For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್ ಖ್ಯಾತ ನಟ ಫರಾಜ್ ಖಾನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ

  |

  ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ನ ಖ್ಯಾತ ನಟ ಫರಾಜ್ ಖಾನ್ ನಿಧನ ಹೊಂದಿದ್ದಾರೆ. ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 50 ವರ್ಷದ ನಟ ಫರಾಜ್ ಖಾನ್ ಬುಧವಾರ ಬೆಳಗ್ಗೆ ಕೊನೆಯುಸಿರೆಳಿದ್ದಾರೆ.

  ಫರಾಜ್ ಖಾನ್ ಕಳೆದ ಒಂದು ವರ್ಷದಿಂದ ವಿಪರೀತ ಕೆಮ್ಮು ತೀವ್ರ ಎದೆನೋವಿನಿಂದ ಬಳಲುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬಳಿಕ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದರೆ ಇಂದು ನಿಧನ ಹೊಂದಿದ್ದಾರೆ.

  ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವು-ಬದುಕಿಗಾಗಿ ಹೋರಾಡುತ್ತಿರುವ ಬಾಲಿವುಡ್ ನಟಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವು-ಬದುಕಿಗಾಗಿ ಹೋರಾಡುತ್ತಿರುವ ಬಾಲಿವುಡ್ ನಟ

  ಈ ಬಗ್ಗೆ ಬಾಲಿವುಡ್ ನಟಿ ಪೂಜಾ ಭಟ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 'ಭಾರವಾದ ಹೃದಯದಿಂದ, ಫರಾಜ್ ಖಾನ್ ನಮ್ಮನ್ನು ಅಗಲಿದ್ದಾರೆ. ಅವರಿಗೆ ಸಹಾಯ ಮಾಡಿದ ಎಲ್ಲರಿಗೂ ಕೃತಜ್ಞತೆಗಳು. ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

  90ರ ದಶಕದ ಪ್ರಸಿದ್ಧ ನಟರಲ್ಲಿ ಒಬ್ಬರಾಗಿದ್ದ ಫರಾಜ್ ಖಾನ್ ಮೆಹಂದಿ, ಫರೇಬ್, ದುಲ್ಹಾನ್ ಬನೂ ಮೈನ್ ತೇರಿ ಮತ್ತು ಚಂದ್ ಬುಜ್ ಗಯಾ ಸಿನಿಮಾಗಳ ಮೂಲಕ ಖ್ಯಾತಿಗಳಿಸಿದ್ದರು.

  ಕಳೆದ ಕೆಲವು ದಿನಗಳ ಹಿಂದೆ ಫರಾಜ್ ಖಾನ್ ಸಹೋದರ ಫರಾಜ್ ಖಾನ್ ಆರೋಗ್ಯ ಸ್ಥಿತಿ ಬಗ್ಗೆ ಬಹಿರಂಗ ಪಡಿಸಿದ್ದರು 'ಫರಾಜ್ ಸುಮಾರು ಒಂದು ವರ್ಷದಿಂದ ಕೆಮ್ಮು ಮತ್ತು ಎದೆ ನೋವಿನಿಂದ ಬಳಲುತ್ತಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನಲ್ಲಿ ಹರ್ಪಿಸ್ ಸೋಂಕು ಪತ್ತೆಯಾಗಿದ್ದು, ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ' ಎಂದು ತಿಳಿಸಿದ್ದರು.

  ಜೊತೆಗೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಫರಾಜ್ ಖಾನ್ ವಿಷಯ ತಿಳಿದು ಬಾಲಿವುಡ್ ನಟಿ ಪೂಜಾ ಭಟ್ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದರು. ವಿಷಯ ತಿಳಿದ ನಟ ಸಲ್ಮಾನ್ ಖಾನ್ ಫರಾಜ್ ಖಾನ್ ಗೆ ಆರ್ಥಿಕ ಸಹಾಯ ಮಾಡಿದ್ದರು.

  English summary
  Bollywood Actor Faraaz Khan Passes Away, how Pooja Bhatt mourned his demise on Twitter.
  Wednesday, November 4, 2020, 12:29
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X