ಹಾಕಿದ ಕಡಿಮೆ ಬಂಡವಾಳ ವಾಪಸ್ ಪಡೆಯಲು ಒದ್ದಾಡುತ್ತಿರುವ ಸಿನಿಮಾವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ!

ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿಲ್ಲ. ಹಾಕಿದ್ದ ಕಡಿಮೆ ಬಂಡವಾಳವನ್ನು ಕೂಡ ವಾಪಸ್ ಪಡೆಯಲು ಪರದಾಡುತ್ತಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಇತ್ತೀಚಿನ ಭಾಷಣದಲ್ಲಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಇತ್ತೀಚಿಗೆ ಬಿಡುಗಡೆಯಾದ ದಿ ವ್ಯಾಕ್ಸಿನ್ ವಾರ್ ಸಿನಿಮಾವನ್ನು ಶ್ಲಾಘಿಸಿದ್ದಾರೆ. ರಾಜಸ್ಥಾನದ ಜೋಧ್‌ಪುರದಲ್ಲಿ ಚಿತ್ರದ ಕುರಿತು ಮಾತನಾಡಿದ ಅವರು ದೇಶದ ಮೆಸೇಜ್ ಅನ್ನು ಹೈಲೈಟ್ ಮಾಡಿದ್ದಕ್ಕಾಗಿ ಇಡೀ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

PM Narendra Modi praises Vivek Agnihotris The Vaccine War in Rajasthan

ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ನಾನಾ ಪಾಟೇಕರ್, ಸಪ್ತಮಿ ಗೌಡ, ಪಲ್ಲವಿ ಜೋಶಿ, ರೈಮಾ ಸೇನ್ ಮತ್ತು ಅನುಪಮ್ ಖೇರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ದಿ ವ್ಯಾಕ್ಸಿನ್ ವಾರ್ ಸಿನಿಮಾ ಮತ್ತು ಪ್ರಧಾನಿ ನರೇಂದ್ರ ಮೋದಿ

ರಾಜಸ್ಥಾನದ ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, "ದಿ ವ್ಯಾಕ್ಸಿನ್ ವಾರ್ ಎಂಬ ಚಲನಚಿತ್ರವನ್ನು ಚಿತ್ರಮಂದಿರಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ನಾನು ಕೇಳಿದ್ದೇನೆ. ಇದು ನಮ್ಮ ದೇಶದ ವಿಜ್ಞಾನಿಗಳು ಹಗಲಿರುಳು ಶ್ರಮಿಸಿದ, ಋಷಿಗಳಂತೆ ತಮ್ಮ ಪ್ರಯೋಗಾಲಯಗಳಲ್ಲಿ ಕೋವಿಡ್ ವಿರುದ್ಧ ಹೋರಾಡಲು ತಮ್ಮನ್ನು ತಾವು ಅರ್ಪಿಸಿಕೊಂಡ ಅವಿರತ ಪ್ರಯತ್ನಗಳನ್ನು ಚಿತ್ರಿಸುತ್ತದೆ" ಎಂದು ಹೇಳಿದ್ದಾರೆ.

"ನಮ್ಮ ಮಹಿಳಾ ವಿಜ್ಞಾನಿಗಳು ಕೂಡ ಅದ್ಭುತವಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರದಲ್ಲಿ ಈ ಎಲ್ಲ ಅಂಶಗಳನ್ನು ತೋರಿಸಲಾಗಿದೆ. ಚಿತ್ರ ನೋಡಿದ ನಂತರ ನಮ್ಮ ವಿಜ್ಞಾನಿಗಳು ಏನು ಮಾಡಿದ್ದಾರೆಂದು ತಿಳಿದು ಭಾರತೀಯರು ಹೆಮ್ಮೆಯಿಂದ ಹಿಗ್ಗಿ ಹೋಗಿದ್ದಾರೆ. ಭಾರತೀಯ ವಿಜ್ಞಾನಿಗಳು ಮತ್ತು ವಿಜ್ಞಾನದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವುದಕ್ಕಾಗಿ ಈ ಚಿತ್ರದ ನಿರ್ದೇಶಕರನ್ನು ನಾನು ಅಭಿನಂದಿಸುತ್ತೇನೆ" ಎಂದು ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.

PM Narendra Modi praises Vivek Agnihotris The Vaccine War in Rajasthan

ಪ್ರಧಾನಿ ಮೋದಿ ಟ್ವೀಟ್‌ಗೆ ವಿವೇಕ್ ಅಗ್ನಿಹೋತ್ರಿ ಹೇಳಿದ್ದೇನು?

ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತಿಪಡಿಸಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ "ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ನಾಯಕತ್ವದಲ್ಲಿ ಸ್ಥಳೀಯ ಲಸಿಕೆಯನ್ನು ತಯಾರಿಸುವಲ್ಲಿ ಭಾರತೀಯ ವಿಜ್ಞಾನಿಗಳು, ವಿಶೇಷವಾಗಿ ಮಹಿಳಾ ವಿಜ್ಞಾನಿಗಳ ಕೊಡುಗೆ ಬಗ್ಗೆ ಮಾತನಾಡಿರುವುದನ್ನು ಕೇಳಲು ಖುಷಿಯಾಗಿದೆ. ಇದರಿಂದ ಮಹಿಳಾ ವಿಜ್ಞಾನಿಗಳು ಕರೆ ಮಾಡಿ ಭಾವುಕರಾದರು 'ಮೊದಲ ಬಾರಿಗೆ ಪ್ರಧಾನಿಯೊಬ್ಬರು ವೈರಾಲಜಿಸ್ಟ್‌ಗಳನ್ನು ಹೊಗಳಿದ್ದಾರೆ' ಎಂದು ಅವರು ಹೇಳಿದ್ದಾರೆ. ಕೃತಜ್ಞತೆ" ಎಂಬುದನ್ನು ಸೇರಿಸಿದ್ದಾರೆ.

ದಿ ವ್ಯಾಕ್ಸಿನ್ ವಾರ್ ಅನ್ನು ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ. ನಟಿ ಪಲ್ಲವಿ ಜೋಶಿ ಮತ್ತು ಐ ಆಮ್ ಬುದ್ಧ ನಿರ್ಮಿಸಿದ್ದಾರೆ. ಸಿನಿಮಾ ಸೆಪ್ಟೆಂಬರ್ 28 ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ್ ಮೂರೇ ದಿನಕ್ಕೆ ಒಂದು ಟಿಕೆಟ್ ಕೊಂಡರೆ ಒಂದು ಉಚಿತ ಆಫರ್ ಕೂಡ ಘೋಷಿಸಿದ್ದರು. ಆದರೂ ಕೂಡ ಕಲೆಕ್ಷನ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದಿ ವ್ಯಾಕ್ಸಿನ್ ವಾರ್

ದಿ ವ್ಯಾಕ್ಸಿನ್ ವಾರ್ ದಿನಿಮಾ ನಿರ್ದೇಶಕರ ಪ್ರಕಾರ ಇದು 'ಭಾರತ ಮತ್ತು ಜಗತ್ತಿಗೆ ಕೈಗೆಟುಕುವ ಲಸಿಕೆಯನ್ನು ಅಭಿವೃದ್ಧಿಪಡಿಸುವ ಮೂಲಕ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಭಾರತೀಯ ವಿಜ್ಞಾನಿಗಳು ನಡೆಸಿದ ಹೋರಾಟದ ನೈಜ ಕಥೆಯನ್ನು ಚಲನಚಿತ್ರವು ಆಧರಿಸಿದೆ'. ಸಿನಿಮಾ 10 ಕೋಟಿ ಬಜೆಟ್‌ನಲ್ಲಿ ತಯಾರಾಗಿದೆ. ಆದರೆ ದೇಶದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿಲ್ಲ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಇದುವರೆಗೆ 8.15 ಕೋಟಿ ಮಾತ್ರ ಕಲೆಕ್ಷನ್ ಮಾಡಿದೆ.

More from Filmibeat

English summary
PM Narendra Modi praises Vivek Agnihotri's 'The Vaccine War' in Rajasthan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X