ಸಲ್ಮಾನ್ ಖಾನ್‌ ಕೊಲ್ಲಲು ಮತ್ತೊಮ್ಮೆ ಸ್ಕೆಚ್ ಹಾಕಿದ್ದ ಲಾರೆನ್ಸ್ ಬಿಷ್ಣೋಯಿ ; ನಾಲ್ಕು ಶಾರ್ಫ್ ಶೂಟರ್‌ಗಳ ಬಂಧನ..!

ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಸದ್ಯಕ್ಕೆ ಸಲ್ಮಾನ್ ಖಾನ್ ಅವರನ್ನ ಕೊಲ್ಲಲು ಹೊಸದಾಗಿ ಸ್ಕೆಚ್ ಹಾಕಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ

ಹೌದು.. ಮುಂಬೈನ ಪನ್‌ವೇಲ್ ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್ ಹೌಸ್ ಬಳಿ, ಸಲ್ಮಾನ್ ಖಾನ್ ಬರುವಿಕೆಗಾಗಿ ನಾಲ್ವರು ಹೊಂಚು ಹಾಕಿ ಕುಳಿತಿದ್ದರು. ಎಕೆ-47 ಗನ್ ಸಮೇತ ಕಾರಿನಲ್ಲಿಯೇ ಕಾಯುತ್ತಿದ್ದ ಬಿಷ್ಣೋಯ್ ಗ್ಯಾಂಗ್‌ನ ನಾಲ್ವರು ಶಾರ್ಪ್‌ ಶೂಟರ್‌ಗಳನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಎಕೆ-47 ರೈಫಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

navi-mumbai-police-nab-4-from-lawrence-bishnoi-gang-for-plotting-attack-on-salman-khan-in-panvel

ಬಂಧಿತ ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ.

ಇನ್ನೂ.. ಸಲ್ಮಾನ್ ಖಾನ್ ಅವರನ್ನ ಕೊಲ್ಲಲು M16, AK-47 ಮತ್ತು AK-92 ರೈಫಲ್‌ಗಳನ್ನು ಖರೀದಿಸಲು ಪಾಕಿಸ್ತಾನದಲ್ಲಿರುವ ಡೋಗಾ ಎಂಬ ಶಸ್ತ್ರಾಸ್ತ್ರ ವ್ಯಾಪಾರಿಯೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಸ್ಪೋಟಕ ಮಾಹಿತಿಯನ್ನು ಬಂಧಿತ ಆರೋಪಿ ಅಜಯ್ ಕಶ್ಯಪ್ ಪೊಲೀಸ್ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಲ್ಮಾನ್ ಖಾನ್ ಅವರನ್ನ ಕೊಲ್ಲುವಲ್ಲಿ ಈ ಬಾರಿ ಯಶಸ್ವಿ ಆದರೆ ಬಂಧಿತ ಆರೋಪಿಗಳಿಗೆ ದೊಡ್ಡ ಮೊತ್ತದ ಹಣ ನೀಡುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಕೆನಡಾದ ಗೋಲ್ಡಿ ಬ್ರಾರ್ ಭರವಸೆಯನ್ನ ನೀಡಿದ್ದರು ಎಂಬ ಮಾಹಿತಿ ಕೂಡ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

navi-mumbai-police-nab-4-from-lawrence-bishnoi-gang-for-plotting-attack-on-salman-khan-in-panvel

ಲಾರೆನ್ಸ್ ಬಿಷ್ಣೋಯ್ ಮತ್ತು ಸಲ್ಮಾನ್ ಖಾನ್..!

ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಆದರೆ ಸಲ್ಮಾನ್ ಖಾನ್ ಮೇಲೆ ಕೃಷ್ಣ ಮೃಗ ಬೇಟೆಯಾಡಿದ ಆರೋಪ ಇತ್ತು. ಹತ್ತಾರು ಬಾರಿ ಸಲ್ಮಾನ್ ಈ ಪ್ರಕರಣದಲ್ಲಿ ಕೋರ್ಟು-ಕಛೇರಿ ಎಂದು ಅಲೆದಾಡಿದ್ದು ಇದೆ. ಆದರೆ 2016ರಲ್ಲಿ ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆಯಾಗಿತ್ತು. ಆ ದಿನ ಆ ಕ್ಷಣದಿಂದ ಸಲ್ಮಾನ್ ಖಾನ್ ಬೆನ್ನು ಹತ್ತಿರುವ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದುಕೊಂಡೆ ಸಲ್ಮಾನ್ ಖಾನ್ ಗೆ ಅನೇಕ ಬಾರಿ ಸ್ಕೆಚ್ ಹಾಕಿದ್ದಾನೆ. ಎರಡು ಮೂರು ಬಾರಿ ಸಲ್ಮಾನ್ ಖಾನ್ ಅವರನ್ನ ಕೊಲ್ಲುವ ಪ್ರಯತ್ನವನ್ನೂ ಮಾಡಿದ್ದಾನೆ.

ಉಳಿದಂತೆ ಉತ್ತರ ಭಾರತದ ಕುಖ್ಯಾತ ದರೋಡೆಕೋರ. ಕೊಲೆ ಮತ್ತು ಸುಲಿಗೆ ಸೇರಿದಂತೆ ಅನೇಕ ಕ್ರಿಮಿನಲ್ ಆರೋಪಗಳನ್ನು ಹೊತ್ತಿರುವ ಲಾರೆನ್ಸ್ ಬಿಷ್ಣೋಯ್, ಖಲಿಸ್ತಾನ್ ಚಳವಳಿ ಮತ್ತು ಇತರ ರೀತಿಯ ದೇಶ ವಿರೋಧಿ ಚಟುವಟಿಕೆಗಳಿಗೆ ಕೂಡ ಹೆಸರುವಾಸಿ. ಇನ್ನೂ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಯೂ ಈ ವ್ಯಕ್ತಿಯ ಕೈವಾಡ ಇದೆ ಎಂದು ಹಿಂದೆ ಸುದ್ದಿಯಾಗಿತ್ತು

More from Filmibeat

English summary
Members of the Lawrence Bishnoi gang have been apprehended for plotting an assault on Salman Khan. They were found to have procured AK-47 rifles from Pakistan
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X