For Quick Alerts
  ALLOW NOTIFICATIONS  
  For Daily Alerts

  ನಟ ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಆಸ್ಪತ್ರೆಗೆ ದಾಖಲು

  |

  ಪುತ್ರ ಸುಶಾಂತ್ ಸಿಂಗ್ ನನ್ನು ಕಳೆದುಕೊಂಡು ದುಃಖದಲ್ಲಿದ್ದ ತಂದೆ ಕೆಕೆ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ್ಯಾಯಕ್ಕಾಗಿ ಸುಮಾರು 6 ತಿಂಗಳಿಂದ ಕಾಯುತ್ತಿರುವ ಸುಶಾಂತ್ ಸಿಂಗ್ ತಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಹರಿಯಾಣದ ಫರಿದಾಬಾದ್ ನ ಆಸ್ಪತ್ರೆಯಲ್ಲಿ ಕಿಕಿ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

  ಸದ್ಯ ಕೆಕೆ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಇಬ್ಬರು ಪುತ್ರಿಯರಾದ ಪ್ರಿಯಾಂಕಾ ಮತ್ತು ಮೀತು ಸಿಂಗ್ ತಂದೆಯ ಜೊತೆ ಆಸ್ಪತ್ರೆಯಲ್ಲೇ ಇದ್ದು, ಅಪ್ಪನನ್ನು ನೋಡಿಕೊಳ್ಳುತ್ತಿದ್ದಾರೆ. ಕೆಕೆ ಸಿಂಗ್ ಆಸ್ಪತ್ರೆಯಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  ಡ್ರಗ್ಸ್ ಕೇಸ್: ರಿಯಾ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದ ವ್ಯಕ್ತಿ ಅರೆಸ್ಟ್

  ಫೋಟೋ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳಿಗೆ ಆಘಾತವುಂಟಾಗಿದೆ. ಬಳಿಕ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇನ್ನು ಕೆಲವರು ಕೆಕೆ ಸಿಂಗ್ ನಗುತ್ತ ಇರುವ ಫೋಟೋ ನೋಡಿ ಸಮಾಧಾನವಾಯಿತು ಎಂದು ಕೇಳಿಕೊಳ್ಳುತ್ತಿದ್ದಾರೆ.

  ನಟ ಸುಶಾಂತ್ ಸಿಂಗ್ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಸುಶಾಂತ್ ನಿಧನಹೊಂದಿ 6 ತಿಂಗಳು ಕಳೆದರು ಸಾವಿನ ಹಿಂದಿನ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಸುಶಾಂತ್ ಸಾವಿನ ತನಿಖೆ ವೇಳೆ ಡ್ರಗ್ಸ್ ಪ್ರಕರಣ ಸಹ ಬಯಲಿಗೆ ಬಂದಿದ್ದು, ಡ್ರಗ್ಸ್ ಮಾಫಿಯಾ ವಿಚಾರವಾಗಿ ಬಾಲಿವುಡ್ ನಲ್ಲಿ ಸಾಕಷ್ಟು ಮಂದಿಯನ್ನು ಎನ್ ಸಿ ಬಿ ವಿಚಾರಣೆಗೆ ಒಳಪಡಿಸಿದೆ.

  ದೊಡ್ಡದಾಗಿ ಸಿಗ್ನಲ್ ಕೊಟ್ಟ ರಾಕಿ ಭಾಯ್ | Filmibeat Kannada

  ಸುಶಾಂತ್ ಸಿಂಗ್ ಗಾಗಿ ಡ್ರಗ್ಸ್ ಖರೀದಿ ಮಾಡುತ್ತಿದ್ದ ಆರೋಪದ ಮೇರೆಗೆ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ.

  English summary
  Bollywood late Actor sushant singh father KK Singh hospitalized due to heart Ailment.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X