For Quick Alerts
  ALLOW NOTIFICATIONS  
  For Daily Alerts

  ಬ್ಲ್ಯೂ ಫಿಲ್ಮ್ ದಂಧೆ ಪ್ರಕರಣ; ಜುಲೈ 23ರವರೆಗೂ ಪೊಲೀಸ್ ಕಸ್ಟಡಿಯಲ್ಲಿ ರಾಜ್ ಕುಂದ್ರ

  |

  ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಇಂದು ಮಂಗಳವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

  ನಿನ್ನೆ (ಜುಲೈ 19) ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದರು.

  ಅಶ್ಲೀಲ ಸಿನಿಮಾಗಳ ಬಗ್ಗೆ ರಾಜ್ ಕುಂದ್ರಾ ಹಳೆ ಟ್ವೀಟ್ ವೈರಲ್ಅಶ್ಲೀಲ ಸಿನಿಮಾಗಳ ಬಗ್ಗೆ ರಾಜ್ ಕುಂದ್ರಾ ಹಳೆ ಟ್ವೀಟ್ ವೈರಲ್

  ''ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್‌ಗಳನ್ನು ಬಳಸಿ ಮೊಬೈಲ್‌ ಆಪ್‌ಗಳಿಗೆ ಅಪ್‌ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದರು.

  ಅಶ್ಲೀಲ ಚಿತ್ರ ಶೂಟಿಂಗ್ & ಮಾರಾಟ: ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್ | Filmibeat Kannada

  ರಾಜ್ ಕುಂದ್ರಾ ಬಂಧನ ಆಗುತ್ತಿದ್ದಂತೆ, ಕುಂದ್ರಾ, ಪೋರ್ನ್ (ನೀಲಿ ಚಿತ್ರ) ಬಗ್ಗೆ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಪೋರ್ನ್ ವಿಡಿಯೋಗಳ ಬಗ್ಗೆ 2012ರಲ್ಲಿ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದರು, ''ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್‌ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ'' ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಟ್ವೀಟ್ ಈಗ ವೈರಲ್ ಆಗುತ್ತಿವೆ.

  English summary
  Shilpa Shettys' Husband Raj Kundra and his close aid Ryan Thorap both sent to police custody till 23rd of July.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X