For Quick Alerts
  ALLOW NOTIFICATIONS  
  For Daily Alerts

  ಜಾಕ್ವೆಲಿನ್ ಫರ್ನಾಂಡಿಸ್‌ಗೆ ಮತ್ತೆ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

  |

  ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಬಾಲಿವುಡ್ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಮತ್ತೆ ಸಮನ್ಸ್ ನೀಡಿದೆ. ಸುಕೇಶ್ ಚಂದ್ರಶೇಖರ್ ಗೆ ಸಂಬಂಧ ಪಟ್ಟ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಅವರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಮತ್ತೆ ಇಡಿ ಸಮನ್ಸ್ ಜಾರಿ ಮಾಡಿರುವುದು ಅಚ್ಚರಿ ಮೂಡಿಸಿದೆ. ಸೆಪ್ಟಂಬರ್ 25ರಂದು ಇಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಜಾಕ್ವೆಲಿನ್ ಅವರಿಗೆ ಸೂಚಿಸಲಾಗಿದೆ.

  ಈ ಹಿಂದೆ ಆಗಸ್ಟ್ ನಲ್ಲಿ ಜಾಕ್ವೆಲಿನ್ ಅವರಿಗೆ ವಿಚಾರಣೆ ಮಾಡಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಜಾಕ್ವೆಲಿನ್ ಅವರನ್ನು ಪ್ರಶ್ನೆ ಮಾಡಲಾಗಿತ್ತು. ಇದೀಗ ಮತ್ತೊಂದು ಸುತ್ತಿನ ವಿಚಾರಣೆ ನಡೆಸಲು ಮುಂದಾಗಿದ್ದು, ವಿಕ್ರಾಂತ್ ರೋಣ ನಟಿಗೆ ನೋಟೀಸ್ ಜಾರಿ ಮಾಡಿದೆ.

  ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಜೊತೆಗೆ ಇನ್ನು ಬೇರೆ ಸೆಲೆಬ್ರಿಟಗಳನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ನಟಿ, ಡಾನ್ಸರ್ ನೋರಾ ಫತೇಹಿ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯಕೆ ಇದೆ ಎನ್ನಲಾಗುತ್ತಿದೆ. ಟೈಮ್ಸ್ ನೌ ವರದಿ ಪ್ರಕಾರ ನಟಿ ಜಾಕ್ವೆಲಿನ್ ಅವರಿಗೆ ಪ್ರಶ್ನೆಯನ್ನು ಪೂರ್ಣಗೊಳಿಸದ ಕಾರಣ ಮತ್ತೊಮೆ ವಿಚಾರಣೆಗೆ ಕರೆಯಲಾಗಿದೆ ಎನ್ನಲಾಗಿದೆ.

  ಸುಕೇಶ್ ಯಾರು?

  ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ.

  ಇನ್ನು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮೊದಲ ಬಾರಿಗೆ ಕನ್ನಡ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣಾ ಸಿನಿಮಾ ಮೂಲಕ ಜಾಕ್ವೆಲಿನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಜಾಕ್ವೆಲಿನ್ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಸುದೀಪ್ ಜೊತೆ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜಾಕ್ವೆಲಿನ್ ಅವರನ್ನು ಸುದೀಪ್ ಜೊತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

  English summary
  Money Laundering cases: Jacqueline Fernandez summoned by ED Again.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X