ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 34 ವರ್ಷದ ನಟ ಸುಶಾಂತ್ ನಿಧನದ ಸುದ್ದಿ ಕೇಳಿ ಇಡೀ ಭಾರತೀಯ ಚಿತ್ರರಂಗ ಆಘಾತದಲ್ಲಿದೆ.

Recommended Video

ರೀಲ್ ನಲ್ಲಿ ಪರಿಹಾರ ಕೊಟ್ಟ ಸುಶಾಂತ್ ರಿಯಲ್ ಲೈಫ್ ನಲ್ಲಿ ಸೋತಿದ್ಯಾಕೆ? |Sushant Singh Rajput|FILMIBEAT KANNADA

ಇನ್ನೂ ಬಾಳಿ ಬದುಕಬೇಕಿದ್ದ ನಟ ಜೀವನದ ಪಯಣವನ್ನು ಅರ್ಧಕ್ಕೆ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವುದು ಎಲ್ಲರಿಗೂ ಶಾಕ್ ನೀಡಿದೆ. ಸುಶಾಂತ್ ನಿಧನಕ್ಕೆ ಭಾರತೀಯ ಸಿನಿತಾರೆಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಹ ಸುಶಾಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. "ಸುಶಾಂತ್ ಸಿಂಗ್ ರಜಪೂತ್, ಪ್ರತಿಭಾವಂತ ನಟ ಬಹುಬೇಗ ಜೀವನದ ಪಯಣ ಮುಗಿಸಿದ್ದಾರೆ. ಕಿರುತೆರೆ ಮತ್ತು ಸಿನಿಮಾರಂಗದಲ್ಲಿ ಅದ್ಭುತ ಸಾಧನೆ ಮಾಡಿದವರು. ಮನರಂಜನಾ ಕ್ಷೇತ್ರದಲ್ಲಿ ಅವರು ಬೆಳೆದ ರೂೀತಿ ಅನೇಕರಿಗೆ ಸ್ಫೂರ್ತಿ ಮತ್ತು ಅವರು ಅನೇಕ ಸ್ಮರಣೀಯ ಸಿನಿಮಾಗಳನ್ನು ಬಿಟ್ಟುಹೋಗಿದ್ದಾರೆ. ಸುಶಾಂತ್ ನಿಧನದ ಸುದ್ದಿ ಆಘಾತವುಂಟು ಮಾಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Prime Minister Narendra Modi Mourns To Sushant Singh Death

ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಆದರೆ ಸುಶಾಂತ್ ಕಳೆದ ಕೆಲವು ತಿಂಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಎಂ.ಎಸ್ ಧೋನಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ್ದ ನಟ ಸುಶಾಂತ್ ಸಿಂಗ್ 11 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ವರ್ಷ ಚಿಚೋರೆ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಚಿಚೋರೆ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಾಕಷ್ಟು ಸಿನಿಮಾಗಳಲ್ಲಿ ಸುಶಾಂತ್ ಬ್ಯುಸಿಯಾಗಿದ್ದರು.

More from Filmibeat

English summary
Prime Minister Narendra Modi mourn to Sushant Singh death. Actor Sushant Singh Rajput commit suicide at his Mumbai residence.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X