For Quick Alerts
  ALLOW NOTIFICATIONS  
  For Daily Alerts

  ರಾಜ್ ಕುಂದ್ರ ಅಶ್ಲೀಲ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೂ ಗೊತ್ತಿತ್ತಾ?, ಪೊಲೀಸರ ವಿಚಾರಣೆ

  |

  ನೀಲಿ ಚಿತ್ರ ನಿರ್ಮಾಣದ ದಂಧೆ ಆರೋಪಿ ರಾಜ್ ಕುಂದ್ರ ಪ್ರಕರಣದಲ್ಲಿ ಪತ್ನಿ ಶಿಲ್ಪಾ ಶೆಟ್ಟಿಯೂ ಭಾಗಿಯಾಗಿದ್ದಾರಾ ಎಂದು ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುಂಬೈನ ಜುಹುನಲ್ಲಿರುವ ಶಿಲ್ಪಾ ಶೆಟ್ಟಿ ಬಂಗಲೆ ಮೇಲೆ ಅಪರಾಧ ವಿಭಾಗದ ಪೊಲೀಸರ ತಂಡ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಳಿಕ ಶಿಲ್ಪಾ ಶೆಟ್ಟಿ ಹೇಳಿಕೆ ಪಡೆದಿದ್ದಾರೆ.

  ಪತಿಯ ವ್ಯವಹಾರದಲ್ಲಿ ಶಿಲ್ಪಾ ಶೆಟ್ಟಿ ಕೂಡ ಭಾಗಿಯಾಗಿದ್ದಾರಾ, ವ್ಯವಹಾರದ ಬಗ್ಗೆ ಗೊತ್ತಿತ್ತಾ ಎನ್ನುವ ಪ್ರಶ್ನೆಗಳನ್ನು ಶಿಲ್ಪಾ ಎದುರಿಸಿದ್ದಾರೆ ಎನ್ನಲಾಗುತ್ತಿದೆ. ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರ ವಿಯಾನ್ ಕಂಪನೆಯ ನಿರ್ದೇಶನದಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಶಿಲ್ಪಾ ಶೆಟ್ಟಿ ವಿಚಾರಣೆ ಮುಖ್ಯವಾಗಲಿದೆ.

  ರಾಜ್ ಕುಂದ್ರ ಬಂಧನದ ಬಳಿಕ ಮುಂಬೈನ ಅಂಧೇರಿ ವೆಸ್ಟ್ ನಲ್ಲಿರುವ ಈ ಕಂಪೆನಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ಅಶ್ಲೀಲ ಚಿತ್ರಗಳ ಬೃಹತ್ ಡೇಟಾವನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 100ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಇದ್ದವು ಎನ್ನುವ ಮಾಹಿತಿ ತಿಳಿದುಬಂದಿದೆ.

  ಅಶ್ಲೀಲ ವಿಡಿಯೋಗಳನ್ನು ಚಿತ್ರಿಸಿ ಮೊಬೈಲ್ ಅಪ್ಲಿಕೇಷನ್ ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಆರೋಪದಲ್ಲಿ ರಾಜ್ ಕುಂದ್ರ ಅವರನ್ನು ಮುಂಬೈ ಪೊಲೀಸರು ಜುಲೈ 19ರಂದು ಬಂಧಿಸಿದ್ದರು. ಬಳಿಕ ರಾಜ್ ಕುಂದ್ರ ಅವರನ್ನು ಜುಲೈ 23ರ ವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇವತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೊಲೀಸ್ ಕಸ್ಟಡಿ ಅವಧಿಯನ್ನು ಜುಲೈ 27ರ ವರೆಗೂ ಮುಂದೂಡಲಾಗಿದೆ.

  English summary
  Raj Kundra pornography case: Shilpa Shetty Statement recorded by Mumbai.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X