For Quick Alerts
  ALLOW NOTIFICATIONS  
  For Daily Alerts

  ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

  |

  ನಟ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಮಾದಕ ವಸ್ತು ನಿಯಂತ್ರಣ ಇಲಾಖೆ (NCB) ಕ್ರಿಮಿನಲ್ ಕೇಸ್ ದಾಖಲಿಸಿದೆ.

  ಅದ್ದೂರಿಯಾಗಿ ನಡೀತು ಯಶ್ ಮಗನ ನಾಮಕರಣ | Filmibeat Kannada

  ರಿಯಾ ಚಕ್ರವರ್ತಿ ಸದ್ಯ ಸಿಬಿಐ ತನಿಖೆ ಎದುರಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ರಿಯಾ ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಸಿಬಿಐ ಮತ್ತು ಇಡಿ ಅಧಿಕಾರಿಗಳ ತನಿಖೆ ನಡುವೆ ಈಗ ರಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

  ಸುಶಾಂತ್ ಕೇಸ್‌: ಹೋಟೆಲ್ ಉದ್ಯಮಿ ಗೌರವ್ ಆರ್ಯಗೆ ED ಇಲಾಖೆ ಸಮನ್ಸ್ಸುಶಾಂತ್ ಕೇಸ್‌: ಹೋಟೆಲ್ ಉದ್ಯಮಿ ಗೌರವ್ ಆರ್ಯಗೆ ED ಇಲಾಖೆ ಸಮನ್ಸ್

  ಇಡಿ ಅಧಿಕಾರಿಗಳ ವಿಚಾರಣೆ ವೇಳೆ ರಿಯಾ ಚಕ್ರವರ್ತಿಯ ವಾಟ್ಸಪ್ ಸಂದೇಶ ಡ್ರಗ್ ಮಾಫಿಯಾದ ಜೊತೆ ಸಂಪರ್ಕವಿರುವ ಬಗ್ಗೆ ಸುಳಿವು ನೀಡಿತ್ತು. ವಾಟ್ಸಪ್ ಸಂದೇಶಗಳನ್ನು ಆಧರಿಸಿ ತನಿಖೆ ನಡೆಸುತ್ತಿರುವ NCB ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದೆ. ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಇತರರ ವಿರುದ್ಧ ಕೇಸ್ ದಾಖಲಾಗಿದೆ.

  ರಿಯಾ ಚಕ್ರವರ್ತಿ ಡ್ರಗ್ಸ್ ಮಾಫಿಯಾದ ಜೊತೆ ಸಂಪರ್ಕವಿದೆ ಎನ್ನುವ ಬಗ್ಗೆ ಚರ್ಚೆಯಾಗುತ್ತಿದ್ದಂತೆ ರಿಯಾ ಪರ ವಕೀಲ ಸತೀಶ್ ಮನೆಶಿಂದೆ "ರಿಯಾ ಯಾವತ್ತು ಡ್ರಗ್ಸ್ ಸೇವಿಸಿಲ್ಲ. ಆಕೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧರಾಗಿದ್ದಾರೆ" ಎಂದು ಹೇಳಿದ್ದಾರೆ.

  ಸಿಬಿಐ ಅಧಿಕಾರಿಗಳು ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಸೇರಿದ್ದಂತೆ ಸುಶಾಂತ್ ಸಿಂಗ್ ಸ್ನೇಹಿತರು ಮತ್ತು ಮ್ಯಾನೇಜರ್ ಗಳನ್ನು ವಿಚಾರಣೆ ಮಾಡುತ್ತಿದ್ದಾರೆ. ಸುಶಾಂತ್ ಸಿಂಗ್ ಸಹೋದರಿಯರಾದ ಮೀತು ಸಿಂಗ್ ಮತ್ತು ಪ್ರಿಯಾಂಕಾ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

  English summary
  Norcotics Control Bureau rigestes criminal case against Rhea chakraborty.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X