twitter
    For Quick Alerts
    ALLOW NOTIFICATIONS  
    For Daily Alerts

    Breaking: ಜುಲೈ 27ರವರೆಗೂ ರಾಜ್ ಕುಂದ್ರಾ ಪೊಲೀಸ್ ಕಸ್ಟಡಿಗೆ

    |

    ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧನವಾಗಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾರನ್ನು ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.

    Recommended Video

    ಅವಳು ನನ್ನ ಹೆಂಡತಿ ಇದನ್ನೆಲ್ಲಾ ಸಹಿಸಿಕೊಳ್ಳಲೇ ಬೇಕು

    ಜುಲೈ 19 ರಂದು ಮುಂಬೈ ಪೊಲೀಸರು ರಾಜ್‌ ಕುಂದ್ರಾರನ್ನು ಬಂಧಿಸಿದ್ದರು. ಜುಲೈ 23ರವರೆಗೂ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಹಿನ್ನೆಲೆ ಶನಿವಾರ ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

    ರಾಜ್‌ ಕುಂದ್ರಾ ಅರೆಸ್ಟ್: ಪೊಲೀಸರಿಗೆ ಮೊದಲು ಹೇಳಿಕೆ ಕೊಟ್ಟಿದ್ದೆ ನಾನು- ಶೆರ್ಲಿನ್ ಚೋಪ್ರಾರಾಜ್‌ ಕುಂದ್ರಾ ಅರೆಸ್ಟ್: ಪೊಲೀಸರಿಗೆ ಮೊದಲು ಹೇಳಿಕೆ ಕೊಟ್ಟಿದ್ದೆ ನಾನು- ಶೆರ್ಲಿನ್ ಚೋಪ್ರಾ

    ರಾಜ್ ಕುಂದ್ರಾ ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಇನ್ನು ನಾಲ್ಕು ದಿನ ವಶಕ್ಕೆ ಪಡೆಯುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ.

    Mumbai Court extends Raj Kundra’s police custody to July 27, 2021 in the pornography case

    ಫೆಬ್ರವರಿಯಲ್ಲಿ ಪ್ರಕರಣ ದಾಖಲು

    ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಈ ಕೇಸ್‌ನಲ್ಲಿ ರಾಜ್ ಕುಂದ್ರಾ ಜುಲೈ 19 ರಂದು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್‌ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.

    ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.

    ಈ ಕೇಸ್‌ ಬಗ್ಗೆ ಪ್ರತಿಕ್ರಿಯಿಸಿದ್ದ ಪೂನಂ ಪಾಂಡೆ, ರಾಜ್ ಕುಂದ್ರಾ ಅವರೇ ನನ್ನನ್ನು ಈ ಅಶ್ಲೀಲ ಜಗತ್ತಿಗೆ ಪರಿಚಯಿಸಿದ್ದು, ನನಗೆ ಬೆದರಿಕೆ ಹಾಕಿ ವಿಡಿಯೋ ಮಾಡುತ್ತಿದ್ದರು. ಅವರ ಸಂಸ್ಥೆ ಜೊತೆ ಒಪ್ಪಂದ ಕಡಿದುಕೊಂಡಿದ್ದಕ್ಕೆ ನನ್ನ ಖಾಸಗಿ ನಂಬರ್ ಮತ್ತು ಸಂದೇಶಗಳನ್ನು ಸೋರಿಕೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.

    ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯ ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    English summary
    Mumbai Court extends Raj Kundra’s police custody to July 27, 2021 in the pornography case.
    Friday, July 23, 2021, 14:33
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X