ರಣ್‌ಬೀರ್, ಯಶ್ ನಟನೆಯ 'ರಾಮಾಯಣ' ಸಿನಿಮಾ ಟೀಸರ್ ರಿಲೀಸ್ ಡೇಟ್ ಘೋಷಿಸಿದ ಚಿತ್ರತಂಡ

ನಿತೇಶ್ ತಿವಾರಿ ನಿರ್ದೇಶನದಲ್ಲಿ ಯಶ್ ಹಾಗೂ ರಣ್‌ಬೀರ್ ಕಪೂರ್ ನಟನೆಯ 'ರಾಮಾಯಣ' ಸಿನಿಮಾ ನಿರೀಕ್ಷೆ ಹುಟ್ಟಾಕ್ಕಿದೆ. ಇದೀಗ ಚಿತ್ರತಂಡದಿಂದ ಅಧಿಕೃತವಾಗಿ ಅಪ್‌ಡೇಟ್ ಬಂದಿದೆ. ಶ್ರೀರಾಮನವಮಿ ಸಂಭ್ರಮದಲ್ಲಿ ಟೀಸರ್ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಆದರೂ ಟೀಸರ್ ರಿಲೀಸ್ ಡೇಟ್ ಘೋಷಣೆ ಮಾಡಿರುವುದು ಖುಷಿ ತಂದಿದೆ.

4000 ಕೋಟಿ ರೂ. ಬಜೆಟ್‌ನಲ್ಲಿ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ 'ರಾಮಾಯಣ' ಸಿನಿಮಾ ನಿರ್ಮಾಣವಾಗುತ್ತಿದೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನಾಗಿ ಯಶ್ ನಟಿಸಿರುವುದು ವಿಶೇಷ. ಬಹಳ ಅದ್ಧೂರಿಯಾಗಿ ಸಿನಿಮಾ ತಯಾರಾಗುತ್ತಿದೆ. ದೀಪಾವಳಿ ಸಂಭ್ರಮದಲ್ಲಿ ಮೊದಲ ಭಾಗ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೀತಿದೆ. ಟೀಸರ್ ರಿಲೀಸ್ ಮಾಡಿ ಪ್ರಮೋಷನ್ ಶುರು ಮಾಡಲು ಚಿತ್ರತಂಡ ಮುಂದಾಗಿದೆ.

Nitesh Tiwari s Ramayana Teaser to Drop on Hanuman Jayanti Grand Reveal Planned Worldwide

ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ರಾಮನವಮಿಯ ಶುಭ ಸಂದರ್ಭದಲ್ಲಿ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್ ಕೊಟ್ಟಿದ್ದಾರೆ. ಏಪ್ರಿಲ್ 2ರಂದು ಆಚರಿಸಲಾಗುವ ಹನುಮ ಜಯಂತಿಯ ಪವಿತ್ರ ದಿನದಂದು 'ರಾಮ'ನ ವಿಶೇಷ ಝಲಕ್ ರಿಲೀಸ್ ಮಾಡುತ್ತೇವೆ ಎಂದಿದ್ದಾರೆ. ವಿಶ್ವಾದ್ಯಂತ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

"ರಾಮಾಯಣವು ನಮ್ಮೆಲ್ಲರ ಪರಂಪರೆಯಾಗಿದೆ. ಅತ್ಯಂತ ಜವಾಬ್ದಾರಿ ಮತ್ತು ಭಕ್ತಿಯಿಂದ ಈ ಮಹಾಕಾವ್ಯಕ್ಕೆ ಜೀವ ತುಂಬುತ್ತಿದ್ದೇವೆ. ಹನುಮ ಜಯಂತಿಯಂದು ನಡೆಯಲಿರುವ ಈ 'ಗ್ರಾಂಡ್ ವರ್ಲ್ಡ್ ರಿವೀಲ್' ಕೇವಲ ಸಿನಿಮಾದ ಅಪ್‌ಡೇಟ್ ಅಲ್ಲ, ಇದು ವಿಶ್ವಾದ್ಯಂತ ಇರುವ ರಾಮಭಕ್ತರು ಮತ್ತು ಅಭಿಮಾನಿಗಳ ಸಂಭ್ರಮದ ಆಚರಣೆಯಾಗಲಿದೆ" ಎಂದು ನಿಮಿತ್ ಮಲ್ಹೋತ್ರಾ ಬರೆದುಕೊಂಡಿದ್ದಾರೆ. ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಪ್ರೈಮ್ ಫೋಕಸ್ ಸ್ಟುಡಿಯೋಸ್, ಆಸ್ಕರ್ ವಿಜೇತ ಡಿಎನ್ಇಜಿ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಒಟ್ಟಾಗಿ 'ರಾಮಾಯಣ' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಐಮ್ಯಾಕ್ಸ್ ಸ್ಕ್ರೀನ್‌ಗಳಿಗಾಗಿ ಸಿನಿಮಾ ತಯಾರಾಗುತ್ತಿದೆ. ಚಿತ್ರದ ಎರಡನೇ ಭಾಗವು 2027ರ ದೀಪಾವಳಿಗೆ ತೆರೆಗೆ ಬರಲಿದೆ. ಭಾರತದ ಪೌರಾಣಿಕ ಕಥೆಯನ್ನು ವಿಶ್ವದಾದ್ಯಂತ ಪ್ರೇಕ್ಷಕರ ಮುಂದೆ ತೆಗೆದುಕೊಂಡು ಹೋಗಲು ಚಿತ್ರತಂಡ ಶ್ರಮಿಸುತ್ತಿದೆ. ಹಾಲಿವುಡ್ ತಂತ್ರಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

'ಟಾಕ್ಸಿಕ್' ಸಿನಿಮಾ ಮೂಲಕ ಜೂನ್ 4ರಂದು ಯಶ್ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ಬಳಿಕ ನವೆಂಬರ್‌ನಲ್ಲಿ 'ರಾಮಾಯಣ'ದ ರಾವಣನಾಗಿ ರಾಕಿಂಗ್ ಸ್ಟಾರ್ ಅಬ್ಬರಿಸಲಿದ್ದಾರೆ. ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಮುಗಿಸಿ 2ನೇ ಭಾಗದ ಸಿನಿಮಾ ಕೆಲಸಗಳು ಆರಂಭಿಸಲಿದೆ. ಮೊದಲ ಭಾಗದ ಸಿನಿಮಾ ವಿಎಫ್‌ಎಕ್ಸ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಹಿಂದೆ ನಾನಾ ರೂಪದಲ್ಲಿ ರಾಮಾಯಣ ಕಥೆ ಕೇಳಿದ್ದರೂ ನೋಡಿದ್ದರೂ ಅದನ್ನು ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ನಡೀತಿದೆ.

ರಾವಣನಾಗಿ ಯಶ್ ನಟಿಸಿರುವುದು ಕನ್ನಡ ಚಿತ್ರರಂಗದಲ್ಲಿ ಕೂಡ ಕುತೂಹಲ ಮೂಡಿಸಿದೆ. ಮೊದಲ ಭಾಗದಲ್ಲಿ ಸೀತಾಪಹರಣದವರೆಗಿನ ಕಥೆ ಮಾತ್ರ ಹೇಳುತ್ತಿದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಯಶ್ ತೆರೆಮೇಲೆ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದಿಲ್ಲ. ಆದರೆ 2ನೇ ಭಾಗದಲ್ಲಿ ಲಂಕಾಧಿಪತಿಯ ದರ್ಬಾರ್ ಜೋರಾಗಿ ನಡೆಯಲಿದೆ.

ದಶರಥನಾಗಿ ಅರುಣ್ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್, ಶೂರ್ಪನಖಿಯಾಗಿ ರಕುಲ್ ಪ್ರೀತ್‌ಸಿಂಗ್ ಹಾಗೂ ಮಂಡೋದರಿಯಾಗಿ ಕಾಜಲ್ ಅಗರ್‌ವಾಲ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಎ. ಆರ್ ರಹಮಾನ್ ಹಾಗೂ ಹಾಲಿವುಡ್ ಸಂಗೀತ ಮಾಂತ್ರಿಕ ಹ್ಯಾನ್ಸ್ ಜಿಮ್ಮರ್ 'ರಾಮಾಯಣ' ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

More from Filmibeat

Read more about: ramayana yash ranbir kapoor
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X