For Quick Alerts
  ALLOW NOTIFICATIONS  
  For Daily Alerts

  ವಿಕಾಸ್ ದುಬೆ ಎನ್ ಕೌಂಟರ್ ಬಗ್ಗೆ ಬರ್ತಿದೆ ಸಿನಿಮಾ: ರೌಡಿ ಶೀಟರ್ ಪಾತ್ರದಲ್ಲಿ ಬಾಲಿವುಡ್ ಖ್ಯಾತ ನಟ?

  |

  8 ಮಂದಿ ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ. ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದರು.

  Darshan,ಆಷಾಢ ಶುಕ್ರವಾರ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ನಟ ದರ್ಶನ್ | Filmibeat Kannada

  ಉಜ್ಜಯನಿಯಿಂದ ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಬೆಂಗಾವಲು ವಾಹನ ಪಲ್ಟಿಯಾಗಿದೆ. ಆಗ ದುಬೆ ಪೊಲೀಸರ ಬಂದೂಕು ಕಿತ್ತುಕೊಂಡು ಗುಂಡು ಹಾರಿಸಲು ಪ್ರಯತ್ನ ನಡೆಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

  ಈ ರೌಡಿ ಶೀಟರ್ ಬಗ್ಗೆ ಈಗ ಸಿನಿಮಾ ತಯಾರಾಗುತ್ತಿದೆ. ವಿಕಾಸ್ ದುಬೆ ಜೀವನ ಮತ್ತು ಎನ್ ಕೌಂಟರ್ ಪ್ರಕರಣದ ಬಗ್ಗೆ ನಿರ್ಮಾಪಕ ಸಂದೀಪ್ ಕಪೂರ್ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಕುಖ್ಯಾತ ರೌಡಿ ಶೀಟರ್ ಪಾತ್ರದಲ್ಲಿ ಬಾಲಿವುಡ್ ಖ್ಯಾತ ನಟ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

  ನಟ ಮನೋಜ್ ಬಜ್ಪಾಯಿ, ವಿಕಾಸ್ ದುಬೆ ಪಾತ್ರದಲ್ಲಿ ಬಣ್ಣಹಚ್ಚಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಿರ್ಮಾಪಕ ಸಂದೀಪ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಮನೋಜ್ ಬಜ್ಪಾಯಿ ವಿಕಾಸ್ ದುಬೆ ಪಾತ್ರ ಮಾಡಿದ್ರೆ ಹೇಗಿರುತ್ತೆ ಎಂದು ಕೇಳಿದ್ದಾರೆ.

  ಮನೋಜ್ ಬಜ್ಪಾಯಿ, ವಿಕಾಸ್ ದುಬೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದಂತೆ ನಟ ಮನೋಜ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ. ಈ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಹಾಗಾದರೆ ವಿಕಾಸ್ ದುಬೆ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ, ಯಾರು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

  English summary
  Bollywood Actor Manoj Bajpayee denies report of playing Vikas Dubey role in his next.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X