Don't Miss!
- News
ಮಾನ್ವಿ: ಮಂಜೂರಾದ ಬಡವರ ಭೂಮಿಗೆ ಕಣ್ಣು ಹಾಕಿದ ಪ್ರಭಾವಿಗಳು, ಜನಾಕ್ರೋಶ
- Sports
LLC 2023: ಲೆಜೆಂಡ್ಸ್ ಲೀಗ್ನಲ್ಲಿ ಕೈಫ್, ಗೇಲ್, ಗಂಭೀರ್ ಸೇರಿದಂತೆ ಹಲವು ಸ್ಟಾರ್ಗಳು
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಬಿಡುಗಡೆ ಆಗುತ್ತಿದೆ ಪಾಕಿಸ್ತಾನದ ಸೂಪರ್ ಹಿಟ್ ಸಿನಿಮಾ
ಭಾರತ ಹಾಗೂ ಪಾಕಿಸ್ತಾನದ ನಡುವೆ ವಿಷಮ ಪರಿಸ್ಥಿತಿ ಇರುವ ನಡುವೆಯೇ ಪಾಕಿಸ್ತಾನದ ಸೂಪರ್ ಹಿಟ್ ಸಿನಿಮಾ ಒಂದು ಭಾರತದಲ್ಲಿ ಬಿಡುಗಡೆ ಆಗುತ್ತಿದೆ.
2016 ರಲ್ಲಿ ಉರಿ ದಾಳಿಯ ಬಳಿಕ ಪಾಕಿಸ್ತಾನದ ಯಾವುದೇ ಕಲಾವಿದರು ಭಾರತದ ಸಿನಿಮಾಗಳಲ್ಲಿ ನಟಿಸಲು ನಿಷೇಧ ಹೇರಲಾಗುತ್ತಿದ್ದು, ಭಾರತದಲ್ಲಿ ಜನಪ್ರಿಯಗೊಂಡಿದ್ದ ಫವಾದ್ ಸೇರಿದಂತೆ ಯಾವುದೇ ಪಾಕಿಸ್ತಾನಿ ನಟ-ನಟಿಯರು ಭಾರತದ ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಈಗ ಪಾಕಿಸ್ತಾನಿ ಸಿನಿಮಾ ಭಾರತದಲ್ಲಿ ಬಿಡುಗಡೆ ಆಗುತ್ತಿದೆ.
ಫವಾದ್ ಖಾನ್ ನಟಿಸಿರುವ 'ಮೌಲಾ ಜಟ್' ಹೆಸರಿನ ಪಾಕಿಸ್ತಾನಿ ಸಿನಿಮಾ ಡಿಸೆಂಬರ್ 30 ರಂದು ಭಾರತದಲ್ಲಿ ಬಿಡುಗಡೆ ಆಗುತ್ತಿದೆ. ಪಂಜಾಬ್ ಹಾಗೂ ದೆಹಲಿಯ ಕೆಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ.
'ಮೌಲಾ ಜಟ್' ಸಿನಿಮಾವು 1979 ರ ಅದೇ ಹೆಸರಿನ ಪಾಕಿಸ್ತಾನಿ ಸಿನಿಮಾದ ರೀಮೇಕ್ ಆಗಿದ್ದು, ಪಾಕಿಸ್ತಾನದಲ್ಲಿ ಇದೇ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆ ಆಗಿತ್ತು. 45 ಕೋಟಿಯಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ಪಾಕಿಸ್ತಾನ ಹಾಗೂ ಇತರೆ ದೇಶಗಳಲ್ಲಿ ಸುಮಾರು 200 ಕೋಟಿ ಗಳಿಸಿ ಸೂಪರ್ ಹಿಟ್ ಆಗಿದೆ. ಇದೀಗ ಭಾರತದಲ್ಲಿ ಬಿಡುಗಡೆ ಆಗಲಿದ್ದು, ಇಲ್ಲಿಯೂ ಉತ್ತಮ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ ಎಂದು ಐನಾಕ್ಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನಿ ಸಿನಿಮಾ ಭಾರತದಲ್ಲಿ ಬಿಡುಗಡೆ ಆಗುತ್ತಿರುವುದು ಇದು ಮೊದಲೇನೂ ಅಲ್ಲ. ದಶಕದ ಹಿಂದೆ ಹಲವು ಪಾಕಿಸ್ತಾನಿ ಸಿನಿಮಾಗಳು ಭಾರತದಲ್ಲಿ ಬಿಡುಗಡೆ ಆಗಿದ್ದವು. ಇತ್ತೀಚೆಗೆ ಸಹ ಪಾಕಿಸ್ತಾನದ ಕೆಲವು ಸಿನಿಮಾಗಳು ಭಾರತದಲ್ಲಿ ನಡೆವ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿದ್ದಿದೆ. ಇದೀಗ ಕಮರ್ಷಿಯಲ್ ಸಿನಿಮಾ ಒಂದು ಬಿಡುಗಡೆ ಆಗುತ್ತಿದೆ.
ಇನ್ನು 'ಮೌಲಾ ಜಟ್' ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿರುವ ಫವಾದ್ ಖಾನ್, ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಕಪೂರ್ ಆಂಡ್ ಸನ್ಸ್', 'ಏ ದಿಲ್ ಹೇ ಮುಷ್ಕಿಲ್', 'ಕುಬ್‌ಸೂರತ್', ಶಾರುಖ್ ಖಾನ್ ನಟನೆಯ 'ರಯೀಸ್' ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇನ್ನು ಭಾರತದ ಬಹುತೇಕ ಹಿಟ್ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುತ್ತಲೇ ಬಂದಿವೆ. ಹಲವು ದಶಕಗಳಿಂದಲೂ ಭಾರತದ ಸಿನಿಮಾಗಳಿಗೆ ಪಾಕಿಸ್ತಾನದಲ್ಲಿ ಬಹುದೊಡ್ಡ ಬೇಡಿಕೆ ಹಾಗೂ ಮಾರುಕಟ್ಟೆ ಇದೆ. ಆದರೆ ಎರಡೂ ದೇಶಗಳ ರಾಜತಾಂತ್ರಿಕ ಕಾರಣಗಳಿಂದಾಗಿ ಪರಸ್ಪರ ದೇಶಗಳ ಸಿನಿಮಾಗಳು ಬಿಡುಗಡೆ ಆಗುವುದು ಇತ್ತೀಚೆಗೆ ಕಡಿಮೆಯಾಗಿದೆ.