್ಮಾ, ಕೀರ್ತಿ ಸುರೇಶ್ ಸೇರಿದಂತೆ ಅನೇಕರ ಹೆಸರು ಕೇಳಿಬರುತ್ತಿತ್ತು. ಆದರೀಗ ಆದಿಪುರುಷ್ ಸಿನಿಮಾದಲ್ಲಿ ನಾಯಕಿಯಾಗಿ ಕೃತಿ ಸನೂನ್ ಹೆಸರು ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಮುಂದೆ ಓದಿ..

ಪ್ರಭಾಸ್ ಗೆ ಸೀತೆಯಾದ ಕೃತಿ

ಪ್ರಭಾಸ್ ಗೆ ಸೀತೆಯಾದ ಕೃತಿ

ಅದಿಪುರುಷ್ ಸಿನಿಮಾ ಪಾತ್ರಗಳ ಆಯ್ಕೆ, ಬಜೆಟ್ ಸೇರಿದಂತೆ ಅನೇಕ ವಿಚಾರಗಳ ಮೂಲಕ ಚಿತ್ರಾಭಿಮಾನಿಗಳ ಗಮನ ಸೆಳೆಯುತ್ತಿದೆ. ಇದೀಗ ನಾಯಕಿ ಫಿಕ್ಸ್ ಆಗಿದ್ದು ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಅಂದಹಾಗೆ ನಟಿ ಕೃತಿ ಸನೂನ್ ಸಿನಿಮಾದಲ್ಲಿ ಸೀತೆಯಾಗಿ ನಟಿಸಲಿದ್ದಾರೆ.

ರಾಮನ ಪಾತ್ರದಲ್ಲಿ ಪ್ರಭಾಸ್

ರಾಮನ ಪಾತ್ರದಲ್ಲಿ ಪ್ರಭಾಸ್

ನಟ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಭಾಸ್ ಗೆ ಜೋಡಿಯಾಗಿ ಕೃತಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಕೃತಿ ಪ್ರಭಾಸ್ ಜೊತೆ ತೆರೆಹಂಚಿಕೊಳ್ಳುತ್ತಿದ್ದು, ಚಿತ್ರದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದಾರೆ. ಚಿತ್ರದಲ್ಲಿ ರಾವಣನಾಗಿ ಖ್ಯಾತ ನಟ ಸೈಫ್ ಅಲಿ ಖಾನ್ ಕಾಣಿಸಿಕೊಳ್ಳುತ್ತಿದ್ದಾರೆ.

ಜನವರಿಯಲ್ಲಿ ಸೆಟ್ಟೇರುವ ಸಾಧ್ಯತೆ

ಜನವರಿಯಲ್ಲಿ ಸೆಟ್ಟೇರುವ ಸಾಧ್ಯತೆ

ಆದಿಪುರುಷ್ ಸಿನಿಮಾ ಮುಂದಿನ ವರ್ಷ ಜನವರಿಯಲ್ಲಿ ಸೆಟ್ಟೇರುವ ಸಾಧ್ಯತೆ ಇದೆ. ಓಂ ರಾವತ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಆದಿಪುರುಷ್ ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸ ಮುಗಿಸಿದ್ದು, ಚಿತ್ರೀಕರಣಕ್ಕೆ ಹೊರಡಲು ಸಿದ್ಧವಾಗಿದೆ. ಚಿತ್ರದಲ್ಲಿ ಹೆಚ್ಚು ವಿ ಎಫ್ ಎಕ್ಸ್ ದೃಶ್ಯಗಳು ಇರಲಿದ್ದು, ಅಂತರಾಷ್ಟ್ರೀಯ ಮಟ್ಟದ ವಿ ಎಕ್ಸ್ ಎಫ್ ತಂತ್ರಜ್ಞರು ಕೆಲಸ ಮಾಡಲಿದ್ದಾರಂತೆ.

Recommended Video

ಆತ ನನ್ನ ಯಜಮಾನರ ಮಗ ಎಂದ ಜಗ್ಗೇಶ್ | Filmibeat Kannada
ಕೃತಿ ಸನೂನ್ ಬಳಿ ಇರುವ ಸಿನಿಮಾಗಳು

ಕೃತಿ ಸನೂನ್ ಬಳಿ ಇರುವ ಸಿನಿಮಾಗಳು

ಕೃತಿ ಸನೂನ್ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಜ್ ಕುಮಾರ್ ರಾವ್ ನಟನೆಯ ಹಮ್ ದೋ ಹಮಾರೆ ದೋ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಅಕ್ಷಯ್ ಕುಮಾರ್ ಜೊತೆ ಬಚ್ಚನ್ ಪಾಂಡೆ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ಆದಿಪುರುಷ್ ಸಿನಿಮಾದಲ್ಲೂ ನಟಿಸಲಿದ್ದಾರೆ.

More from Filmibeat

English summary
Bollywood Actress Kriti Sanon to play Sita in Prabhas, Saif Ali Khan starrer Adipurush.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X