1983ರ ವಿಶ್ವಕಪ್ ಕಣ್ತುಂಬಿಕೊಳ್ಳಲು ರೆಡಿಯಾಗಿ: '83' ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್

ಭಾರತ ಕ್ರಿಕೆಟ್ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬೀಗಿದ ರೋಚಕ ಕ್ಷಣವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಲು ರೆಡಿಯಾಗಿ. 1983ರಲ್ಲಿ ವಿಶ್ವಕಪ್ ಗೆದ್ದ ಬಗ್ಗೆ ಬಾಲಿವುಡ್ ನಲ್ಲಿ ಸಿನಿಮಾ ನಿರ್ಮಾಣವಾಗಿದ್ದು ಇದೀಗ ರಿಲೀಸ್ ಗೆ ರೆಡಿಯಾಗಿದೆ. 83 ಹೆಸರಿನಲ್ಲಿ ಸಿನಿಮಾ ಮೂಡಿಬಂದಿದ್ದು, ನಾಯಕ ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಕಪಿಲ್ ದೇವ್ ಪತ್ನಿಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದಾರೆ.

ಖ್ಯಾತ ನಿರ್ದೇಶಕ ಕಬೀರ್ ಖಾನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಂದುಕೊಂಡಂತೆ ಆಗಿದ್ದಾರೆ ಈಗಾಗಲೇ ಸಿನಿಮಾ ರಿಲೀಸ್ ಆಗಬೇಕಿತ್ತು. ಏಪ್ರಿಲ್ ನಲ್ಲಿ 83 ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿತ್ತು. ಆದರೆ ಕೊರೊನಾ ವೈರಸ್ ಪರಿಣಾಮ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ.

ಚಿತ್ರಪ್ರಿಯರು ಚಿತ್ರಮಂದಿರದಲ್ಲೇ ಸಿನಿಮಾ ನೋಡಿ ಎಂಜಾಯ್ ಮಾಡಬೇಕು ಎನ್ನುವ ಕಾರಣಕ್ಕೆ ಒಟಿಟಿಯಲ್ಲಿ ರಿಲೀಸ್ ಮಾಡಲು ಮುಂದಾಗಲಿಲ್ಲ. ಇದೀಗ ಚಿತ್ರಮಂದಿರಗಳು ತೆರೆಯುತ್ತಿವೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಾಗುತ್ತಿದೆ. ಚಿತ್ರಮಂದಿರಗಳಲ್ಲಿ 83 ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದು. ಸಿನಿಮಾದ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

Ranveer Singh’s 83 Confirmed to Christmas release, Akshay Kumar’s Sooryavanshi to release in 2021

ಅಂದ್ಹಾಗೆ ಬಹುನಿರೀಕ್ಷೆಯ 83 ಸಿನಿಮಾ ಕ್ರಿಸ್ಮಸ್ ದಿನ ತೆರೆಗೆ ಬರುತ್ತಿದೆ. ಡಿಸೆಂಬರ್ 25ರಂದು ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ದೊಡ್ಡ ತಾರಾಬಳಗವಿರುವ 83 ಸಿನಿಮಾ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಕ್ರಿಸ್ಮಸ್ ನಲ್ಲಿ ಮತ್ತೊಮ್ಮೆ ವಿಶ್ವಕಪ್ ನೋಡಿ ಎಂಜಾಯ್ ಮಾಡಬಹುದು.

Recommended Video

ನಾನು ತುಂಬಾ ಸಿಂಪಲ್ ಅಂತ ಮತ್ತೆ ಪ್ರೂವ್ ಮಾಡಿದ Shivanna | Filmibeat Kannada

More from Filmibeat

English summary
Ranveer Singh starrer 83 movie release date confirmed. 83 movie set to release on December 23.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X