Just In
Don't Miss!
- News
50 ಸಾವಿರ ಪಾಯಿಂಟ್ ದಾಟಿಕ್ದ ಸೂಚ್ಯಂಕ, ಹೂಡಿಕೆದಾರರು ಸಂತಸ
- Sports
ಐಪಿಎಲ್ 2021: ಬಿಡುಗಡೆಗೊಳಿಸಿದಕ್ಕೆ ಧನ್ಯವಾದ ಎಂದ ಪಾರ್ಥಿವ್ ಪಟೇಲ್
- Automobiles
ಮೂರು ತಿಂಗಳಲ್ಲಿ ಆರು ಕೋಟಿಗೂ ಹೆಚ್ಚು ದಂಡ ತೆತ್ತ ವಾಹನ ಸವಾರರು
- Finance
50 ಸಾವಿರ ಪಾಯಿಂಟ್ ಗಡಿ ದಾಟಿದ ಸೆನ್ಸೆಕ್ಸ್; ನಿಫ್ಟಿ 14700 ಪಾಯಿಂಟ್ ಆಚೆಗೆ
- Lifestyle
ನಿಮ್ಮ ಕೋಮಲ ತುಟಿಗಳಿಗಾಗಿ ಮನೆಯಲ್ಲಿಯೇ ತಯಾರಿಸಿ ಈ ಲಿಪ್ ಬಾಮ್ ಗಳನ್ನು...
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡ್ರಗ್ಸ್ ಕೇಸ್: ಬಾಲಿವುಡ್ ಖ್ಯಾತ ಮೇಕಪ್ ಕಲಾವಿದ ಬಂಧನ
ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳ ಬೇಟೆ ಮುಂದುವರಿದಿದ್ದು, ಖ್ಯಾತ ಮೇಕಪ್ ಕಲಾವಿದ ಸೂರಜ್ ಗೋದಂಬೆ ಅವರನ್ನು ಬಂಧಿಸಲಾಗಿದೆ.
ಕಳೆದ ಎರಡು ತಿಂಗಳಿನಿಂದ ಡ್ರಗ್ಸ್ ಕೇಸ್‌ನಲ್ಲಿ ಹಲವು ನಟ-ನಟಿಯರು ಹೆಸರು ಕೇಳಿ ಬಂದಿದ್ದು, ಖ್ಯಾತನಾಮರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರಲ್ಲಿ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಡ್ರಗ್ಸ್ ಕೇಸ್: ರಿಯಾ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದ ವ್ಯಕ್ತಿ ಅರೆಸ್ಟ್
ಇದೀಗ, ಮೇಕಪ್ ಕಲಾವಿದ ಸೂರಜ್ ಗೋದಂಬೆ ಅವರನ್ನು ಮುಂಬೈ ನಿವಾಸದಲ್ಲಿ ಕೊಕೇನ್ ಸಮೇತ ಅರೆಸ್ಟ್ ಮಾಡಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
3 ಈಡಿಯಟ್ಸ್ (2009), ಫಿಯರ್‌ಲೆಸ್ (2010) ಮತ್ತು ತನು ವೆಡ್ಸ್ ಮನು ರಿಟರ್ನ್ಸ್ (2015) ನಂತಹ ಜನಪ್ರಿಯ ಚಿತ್ರಗಳಲ್ಲಿ ಸೂರಜ್ ಕೇಶ ವಿನ್ಯಾಸಕ ಮತ್ತು ಮೇಕಪ್ ಕಲಾವಿದರಾಗಿ ಕೆಲಸ ಮಾಡಿದ್ದು, ಅನೇಕ ದೊಡ್ಡ ಸಂಸ್ಥೆಗಳೊಂದಿಗೆ ಸಹ ಗುರುತಿಸಿಕೊಂಡಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ವೇಳೆ ಸೂರಜ್ ಬಗ್ಗೆ ಮಾಹಿತಿ ಸಿಕ್ಕಿದ್ದು, ಆ ಬಳಿಕ ಮನೆ ಮೇಲೆ ದಾಳಿ ಮಾಡಲಾಯಿತು. ಇಂದು ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಎನ್‌ಸಿಬಿ ಅಧಿಕಾರಿಗಳು ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುಂಚೆ ಮಂಗಳವಾರ ನಟಿ ರಿಯಾ ಚಕ್ರವರ್ತಿ ಮತ್ತು ಶೌವಿಕ್ ಚಕ್ರವರ್ತಿಗೆ ಡ್ರಗ್ಸ್ ಸರಬರಾಜು ಮಾಡ್ತಿದ್ದ ಪೆಡ್ಲರ್ ರಗೆಲ್ ಮಹಕಲ್ ಹಾಗು ಇನ್ನಿಬ್ಬರನ್ನು ಬಂಧಿಸಲಾಗಿತ್ತು.
ಇದಾದ ಎರಡು ದಿನದ ಬಳಿಕ ಮೇಕಪ್ ಕಲಾವಿದ ಸೂರಜ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರಿಯಾ ಚಕ್ರವರ್ತಿ ಮತ್ತು ಸಹೋದರ ಶೌವಿಕ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.