For Quick Alerts
  ALLOW NOTIFICATIONS  
  For Daily Alerts

  ಮುಂಬೈನಲ್ಲಿ ಕರ್ಫ್ಯೂ: ಬಾಯ್ ಫ್ರೆಂಡ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ ನಟಿ ಆಲಿಯಾ ಭಟ್

  |

  ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ.

  ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೀಗ ನಟಿ ಆಲಿಯಾ ಭಟ್ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ.

  ಆಲಿಯಾ ಭಟ್ ನಟನೆಯ ಬಹುನಿರೀಕ್ಷೆಯ 'ಗಂಗೂಬಾಯಿ ಕಾಠಿಯಾವಾಡಿ' ಒಟಿಟಿಯಲ್ಲಿ ಬಿಡುಗಡೆ?ಆಲಿಯಾ ಭಟ್ ನಟನೆಯ ಬಹುನಿರೀಕ್ಷೆಯ 'ಗಂಗೂಬಾಯಿ ಕಾಠಿಯಾವಾಡಿ' ಒಟಿಟಿಯಲ್ಲಿ ಬಿಡುಗಡೆ?

  ಇಂದು (ಏಪ್ರಿಲ್ 19) ಮಾಲ್ಡೀವ್ಸ್ ಫೈಟ್ ಹತ್ತಿದ ಆಲಿಯಾ ಮತ್ತು ರಣಬೀರ್ ಕಪೂರ್ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮಾಲ್ಡೀವ್ಸ್ ಸಿನಿ ಸೆಲೆಬ್ರಿಟಿಗಳ ಪಾಲಿನ ಸ್ವರ್ಗವಾಗಿದೆ. ಭಾರತದ ಅನೇಕ ಸಿನಿತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ, ಸಖತ್ ಎಂಜಾಯ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಲಿಯಾ ಭಟ್ ಸ್ನೇಹಿತರ ಜೊತೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೆ ಬಾಯ್ ಫ್ರೆಂಡ್ ಜೊತೆ ಹೊರಟಿದ್ದಾರೆ.

  ಅಂದಹಾಗೆ ಇತ್ತೀಚಿಗಷ್ಟೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ಚೇತರಿಸಿಕೊಂಡಿದ್ದು, ಇದೀಗ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಇನ್ನು ಕಳೆದ ವರ್ಷ ಲಾಕ್ ಡೌನ್‌ನಲ್ಲೂ ಇಬ್ಬರು ಒಟ್ಟಿಗೆ ಸಮಯ ಕಳೆದಿದ್ದರು. ಈ ವರ್ಷ ಕೂಡ ಒಟ್ಟಿಗೆ ಸಮಯ ಕಳೆಯುತ್ತಿದ್ದು, ಮಾಲ್ಡೀವ್ಸ್‌ಗೆ ತೆರಳಿದ್ದಾರೆ.

  ಚಿಕ್ಕಮಗಳೂರಿನ ಮುತ್ತೋಡಿ ಅರಣ್ಯದಲ್ಲಿ ದರ್ಶನ್ ಸಫಾರಿ | Filmibeat Kannada

  ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಆಲಿಯಾ ಭಟ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಮುಗಿಸಿರುವ ಆಲಿಯಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಇನ್ನು ಆರ್ ಆರ್ ಆರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ರಣ್ವೀರ್ ಸಿಂಗ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ರಣಬೀರ್ ಕಪೂರ್ ಜೊತೆ ನಟಿಸಿರುವ ಬ್ರಹ್ಮಾಸ್ತ್ರ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.

  English summary
  Bollywood Actor Ranbir Kapoor and Alia Bhatt jet off to Maldives.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X