ಅಮೆರಿಕದಲ್ಲಿ ಪ್ರಿಯಾಂಕಾ ಮನೆ ಗೃಹಪ್ರವೇಶ; ಹಿಂದೂ ಸಂಪ್ರದಾಯ ಮರೆಯದ ನಟಿ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ. ಅಮೆರಿದ ಸೊಸೆ ಪ್ರಿಯಾಂಕಾ ಪತಿ ನಿಕ್ ಜೋನಸ್ ಜೊತೆ ಸಂತೋಷದ ಜೀವನ ನಡೆಸುತ್ತಿದ್ದಾರೆ. ಸದ್ಯ ಪ್ರಿಯಾಂಕಾ ತನ್ನ ಆತ್ಮಚರಿತ್ರೆ 'ಅನ್ ಫಿನಿಶಿಡ್' ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಅಮೆರಿಕದ ತಮ್ಮ ಕನಸಿನ ಮನೆಯ ಗೃಹಪ್ರವೇಶ ಸಮಾರಂಭ ಮಾಡಿದ್ದಾರೆ.

ಹೌದು, ಇತ್ತೀಚಿಗಷ್ಟೆ ಪ್ರಿಯಾಂಕಾ ದಂಪತಿ ಅಮೆರಿಕದಲ್ಲಿ ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ. ವಿಶೇಷ ಎಂದರೆ ಭಾರತೀಯ ಹಿಂದೂ ಸಂಪ್ರದಾಯದಂತೆ ಗೃಹ ಪ್ರವೇಶ ಮಾಡಿ ಭಾರತೀಯರ ಹೃದಯ ಗೆದ್ದಿದ್ದಾರೆ. ಅಮೆರಿಕದ ಸೊಸೆಯಾದರೂ ಭಾರತದ ಸಂಸ್ಕೃತಿ ಮರೆಯದ ಪ್ರಿಯಾಂಕಾ ಗುಣಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪತಿ ನಿಕ್ ಜೋನಸ್ ಜೊತೆ ಗೃಹಪ್ರವೇಶ ಸಮಾರಂಭದಲ್ಲಿ ಭಾಗಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಲೆಮೇಲೆ ಕಳಶ ಹೊತ್ತುಕಂಡು ಮನೆಯೊಳಗೆ ಪ್ರವೇಶ ಮಾಡುತ್ತಿರುವ ದೇಶಿ ಗರ್ಲ್ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋ ಎಲ್ಲಾ ಕಡೆ ಹರಿದಾಡುತ್ತಿದೆ. ಪ್ರಿಯಾಂಕಾ ಹಿಂದೆ ಪತಿ ನಿಕ್ ಕೈಯಲ್ಲಿ ಪೂಜೆ ಸಾಮಗ್ರಿ ಹಿಡಿದು ಮನೆಯೊಳಗೆ ಬರುತ್ತಿದ್ದಾರೆ. ಈ ಫೋಟೋ ಪ್ರಿಯಾಂಕಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Priyanka Chopra and Nick Jonas house warming ceremony photo goes viral

ಪ್ರಿಯಾಂಕಾ ನಟಿ ಮಸಾಬಾ ಗುಪ್ತಾ ಅವರ ಡಿಸೈನ್ ಡ್ರೆಸ್ ಧರಿಸಿದ್ದಾರೆ. ಈ ಫೋಟೋವನ್ನು ಹೌಸ್ ಆಫ್ ಮಸಾಬಾ ಗುಪ್ತಾ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ಜಾಗತಿಕ ನಟಿಯಾಗಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಅಮೆರಿಕದಲ್ಲೂ ಹಿಂದೂ ಸಂಪ್ರದಾಯ ಮರೆತಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಪ್ರಿಯಾಂಕಾ ಸದಾ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಪ್ರಿಯಾಂಕಾ ಸದ್ಯ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಎರಡು ವೆಬ್ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಲ್ಲಿ ಕೊನೆಯದಾಗಿ ವೈಟ್ ಟೈಗರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.

Recommended Video

ಪ್ರಶಾಂತ್ ನೀಲ್ ಹೇಳಿದ ಸುಳ್ಳನ್ನು ಮಾದ್ಯಮಗಳ ಮುಂದೆ ಬಿಚ್ಚಿಟ್ಟ ರವಿ ಬಸ್ರೂರ್

More from Filmibeat

English summary
Priyanka Chopra and Nick Jonas house warming ceremony photo goes viral. The couple perform Hindu rituals at the ceremony.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X