For Quick Alerts
  ALLOW NOTIFICATIONS  
  For Daily Alerts

  ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ

  |

  ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಿಸಿ ಜೋರಾಗಿದ್ದು, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅಖಾಡಕ್ಕೆ ಧುಮುಕಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಮತ್ತು ಸೌರವ್ ಗಂಗೂಲಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ, ಮಿಥುನ್ ಚಕ್ರವರ್ತಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ.

  ಭಾನುವಾರ ಮಧ್ಯಾಹ್ನ ಕೊಲ್ಕತ್ತಾದಲ್ಲಿ ಬೃಹತ್ ಚುನಾವಣೆ ಜಾಥಾ ಆಯೋಜನೆಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುಂಚೆ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

  ಜಾವೇದ್ ಅಖ್ತರ್‌ಗೆ ಈ ವಿವಾದಾತ್ಮಕ ನಟಿಯ ಜೀವನ ಕುರಿತು ಕತೆ ಬರೆಯಲು ಆಸೆ!

  ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ನಟ ಮಿಥುನ್ ಅವಕ್ರವರ್ತಿ ಅವರನ್ನು ಬೆಲ್ಗಾಚಿಯಾದ ನಿವಾಸದಲ್ಲಿ ಭೇಟಿಯಾಗಿದ್ದರು. ಮಿಥುನ್ ಬಿಜೆಪಿ ಸೇರಲಿದ್ದಾರೆ ಎಂದು ಸುಳಿವು ನೀಡಿದ್ದರು.

  ಈ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾರಥ್ಯದಲ್ಲಿ ಮಿಥುನ್ ಚಕ್ರವರ್ತಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು. 2014ರಲ್ಲಿ ರಾಜ್ಯಸಭೆ ಸದಸ್ಯರಾಗಿ ಮಿಥುನ್ ನಾಮನಿರ್ದೇಶನಗೊಂಡಿದ್ದರು. ನಂತರ ರಾಜಕೀಯದಿಂದ ಹಿಂದೆ ಸರಿದ ಕಾರಣ ಮಿಥುನ್ ಚಕ್ರವರ್ತಿ 2016 ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು.

  ರಿಲೀಸ್ ಗೂ ಮೊದಲೇ ಮೈಸೂರಿನಲ್ಲಿ ಅಬ್ಬರಿಸಲಿದ್ದಾನೆ ಯುವರತ್ನ | Yuvaratna | Puneeth Rajkumar|Filmibeat Kannada

  ಮಾರ್ಚ್ 27 ರಂದು ಪಶ್ಚಿಮ ಬಂಗಾಳದಲ್ಲಿ 294 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 2 ರಂದು ಚುನಾವಣಾ ಫಲಿತಾಂಶ ಹೊರಬರಲಿದೆ. ಈ ಚುನಾವಣೆಯಲ್ಲಿ ಮಿಥುನ್ ಚಕ್ರವರ್ತಿ ಸಹ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

  English summary
  Actor, singer, producer, writer, social worker Mithun Chakraborty joins BJP ahead of PM Modi ji’s mega rally.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X