ಬಹುನಿರೀಕ್ಷೆಯ '83' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ

2020ರಲ್ಲಿ ತೆರೆಗೆ ಬರಬೇಕಿದ್ದ ಸಿನಿಮಾಗಳು ಕೊರೊನಾ ಕಾರಣದಿಂದ ರಿಲೀಸ್ ಆಗಿರಲಿಲ್ಲ. ಕಳೆದ ವರ್ಷ ಬರಬೇಕಿದ್ದ ಅನೇಕ ಸಿನಿಮಾಗಳು ಈ ವರ್ಷ ರಿಲೀಸ್ ಆಗುತ್ತಿದ್ದು ಈಗಾಗಲೇ ಸಾಕಷ್ಟು ಸಿನಿಮಾಗಳ ರಿಲೀಸ್ ಡೇಟ್ ಬಹಿರಂಗವಾಗಿದೆ. ಆದರೆ ಭಾರಿ ನಿರೀಕ್ಷೆಯ 83 ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ರಿವೀಲ್ ಆಗಿರಲಿಲ್ಲ. ಇದೀಗ 83 ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗವಾಗುವ ಮೂಲಕ ಕುತೂಹಲಕ್ಕೆ ತೆರೆಬಿದ್ದಿದೆ.

ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ನಾಯಕತ್ವದಲ್ಲಿ ಚೊಚ್ಚಲ ವಿಶ್ವಕಪ್ ಗೆದ್ದು ಬೀಗಿದ ಕ್ಷಣವನ್ನು ತೆರೆಮೇಲೆ ಕಣ್ತುಂಬಿಕೊಳ್ಳುವ ಸಮಯ ಕೊನೆಗೂ ಬಂದಿದೆ. 83 ಸಿನಿಮಾ ಇದೇ ವರ್ಷ ಜೂನ್ 4ಕ್ಕೆ ತೆರೆಗೆ ಬರುತ್ತಿದೆ. 1983ರಲ್ಲಿ ಭಾರತ ವಿಶ್ವ ಕಪ್ ಗೆದ್ದ ಸಂಭ್ರಮವನ್ನು ಬೆಳ್ಳಿತೆರೆ ಮೇಲೆ ನೋಡಲು ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಕಪಿಲ್ ದೇವ್ ಪಾತ್ರದಲ್ಲಿ ನಟ ರಣ್ವೀರ್ ಸಿಂಗ್ ಕಾಣಿಸಿಕೊಂಡಿದ್ದು, ಈಗಾಗಲೇ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ವಿಶೇಷ ಎಂದರೆ 83 ಸಿನಿಮಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ತೆರೆಗೆ ಬರುತ್ತಿದೆ.

Ranveer singh starrer 83 movie to hit theatres on on June 4


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ರಣ್ವೀರ್ ಸಿಂಗ್ '83 ಸಿನಿಮಾ ಜೂನ್ 4ಕ್ಕೆ ರಿಲೀಸ್ ಆಗುತ್ತಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಬಿಡುಗಡೆಯಾಗುತ್ತಿದೆ' ಎಂದು ಹೇಳಿದ್ದಾರೆ.

ಕಳೆದ ವರ್ಷ ಏಪ್ರಿಲ್ ನಲ್ಲಿ ತೆರೆಗೆ ಬರಬೇಕಿದ್ದ 83 ಸಿನಿಮಾ ಕೊರೊನಾ ಕಾರಣದಿಂದ ಮುಂದಕ್ಕೆ ಹೋಗಿತ್ತು. ಬಳಿಕ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಬಹು ನಿರೀಕ್ಷೆಯ ಈ ಸಿನಿಮಾವನ್ನು ಚಿತ್ರಮಂದಿರದಲ್ಲೇ ರಿಲೀಸ್ ಮಾಡಬೇಕು ಎನ್ನುವುದು ಚಿತ್ರತಂಡದ ನಿರ್ಧಾರ. ಜೊತೆಗೆ ಅಭಿಮಾನಿಗಳಿಗೂ ಸಹ ಈ ಸಿನಿಮಾವನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎನ್ನುವ ಆಸೆ. ಅದರಂತೆ ಈಗ ಬೆಳ್ಳಿ ಪರದೆ ಮೇಲೆ 1983ರ ವಿಶ್ವಕಪ್ ಕ್ಷಣ ರಾರಾಜಿಸಲಿದೆ.

ಬಹುನಿರೀಕ್ಷೆಯ ಚಿತ್ರಕ್ಕೆ ಕಬೀರ್ ಖಾನ್ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕಿಯಾಗಿ ದೀಪಿಕಾ ಪಡುಕೋಣೆ ಮಿಂಚಿದ್ದಾರೆ. ಅಂದರೆ ಕಪಿಲ್ ದೇವ್ ಪತ್ನಿಯ ಪಾತ್ರವನ್ನು ನಿಭಾಯಿಸಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ 83 ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದು, ಕಪಿಲ್ ದೇವ್ ಆಗಿ ರಣ್ವೀರ್ ಹೇಗೆ ಅಬ್ಬರಿಸಿದ್ದಾರೆ ಎಂದು ನೋಡಲು ಜೂನ್ ವರೆಗೂ ಕಾಯಬೇಕು.

More from Filmibeat

English summary
Ranveer singh starrer 83 movie to hit theatres on on June 4. 83 movie based on Team India's 1983 World Cup win.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X