ಶಾರುಖ್ ಖಾನ್-ಅಟ್ಲೀ ಸಿನಿಮಾಗೆ ದಕ್ಷಿಣದ ಸ್ಟಾರ್ ನಟ ಎಂಟ್ರಿ

By ಫಿಲ್ಮಿಬೀಟ್ ಡೆಸ್ಕ್

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅನೇಕ ವರ್ಷಗಳ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಸದ್ಯ ಪಠಾಣ್ ಸಿನಿಮಾದ ಚಿತ್ರೀಕರಣದ ನಡುವೆ ಈಗ ಮತ್ತೊಂದು ಬಹುನಿರೀಕ್ಷೆಯ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಶಾರುಖ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಅಟ್ಲೀ ನಿರ್ದೇಶನದ ಹೊಸ ಸಿನಿಮಾ ಪ್ರಾರಂಭವಾಗಿದ್ದು, ಶಾರುಖ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಅಟ್ಲೀ ಮತ್ತು ಶಾರುಖ್ ಕಾಂಬಿನೇಷನ್‌ನ ಹೊಸ ಸಿನಿಮಾ ಸದ್ಯ ಪುಣೆಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ವಿಶೇಷ ಎಂದರೆ ಚಿತ್ರದಲ್ಲಿ ಶಾರುಖ್ ಗೆ ಜೋಡಿಯಾಗಿ ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ನಯನತಾರಾ ಕೂಡ ಪುಣೆ ತಲುಪಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಅಟ್ಲೀ ಮೊದಲ ಬಾರಿಗೆ ಬಾಲಿವುಡ್ ಸ್ಟಾರ್, ಕಿಂಗ್ ಖಾನ್‌ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಟ್ಲೀ ಮತ್ತು ಶಾರುಖ್ ಸಿನಿಮಾ ಮಾಡ್ತಾರೆ ಎನ್ನುವ ಸುದ್ದಿ ಅನೇಕ ತಿಂಗಳಿಂದ ಸದ್ದು ಮಾಡುತ್ತಿತ್ತು. ಕೊನೆಗೂ ಚಿತ್ರೀಕರಣ ಪ್ರಾರಂಭವಾಗಿದೆ. ಅಂದಹಾಗೆ ಹೊಸ ಸಿನಿಮಾದ ಬಗ್ಗೆ ಶಾರುಖ್, ಅಟ್ಲೀ ಅಥವಾ ನಯನತಾರಾ ಯಾರು ಕೂಡ ಈ ಬಗ್ಗೆ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ. ಆದರೆ ಚಿತ್ರೀಕರಣ ಪ್ರಾರಂಭವಾಗಿರುವ ವಿಚಾರ ವೈರಲ್ ಆಗಿದೆ.

Rana Daggubati likely to joins Shah Rukh Khan and Atlee Film

ಸದ್ಯ ಚಿತ್ರದ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಸುದ್ದಿ ಹೊರಬಿದ್ದಿದೆ. ಶಾರುಖ್ ಸಿನಿಮಾಗೆ ದಕ್ಷಿಣ ಭಾರತೀಯ ಸಿನಿಮಾರಂಗ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇತ್ತೀಚಿಗಷ್ಟೆ ನಟಿ ಪ್ರಿಯಾಮಣಿ ಶಾರುಖ್ ಸಿನಿಮಾ ಸೇರಿಕೊಂಡಿದ್ದಾರೆ ಎನ್ನುವ ಸುದ್ದಿಯ ಬೆನ್ನಲ್ಲೇ ಮತ್ತೊಬ್ಬ ನಟನ ಎಂಟ್ರಿ ಅಚ್ಚರಿ ಮೂಡಿಸಿದೆ.

ಅಂದಹಾಗೆ ಶಾರುಖ್ ಮತ್ತು ಅಟ್ಲೀ ಸಿನಿಮಾಗೆ ಎಂಟ್ರಿ ಕೊಟ್ಟ ಖ್ಯಾತ ನಟ ಮತ್ಯಾರು ಅಲ್ಲ ತೆಲುಗಿನ ಸ್ಟಾರ್ ನಟ ರಾಣಾ ದಗ್ಗುಬಾಟಿ. ಶಾರುಖ್ ಸಿನಿಮಾದಲ್ಲಿ ರಾಣಾ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಚಿತ್ರದಲ್ಲಿ ಶಾರುಖ್ ಖಾನ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಈಗಾಗಲೇ ವೈರಲ್ ಆಗಿದೆ. ಇದೀಗ ರಾಣಾ ವಿಲನ್ ಪಾತ್ರಕ್ಕೆ ಫಿಕ್ಸ್ ಆಗಿರುವುದು ಬಹುತೇಕ ಖಚಿತವಾಗಿದೆ.

ಇನ್ನು ನಟಿ ಪ್ರಿಯಮಣಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯಾರು ಕೂಡ ಈ ಈ ಸಿನಿಮಾದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿಲ್ಲ. ಆದರೆ ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡಲಿದ್ದು, ಒಂದಿಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಎನ್ನುವ ಮಾತು ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.

Rana Daggubati likely to joins Shah Rukh Khan and Atlee Film

ಇನ್ನು ವಿಶೇಷ ಎಂದರೆ ಶಾರುಖ್ ಮತ್ತು ಅಟ್ಲೀ ಸಿನಿಮಾಗೆ 'ಜವಾನ್' ಎಂದು ಟೈಟಲ್ ಇಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಸಧ್ಯದಲ್ಲೇ ರಿವೀಲ್ ಆಗುವ ಸಾಧ್ಯತೆ ಇದ್ದು, ಇನ್ನು ಯಾರೆಲ್ಲ ನಟಿಸಲಿದ್ದಾರೆ, ಏನೆಲ್ಲ ವಿಶೇಷತೆಗಳಿವೆ ಎನ್ನುವ ಕುತೂಹಲಕ್ಕೆ ತೆರೆಬೀಳಲಿದೆ.

More from Filmibeat

English summary
Famous Actor Rana Daggubati likely to joins Shah Rukh Khan and Atlee Film.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X