Don't Miss!
- News
ಬಿಬಿಎಂಪಿಯಿಂದ ಫೆಬ್ರುವರಿ. 2 ರಿಂದ 5 ರವರೆಗೆ 'ಖಾತಾ ಮೇಳ' ಆಯೋಜನೆ
- Lifestyle
ಈ ಚಿಕ್ಕ ಬದಲಾವಣೆ ಮಾಡಿದರೆ ಸಾಕು ತೂಕ ಕಡಿಮೆಯಾಗುವುದು
- Sports
ಟೆಸ್ಟ್ ಕ್ರಿಕೆಟ್ನಲ್ಲಿ ಈತನಿಗೆ ಅವಕಾಶ ಸಿಕ್ಕರೆ ಶತಕ, ದ್ವಿಶತಕ ಬಾರಿಸುತ್ತಾನೆ; ಸುರೇಶ್ ರೈನಾ
- Technology
WhatsApp: ವಾಟ್ಸಾಪ್ ಮ್ಯಾಕ್ಒಎಸ್ MacOS ಆ್ಯಪ್ ಬಿಡುಗಡೆ! ಇದನ್ನು ಬಳಸುವುದು ಹೇಗೆ?
- Finance
Budget 2023: ಹಲ್ವಾ ಸಮಾರಂಭ ಎಂದರೇನು, ಪ್ರಾಮುಖ್ಯತೆಯೇನು?
- Automobiles
ಬೊಲೆರೊ ನಿಯೋ ಲಿಮಿಟೆಡ್ ಎಡಿಷನ್ ಕುರಿತ ಟಾಪ್ ವಿಷಯಗಳಿವು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಲತಾ ಮಂಗೇಶ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿ
ಭಾರತದ ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್ ಕಳೆದ 28 ದಿನಗಳಿಂದಲೂ ಆಸ್ಪತ್ರೆಯಲ್ಲಿದ್ದು, ಅವರ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಾಣಿಸಿಕೊಂಡಿದೆ. ಕೋವಿಡ್ ಕಾರಣದಿಂದಾಗಿ ಜನವರಿ 08 ರಂದು ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಲತಾ ಮಂಗೇಶ್ಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಲತಾ ಅವರಿಗೆ ಕೋವಿಡ್ ಜೊತೆಗೆ ನ್ಯುಮೋನಿಯಾ ಸಹ ಆಗಿದ್ದು ವೈದ್ಯರಿಗೆ ಆತಂಕ ತಂದಿತ್ತು.
ಆದರೆ ಇದೀಗ, ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಪ್ರತೀಕ್ ಸಮ್‌ಧಾನಿ ಹೇಳಿರುವಂತೆ, ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ದೊಡ್ಡ ಚೇತರಿಕೆ ಕಾಣಿಸಿಕೊಂಡಿದೆ. ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಹಾಗೂ ನ್ಯುಮೋನಿಯಾ ಎರಡೂ ಸಹ ಗುಣವಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಇದ್ದ ಆತಂಕ ದೂರವಾಗಿದೆ.
ಕೆಲವು ದಿನಗಳ ಹಿಂದೆ ಮಾತನಾಡಿದ್ದ ವೈದ್ಯ ಪ್ರತೀಕ್ ಸಮ್‌ಧಾನಿ ಆಗಲೂ ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿರುವುದಾಗಿ ಹೇಳಿದ್ದರು. ಲತಾ ಅವರಿಗೆ ನೀಡಲಾಗಿದ್ದ ವೆಂಟಿಲೇಟರ್ ಬೆಂಬಲವನ್ನು ತೆಗೆದು ಸಹಜವಾಗಿ ಉಸಿರಾಡುವಂತೆ ಮಾಡಲಾಗಿದೆ, ಕೆಲವೇ ದಿನಗಳಲ್ಲಿ ಅವರ ಆರೋಗ್ಯ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದಿದ್ದರು. ಅಂತೆಯೇ ಲತಾ ಅವರು ಮೊದಲಿನ ಸ್ಥಿತಿಗೆ ನಿಧಾನಕ್ಕೆ ಮರಳುತ್ತಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಹಾಗೂ ನ್ಯುಮೋನಿಯಾ ಗುಣವಾಗುತ್ತಿದ್ದಂತೆ ಲತಾ ಅವರ ತಂಡವು ಟ್ವೀಟ್ ಮಾಡಿದ್ದು, ''ಲತಾ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಈ ಸಮಯದಲ್ಲಿ ಯಾರೂ ಸಹ ಸುಳ್ಳು ಸಂದೇಶಗಳನ್ನು ಪ್ರಸಾರ ಮಾಡಬೇಡಿ. ದೀದಿ ಶೀಘ್ರದಲ್ಲಿಯೇ ಮನೆಗೆ ಮರಳಲಿದ್ದಾರೆ'' ಎಂದಿದ್ದಾರೆ.
ಲತಾ ಮಂಗೇಶ್ಕರ್ 2019ರಲ್ಲಿಯೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. 2019ರ ನವೆಂಬರ್‌ನಲ್ಲಿ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಲತಾ ಮಂಗೇಶ್ಕರ್ ಅವರ ಸಹೋದರಿ ವೈರಲ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದರು. 2021ರ ಸೆಪ್ಟೆಂಬರ್ ತಿಂಗಳಲ್ಲಿ ಲತಾ ಮಂಗೇಶ್ಕರ್ 92ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೇವಲ ಆಪ್ತರಿಗಷ್ಟೇ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದರು.
ಗಾಯಕಿ ಲತಾ ಮಂಗೇಶ್ಕರ್, ಸೆಪ್ಟೆಂಬರ್ 28, 1929ರಲ್ಲಿ ಜನಿಸಿದರು. ಭಾರತದ ಹಲವು ಭಾಷೆಗಳಲ್ಲಿ ಲತಾ ಮಂಗೇಶ್ಕರ್ ಅವರು ಹಾಡಿದ್ದಾರೆ. ಹಿಂದಿ ಭಾಷೆಯಲ್ಲಿ ಅತೀ ಹೆಚ್ಚು ಹಾಡುಗಳನ್ನು ಹಾಡಿರುವ ಗಾಯಕಿ ಕನ್ನಡದಲ್ಲಿಯೂ ಒಂದು ಹಾಡನ್ನು ಹಾಡಿದ್ದಾರೆ. 1967ರಲ್ಲಿ ತೆರೆಕಂಡ 'ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ' ಸಿನಿಮಾದಲ್ಲಿ 'ಬೆಳ್ಳನೆ ಬೆಳಗಾಯಿತು' ಎಂಬ ಹಾಡನ್ನು ಹಾಡಿದ್ದಾರೆ. ಇದು ಲತಾ ಮಂಗೇಶ್ಕರ್ ಕನ್ನಡದಲ್ಲಿ ಹಾಡಿದ ಏಕೈಕ ಹಾಡು.