Ramayana First Review: ಎಂಟು ತಿಂಗಳು ಮುನ್ನ 'ರಾಮಾಯಣ' ಮೊದಲ ಪ್ರದರ್ಶನ; ಸಿನಿಮಾ ನೋಡಿದವರು ಏನಂದ್ರು?

ನಿತೇಶ್ ತಿವಾರಿ ನಿರ್ದೇಶನದಲ್ಲಿ ರಣ್‌ಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ನಟನೆಯ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಎರಡು ಭಾಗಗಳಾಗಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಾಗುತ್ತಿದೆ. 4000 ಕೋಟಿ ರೂ. ಬಜೆಟ್‌ನಲ್ಲಿ ಎರಡೂ ಸಿನಿಮಾಗಳನ್ನು ಕಟ್ಟಿಕೊಡಲಾಗ್ತಿದೆ. 8 ತಿಂಗಳು ಮುನ್ನ ಲಾಸ್ ಏಂಜಲೀಸ್‌ನ ಸಿನೆಮಾರ್ಕ್ ಪ್ಲಾಯಾ ವಿಸ್ಟಾ ಥಿಯೇಟರ್‌ನಲ್ಲಿ ಚಿತ್ರ ಪ್ರದರ್ಶನ ಮಾಡಿರುವುದಾಗಿ ದಿ ವೀಕ್ ವೆಬ್‌ಸೈಟ್ ವರದಿ ಮಾಡಿದೆ.

ಕೆಲ ಪ್ರೇಕ್ಷಕರಿಗೆ ಮಾತ್ರ 'ರಾಮಾಯಣ' ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು ಎನ್ನಲಾಗ್ತಿದೆ. ಇದು ಕೇವಲ ಫಸ್ಟ್‌ ಕಟ್ ಮಾತ್ರ. ಅಂದಹಾಗೆ ಸಿನಿಮಾ ನೋಡಿದವರು ಮೆಚ್ಚಿ ಕೊಂಡಾಡಿದ್ದಾರೆ. ಸಾವಿರಾರು ವರ್ಷಗಳಿಂದ ಭಾರತದಲ್ಲಿ ಬೇರೂರಿರುವ ಕಥೆಯನ್ನು ಹೇಲಿರುವ ಪರಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಅದೇ ರೀತಿ ಚಿತ್ರದ ಸ್ಕೇಲ್ ಹಾಗೂ ಅದ್ಭುತ ವಿಷ್ಯುವಲ್ ಎಫೆಕ್ಟ್ ಬಗ್ಗೆ ಸಿನಿಮಾ ನೋಡಿದವರು ಮಾತನಾಡುತ್ತಿದ್ದಾರೆ ಎಂದು ವರದಿಯಾಗಿದೆ. ಚಿತ್ರದ ಮೊದಲ ಪ್ರದರ್ಶನಕ್ಕೆ ಪ್ರೇಕ್ಷಕರಿಂದ ಸಿಕ್ಕಿರುವ ರೆಸ್ಪಾನ್ಸ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ನಡೀತಿದೆ.

Ramayana First Screening in Los Angeles Sparks Massive Buzz Ahead of Diwali Release

'ರಾಮಾಯಣ' ಚಿತ್ರದ ಮೊದಲ ಭಾಗ ಇದೇ ವರ್ಷ ದೀಪಾವಳಿ ಸಂಭ್ರಮದಲ್ಲಿ ತೆರೆಗೆ ಬರಲಿದೆ. 2ನೇ ಭಾಗ ಮುಂದಿನ ವರ್ಷ ತೆರೆಗೆ ಬರುವುದು ಖಚಿತವಾಗಿದೆ. ಘಟಾನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್ ಹಾಗೂ ಸೀತಾಮಾತೆಯಾಗಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾವಣನಾಗಿ ನಟ ಯಶ್ ಅಬ್ಬರಿಸಿದ್ದಾರೆ. ನಿಮಿತ್ ಮಲ್ಹೋತ್ರಾ ಜೊತೆಗೆ ಚಿತ್ರ ನಿರ್ಮಾಣಕ್ಕೂ ರಾಕಿಂಗ್ ಸ್ಟಾರ್ ಕೈ ಜೋಡಿಸಿದ್ದಾರೆ.

ಹನುಮಂತನಾಗಿ ಸನ್ನಿ ಡಿಯೋಲ್, ಲಕ್ಷ್ಮಣನಾಗಿ ರವಿ ದುಬೆ, ಮಂಡೋದರಿಯಾಗಿ ಕಾಜಲ್ ಅಗರ್‌ವಾಲ್, ದಶರಥನಾಗಿ ಅರುಣ್ ಗೋವಿಲ್, ಕೈಕೇಯಿ ಆಗಿ ಲಾರಾ ದತ್ತಾ, ಶೂರ್ಪನಖಿಯಾಗಿ ರಕುಲ್ ಪ್ರೀತ್‌ ಸಿಂಗ್ ಹೀಗೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಶೀಘ್ರದಲ್ಲೇ ಚಿತ್ರದ ಫಸ್ಟ್ ಟೀಸರ್ ಬಿಡುಗಡೆ ಮಾಡುವ ಪ್ರಯತ್ನಗಳು ನಡೀತಿದೆ. ಅದಕ್ಕಾಗಿ ರಾಮನವಮಿ ಸಂಭ್ರಮದಲ್ಲಿ ಮಾರ್ಚ್ 26ರಂದು ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ಮುಂದಾಗಿದೆ.

Ramayana First Screening in Los Angeles Sparks Massive Buzz Ahead of Diwali Release

ಈಗಾಗಲೇ ಬಹುತೇಕ ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೀತಿದೆ. ಶೀಘ್ರದಲ್ಲೇ ಫೈನಲ್ ಕಾಪಿ ಸಿದ್ಧವಾಗಲಿದೆ. 'ರಾಮಾಯಣ' ಚಿತ್ರಕ್ಕೆ ಹ್ಯಾನ್ಸ್ ಜಿಮ್ಮರ್ ಹಾಗೂ ಎ. ಆರ್ ರಹಮಾನ್ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ. ಚಿತ್ರಕ್ಕೆ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ದೇಶ ವಿದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಸಿನಿಮಾ ಬಿಡುಗಡೆ ಪ್ರಯತ್ನ ನಡೀತಿದೆ.

ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ವಿದೇಶದ ಭಾಷೆಗಳಲ್ಲಿ ಕೂಡ 'ರಾಮಾಯಣ' ಸಿನಿಮಾ ತೆರೆಗಪ್ಪಳಿಸಲಿದೆ. DNEG ಸಂಸ್ಥೆ ಚಿತ್ರದ ವಿಷ್ಯುವಲ್ ಎಫೆಕ್ಟ್ ಕೆಲಸಗಳಲ್ಲಿ ಮಗ್ನವಾಗಿದೆ. ಭಾರತೀಯ ಚಿತ್ರರಂಗದಲ್ಲೇ ಇದು ಬಹಳ ಅದ್ಧೂರಿ ಸಿನಿಮಾ ಎನಿಸಿಕೊಂಡಿದೆ. ಈಗಾಗಲೇ ಎಲ್ಲರಿಗೂ ಗೊತ್ತಿರುವ ಕಥೆಯನ್ನು ಯಾವ ರೀತಿಯಲ್ಲಿ ತೆರೆಗೆ ತರುತ್ತಾರೆ ಎನ್ನುವ ಕುತೂಹಲ ಮೂಡಿದೆ.

ದೊಡ್ಡಮಟ್ಟದಲ್ಲಿ 'ರಾಮಾಯಣ' ಸಿನಿಮಾ ಮಾರ್ಕೆಟಿಂಗ್ ಹಾಗೂ ಪ್ರಮೋಷನ್ ಪ್ಲ್ಯಾನ್ ನಡೀತಿದೆ. 20 ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಪ್ರಯತ್ನಗಳು ನಡೀತಿದೆ. ಹಾಲಿವುಡ್ ಸಿನಿಮಾಗಳು ಜಗತ್ತಿನ ಮೂಲೆ ಮೂಲೆಯಲ್ಲಿ ಬಿಡುಗಡೆ ಆಗುವಂತೆ ಈ ಸಿನಿಮಾ ಎಲ್ಲಾ ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

'ರಾಮಾಯಣ' ಚಿತ್ರ ನಿರ್ಮಾಣಕ್ಕೆ ಕೈ ಜೋಡಿಸಿ ರಾವಣನ ಪಾತ್ರದಲ್ಲಿ ಯಶ್ ನಟಿಸಿರುವುದು ಕನ್ನಡ ಚಿತ್ರರಂಗದಲ್ಲಿ ಕೂಡ ನಿರೀಕ್ಷೆಗೆ ಹುಟ್ಟಾಕ್ಕಿದೆ. 'ಟಾಕ್ಸಿಕ್' ಸಿನಿಮಾ ಬಳಿಕ ಈ ಸಿನಿಮಾ ಬರುತ್ತಿರುವುದು ಮತ್ತೊಂದು ವಿಶೇಷ.

More from Filmibeat

Read more about: ramayana yash ranbir kapoor
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X