For Quick Alerts
  ALLOW NOTIFICATIONS  
  For Daily Alerts

  ರಾಕಿ-ರಾಣಿಯಾಗಿ ಬದಲಾಗಿದ್ದೇಕೆ ರಣ್ವೀರ್ ಮತ್ತು ಅಲಿಯಾ?

  |

  ಬಾಲಿವುಡ್ ಸ್ಟಾರ್ ನಟ ರಣ್ವೀರ್ ಸಿಂಗ್ ಮತ್ತು ಖ್ಯಾತ ನಟಿ ಅಲಿಯಾ ಭಟ್ ಈಗ ರಾಕಿ-ರಾಣಿಯಾಗಿ ಬದಲಾಗಿದ್ದಾರೆ. ಇದಕ್ಕೆ ಕಾರಣ ಕರಣ್ ಜೋಹರ್. ರಣ್ವೀರ್ ಹುಟ್ಟುಹಬ್ಬದ ದಿನವೇ ಬದಲಾದ್ರಾ ಅಂತ ಅಚ್ಚರಿ ಪಡಬೇಡಿ. ಇದು ರಿಯಲ್ ಆಗಿ ಅಲ್ಲ ರೀಲ್ ನಲ್ಲಿ.

  ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಸಾರಥ್ಯದಲ್ಲಿ ಹೊಸ ಸಿನಿಮಾ ಮಾಡಿಬರುತ್ತಿದ್ದು, ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಅನೌನ್ಸ್ ಆಗಿ ಬಹುದಿನಗಳೇ ಆಗಿದೆ. ಆದರೆ ಇನ್ನು ಟೈಟಲ್ ಫೈನಲ್ ಆಗಿರಲಿಲ್ಲ. ಇಂದು ರಣ್ವೀರ್ ಸಿಂಗ್ ಹುಟ್ಟುಹಬ್ಬದ ಪ್ರಯುಕ್ತ ಅಧಿಕೃತವಾಗಿ ಶೀರ್ಷಿಕೆ ಬಹಿರಂಗ ಪಡಿಸುವ ಸಾಧ್ಯತೆ ಇದೆ.

  ಅಂದಹಾಗೆ ರಣ್ವೀರ್-ಅಲಿಯಾ ಸಿನಿಮಾ 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಎಂದು ಟೈಟಲ್ ಇಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿದೆ. ರೊಮ್ಯಾಂಟಿಕ್ ಸಿನಿಮಾ ಇದಾಗಿದ್ದು ಕರಣ್ ಜೋಹರ್ ನಿರ್ದೇಶನ ಮಾಡುತ್ತಿದ್ದಾರೆ. ವರ್ಷಗಳ ಬಳಿಕ ಕರಣ್ ಜೋಹರ್ ನಿರ್ದೇಶನ ನಿರ್ದೇಶನಕ್ಕೆ ಹಿಂದಿರುಗಿದ್ದಾರೆ. ಕರಣ್ ಕೊನೆಯದಾಗಿ ರಣಬೀರ್ ಕಪೂರ್ ಮತ್ತು ಐಶ್ವರ್ಯಾ ರೈ ನಟನೆಯ 'ಯೇ ದಿಲ್ ಹೈ ಮುಷ್ಕಿಲ್' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದರು.

  ಇನ್ನು ಅಲಿಯಾ ಮತ್ತು ರಣ್ವೀರ್ ಸಿಂಗ್ ಇಬ್ಬರೂ 'ಗಲ್ಲಿ ಬಾಯ್' ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾ ಸೂಪರ್ ಸಕ್ಸಸ್ ಆಗುವ ಜೊತೆಗೆ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ಇಬ್ಬರ ಕೆಮಿಸ್ಟ್ರಿ ಕೂಡ ಅಭಿಮಾನಿಗಳ ಹೃದಯ ಗೆದ್ದಿತ್ತು. ಇಬ್ಬರು ಪ್ರತಿಭಾವಂತ ಕಲಾವಿದರು ಮತ್ತೆ ಒಟ್ಟಿಗೆ ಸಿನಿಮಾ ಮಾಡುತ್ತಿರುವುದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

  Rachita Ram Biography | ಬಿಂದಿಯಾ ರಾಮ್ ರಚಿತಾ ರಾಮ್ ಆದ ಕಥೆ | Rachita Ram real Life story | Filmibeat

  ಅಂದಹಾಗೆ ಸಿನಿಮಾದಲ್ಲಿ ಹಿರಿಯ ನಟಿ ಶಬನಾ ಅಜ್ಮಿ, ಧರ್ಮೇಂದ್ರ, ಜಯಾ ಬಚ್ಚನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಮೂಡಿಬರ್ತಿರುವ ಈ ಸಿನಿಮಾ ಇಂದು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

  English summary
  Bollywood dActor Ranveer Singh and Alia Bhatt new movie get titled Rocky Aur Rani Ki Prem Kahani.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X