Don't Miss!
- Sports
ಆಕ್ಯುಪ್ರೆಶರ್ ಚಿಕಿತ್ಸೆ ಪಡೆಯುತ್ತಿರುವ ಚಿತ್ರವನ್ನು ಹಂಚಿಕೊಂಡ ಶ್ರೇಯಸ್ ಅಯ್ಯರ್
- Technology
ಅತಿ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್ವಾಚ್ ಪರಿಚಯಿಸಿದ ಫೈರ್ಬೋಲ್ಟ್ !
- News
ಬೆಂಗಳೂರು: ಖಾದಿ ಗ್ರಾಮೋದ್ಯೋಗ ಸಂಸ್ಥೆಗೆ ಆರ್ಥಿಕ ಬಲ ತುಂಬಲಿದ್ದೇವೆ: ಸಿಎಂ ಬೊಮ್ಮಾಯಿ
- Lifestyle
ನಿಮ್ಮ ಗಂಡ 'ಅಮ್ಮನ ಮಗ'ವಾಗಿರುವುದರಿಂದ ತುಂಬಾನೇ ಸಮಸ್ಯೆ ಆಗುತ್ತಿದೆಯೇ?
- Finance
ಆಧಾರ್ ಕಾರ್ಡ್ ಸುರಕ್ಷತೆಗಾಗಿ ಯುಐಡಿಎಐ ನೂತನ ನಿಯಮ ತಿಳಿಯಿರಿ!
- Automobiles
ಕೈಗೆಟುಕುವ ಬೆಲೆಯಲ್ಲಿ ಮತ್ತೊಂದು ಎಸ್ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮಾರುತಿ ಸುಜುಕಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತ್ಯ ಸಂಸ್ಕಾರ: 2 ದಿನ ಶೋಕಾಚರಣೆ
ಭಾರತ ರತ್ನ, ಭಾರತದ ನೈಟಿಂಗೇಲ್, ಲತಾ ಮಂಗೇಶ್ಕರ್ ಜನವರಿ 8ರಂದು ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕೊರೊನಾದಿಂದ ಮುಕ್ತರಾಗಿದ್ದರೂ, ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸುಧಾರಿಸಲಿಲ್ಲ. ಕಳೆದೆರಡು ದಿನಗಳಿಂದ ಲತಾ ಮಂಗೇಶ್ಕರ್ ಆರೋಗ್ಯ ಮತ್ತೆ ಗಂಭೀರ ಎನ್ನಲಾಗಿತ್ತು. ಆದರೆ, ಭಾರತ ರತ್ನ ಲತಾ ಮಂಗೇಶ್ಕರ್‌ಗೆ ಚಿಕಿತ್ಸೆ ಫಲಿಸದೆ ಇಂದು ( ಫೆಬ್ರವರಿ 6) ಕೊನೆಯುಸಿರೆಳೆದಿದ್ದಾರೆ.
92 ವರ್ಷದ ಗಾಯಕಿಗೆ ಕೊರೊನಾ ಸೋಂಕು ಧೃಡಪಟ್ಟ ಸಂಗತಿ ಹೊರ ಬಿದ್ದಾಗಲೇ ಸಂಗೀತ ಪ್ರಿಯರು ಹಾಗೂ ಬಾಲವುಡ್ ಮಂದಿಯಲ್ಲಿ ಆತಂಕದ್ದರು. ಲತಾ ಮಂಗೇಶ್ಕರ್ ಬೇಗನೇ ಗುಣಮುಖರಾಗಿ ಹೊರಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದರು. ಆದರೆ, ಅಪಾರ ಅಭಿಮಾನಿ ಬಳಗವನ್ನು ಲತಾ ಮಂಗೇಶ್ಕರ್ ಅಗಲಿದ್ದು, ಇವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನದ ಇಡಲು ವ್ಯವಸ್ಥೆ ಮಾಡಲಾಗಿದೆ.

ಮನೆ ತಲುಪಲಿರುವ ಲತಾ ಮಂಗೇಶ್ಕರ್ ಪಾರ್ಥೀವ ಶರೀರ
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಬೆಳಗ್ಗೆ 11 ಗಂಟೆಯಿಂದ 2.30ರೊಳಗೆ ತರಲಾಗುತ್ತದೆ. ಕುಟುಂಬಸ್ಥರು ಸಂಪ್ರದಾಯಕ್ಕೆ ತಕ್ಕಂತೆ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ವೇಳೆ ಬಾಲಿವುಡ್ ತಾರೆಯರು ಮನೆಯಲ್ಲಿಯೇ ಅಂತಿಮ ದರ್ಶನ ಪಡೆಯುವ ಸಾಧ್ಯತೆಯಿದೆ.

ಗಾಯಕಿ ನಿಧನಕ್ಕೆ 2 ದಿನ ಶೋಕಾಚರಣೆ
ಲತಾ ಮಂಗೇಶ್ಕರ್ ಅಪಾರ ಸಂಗೀತದ ಅಭಿಮಾನಿಗಳನ್ನು ಅಗಲಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿದ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ಕಾರ ಮುಂದಾಗಿದೆ. ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆ ಸರ್ಕಾರ ಎರಡು ದಿನ ಶೋಕಾಚರಣೆಗೆ ಆದೇಶ ಹೊರಡಿಸಿದೆ. ಈ ಮೂಲಕ ಏಳು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ ಲತಾ ಮಂಗೇಶ್ಕರ್ ಅವರಿಗೆ ಗೌರವ ಸಲ್ಲಿಸಲು ಸರ್ಕಾರ ಮುಂದಾಗಿದೆ.

ಶಿವಾಜಿ ಪಾರ್ಕ್‌ನಲ್ಲಿ ಅಂತ್ಯ ಸಂಸ್ಕಾರ
ಲೆಜೆಂಡರಿ ಸಿಂಗರ್ ಲತಾ ಮಂಗೇಶ್ಕರ್ ಅವರ ಅಂತ್ಯ ಸಂಸ್ಕಾರವನ್ನು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದೆ. ಅಲ್ಲಿವರೆಗೂ ಲತಾ ಮಂಗೇಶ್ಕರ್ ಮನೆಯಲ್ಲಿಯೇ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಈ ವೇಳೆ ಚಿತ್ರರಂಗದ ಗಣ್ಯರು, ರಾಜಕೀಯ ಸೇರಿದಂತೆ ಹಲವು ಗಣ್ಯರು, ಪ್ರಮುಖ ಭಾರತ ರತ್ನಾ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನವನ್ನು ಪಡೆಯಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ನಿಧನ
ಬಾಲಿವುಡ್ ಗಾಯಕಿ ಲತಾ ಮಂಗೇಶ್ಕರ್ ಕೊರೊನಾ ಲಕ್ಷಣಗಳಿಂದ ಜನವರಿ 8 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಕಳೆದ 28 ದಿನಗಳಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇವರಿಗೆ ಚಿಕಿತ್ಸೆ ನೀಡಿದ್ದರೂ ಆರೋಗ್ಯ ಸುಧಾರಿಸಲಿಲ್ಲ. ಇಂದು (ಫೆಬ್ರವರಿ 6) ಬೆಳಗ್ಗೆ 8.12ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. "ಲತಾ ಮಂಗೇಶ್ಕರ್ ಕೊವಿಡ್ ಪೆಷೇಂಟ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನು ಉಳಿಸಿಕೊಳ್ಳು ಬಹಳ ಪ್ರಯತ್ನಪಟ್ಟೆವು. ಆದರೆ ಆರೋಗ್ಯ ಸಮಸ್ಯೆಗಳು ಇದ್ದಿದ್ದರಿಂದ ಸಾಧ್ಯವಾಗಲಿಲ್ಲ." ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆ ಆಡಳಿತ ವರ್ಗ ತಿಳಿಸಿದೆ.