»   » ವಿವಾದಾತ್ಮಕ ಚಿತ್ರ 'ಪದ್ಮಾವತ್' ಮೊದಲ ದಿನ ಗಳಿಸಿದ್ದೆಷ್ಟು?

ವಿವಾದಾತ್ಮಕ ಚಿತ್ರ 'ಪದ್ಮಾವತ್' ಮೊದಲ ದಿನ ಗಳಿಸಿದ್ದೆಷ್ಟು?

Posted By:
Subscribe to Filmibeat Kannada

ರಿಲೀಸ್ ಗೂ ಮುನ್ನ ದೊಡ್ಡ ವಿವಾದ ಹುಟ್ಟುಹಾಕಿದ್ದ 'ಪದ್ಮಾವತ್' ಚಿತ್ರ ಯಶಸ್ವಿಯಾಗಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಚಿತ್ರದ ವಿರುದ್ಧ ಪ್ರತಿಭಟನೆ, ಹೋರಾಟ ಮಾಡಿದ ರಜಪೂತರು ಕೂಡ ಚಿತ್ರವನ್ನ ಒಪ್ಪಿಕೊಂಡಿದ್ದಾರೆ. ಆದ್ರೆ, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ ಮಾತ್ರ ನಿಂತಿಲ್ಲ. ಪೊಲೀಸರ ಸರ್ಪಗಾವಲಿನಲ್ಲಿ ಸಿನಿಮಾ ಪ್ರದರ್ಶವಾಗುತ್ತಿದೆ.

ಇಷ್ಟೆಲ್ಲಾ ವಿವಾದಕ್ಕೆ ಕಾರಣವಾದ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಮೊದಲ ದಿನ ಎಷ್ಟು ಗಳಿಸಿರಬಹುದು ಎಂಬ ಕುತೂಹಲ ಕಾಡುವುದು ಸಹಜ. ಈ ಕುತೂಹಲಕ್ಕೆ ಉತ್ತರ ಸಿಕ್ಕಿದ್ದು, ಬಾಕ್ಸ್ ಆಫೀಸ್ ನಲ್ಲಿ 'ಪದ್ಮಾವತ್' ಚಿತ್ರದ ಗೆಲುವಿನ ಓಟ ಹೇಗಿದೆ ಎಂದು ಬಹಿರಂಗವಾಗಿದೆ.

ಭಾರತದಲ್ಲಿ ಸುಮಾರು 4000 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ತೆರೆಕಂಡಿದ್ದ 'ಪದ್ಮಾವತ್' ಮೊದಲ ದಿನ 25 ಕೋಟಿಯಿಂದ 30 ಕೋಟಿಯವರೆಗೂ ಗಳಿಕೆ ಕಂಡಿದೆ ಎನ್ನಲಾಗಿದೆ.

'ಪದ್ಮಾವತ್' ಮೊದಲ ವಿಮರ್ಶೆ: ಮೂಕವಿಸ್ಮಿತಗೊಳಿಸುವ ಬನ್ಸಾಲಿ ದೃಶ್ಯಕಾವ್ಯ

Padmaavat First Day Box Office Collection

ಬಾಲಿವುಡ್ ವಿಮರ್ಶಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗಳಿಕೆಯಲ್ಲೂ ಮೋಡಿ ಮಾಡಲಿದೆ ಎಂದಿದ್ದರು. ಅಂದ್ಹಾಗೆ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಶಾಹೀದ್ ಕಪೂರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

English summary
Sanjay Leela Bhansali's masterpiece Padmaavat has received a great response from the cinemagoers. Despite being a working day, the magnum opus got a good opening. It has been released in 4,800 screens across India.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada