ಅಕ್ರಮ ರೇವು ಪಾರ್ಟಿ: ಬಿಗ್ ಬಾಸ್ ಸ್ಪರ್ಧಿ, ನಟಿಯರು ವಶಕ್ಕೆ
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ರೇವು ಪಾರ್ಟಿ ಅಡ್ಡೆ ಮೇಲೆ ಭಾನುವಾರ ಪೊಲೀಸರು ದಾಳಿ ಮಾಡಿದ್ದು, ಸುಮಾರು 22 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ.
ಮುಂಬೈನಿಂದ 120 ಕಿ.ಮೀ ದೂರದಲ್ಲಿರುವ ಇಗತ್‌ಪುರಿಯಲ್ಲಿರುವ ಎರಡು ಖಾಸಗಿ ವಿಲ್ಲಾಗಳಲ್ಲಿ ರೇವು ಪಾರ್ಟಿ ನಡೆಯುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ನಡೆಸಿದರು. ಈ ದಾಳಿಯಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೇರಿದಂತೆ ಹಿಂದಿ ಸಿನಿಮಾ ಕಲಾವಿದರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಬಾಲಿವುಡ್‌ನಲ್ಲಿ ಡ್ರಗ್ಸ್ ಪ್ರಕರಣ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಈ ರೇವು ಪಾರ್ಟಿ ನಡೆಸಿ ಸೆಲೆಬ್ರಿಟಿಗಳು ಸಿಕ್ಕಿ ಬಿದ್ದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮುಂದೆ ಓದಿ...

ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್
''ಬಂಧನವಾಗಿರುವ 22 ವ್ಯಕ್ತಿಗಳಲ್ಲಿ ಪೈಕಿ ಹಿಂದಿ ಚಲನಚಿತ್ರ ಮತ್ತು ದೂರದರ್ಶನ ಉದ್ಯಮದಲ್ಲಿ ಕೆಲಸ ಮಾಡುವ ನಟರು ಮತ್ತು ನೃತ್ಯ ನಿರ್ದೇಶಕರು ಸೇರಿದ್ದಾರೆ. ಅದರಲ್ಲಿ 12 ಮಹಿಳೆಯರು ಒಳಗೊಂಡಿದ್ದು, ಅವರಲ್ಲಿ ಒಬ್ಬರು 'ಬಿಗ್ ಬಾಸ್' ಟಿವಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು'' ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಸೌತ್ ಇಂಡಸ್ಟ್ರಿ ಜೊತೆ ನಂಟು
ಇದರಲ್ಲಿ ನಾಲ್ಕು ಮಹಿಳೆಯರಿಗೆ ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯೊಂದಿಗೆ ಸಂಬಂಧವಿದೆ ಎನ್ನುವ ವಿಚಾರವೂ ಹೊರಬಿದ್ದಿದೆ. ಇರಾನಿ ಮೂಲದ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಈ ಸಂಬಂಧ ವಿಶೇಷ ತಂಡವನ್ನು ಮುಂಬೈಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ಇಂಡಿಯಾ ಟುಡೇ ಮಾಧ್ಯಮ ವರದಿ ಮಾಡಿದೆ.

ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಾಸಿಕ್ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಪಾಟೀಲ್ ''ಆರೋಪಿಗಳು ಹುಟ್ಟುಹಬ್ಬದ ಸಂತೋಷಕೂಟಕ್ಕಾಗಿ ಸೇರಿದ್ದರು. ಎಲ್ಲರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗಿದೆ. ಈ ವೇಳೆ ನಿಷೇಧಿತ ಡ್ರಗ್ಸ್ ಸಹ ವಶಪಡಿಸಿಕೊಂಡಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ'' ಎಂದಿದ್ದಾರೆ.

ಪಾರ್ಟಿ ಆಯೋಜಕರ ಹುಡುಕಾಟ
"ಈ ಪಾರ್ಟಿಯನ್ನು ಆಯೋಜಿಸಲು ಸಹಕರಿಸಿದ ವ್ಯಕ್ತಿಗಳನ್ನು ಹುಡುಕಲಾಗುತ್ತಿದೆ ಹಾಗೂ ಆ ಪಾರ್ಟಿಗೆ ಹಲವರು ದುಬಾರಿ ಕಾರುಗಳಲ್ಲಿ ಬಂದಿದ್ದಾರೆ. ಅದರ ಬಗ್ಗೆಯೂ ತನಿಖೆ ಮಾಡಲಾಗುತ್ತದೆ'' ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿರುವಂತೆ ಉಲ್ಲೇಖಿಸಲಾಗಿದೆ.
Recommended Video

ಬಾಲಿವುಡ್‌ನಲ್ಲಿ ಡ್ರಗ್ಸ್ ಬೇಟೆ
ಬಿಟೌನ್ ಸೆಲೆಬ್ರಿಟಿಗಳು ಡ್ರಗ್ಸ್ ಜಾಲದ ಜೊತೆ ನಂಟು ಹೊಂದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಎನ್‌ಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲೂ ಹಲವು ಸೆಲೆಬ್ರಿಟಿಗಳನ್ನು ಎನ್‌ಸಿಬಿ ವಿಚಾರಣೆ ಮಾಡಿದೆ.


Click it and Unblock the Notifications











