ಕೊನೆಗೂ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ಕಿಡಿಗೇಡಿಯ ಬಂಧನ; ಆತನ ಹಿನ್ನೆಲೆ ಏನು?
3 ತಿಂಗಳ ಹಿಂದೆ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ಸಂಚಲನ ಗೊತ್ತೇಯಿದೆ. ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಜಾರಾ ಪಟೇಲ್ ಹಾಟ್ ವಿಡಿಯೋಗೆ ಕಿಡಿಗೇಡಿಗಳು ನಟಿ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ವೈರಲ್ ಮಾಡಿದ್ದರು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಮಿತಾಬ್ ಬಚ್ಚನ್ ಸೇರಿದಂತೆ ಹಲವರು ರಶ್ಮಿಕಾ ಬೆಂಬಲಕ್ಕೆ ನಿಂತಿದ್ದರು.
ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದರು. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ವ್ಯಕ್ತಿಗಳ IP ಅಡ್ರೆಸ್ ಹಿಡಿದು ಜಾಲಾಡಿದ್ದರು. ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಆದರೆ ವಿಡಿಯೋ ಕ್ರಿಯೇಟ್ ಮಾಡಿದ್ದು ಯಾರು ಎನ್ನುವುದು ಮಾತ್ರ ನಿಗೂಢವಾಗಿಯೇ ಇತ್ತು. ಇದೀಗ ದೆಹಲಿ ಪೊಲೀಸರು ಆತನನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಪ್ರಕರಣದಲ್ಲಿ ಬಂಧಿಸಿರುವುದಾಗಿ ಹೇಳಲಾಗುತ್ತಿದೆ. ಆತನೇ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ್ದು ಎನ್ನಲಾಗ್ತಿದೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ಮುಂದುವರೆಸಿದ್ದಾರೆ. ಜಾರಾ ಪಟೇಲ್ ತುಂಡು ಬಟ್ಟೆಯಲ್ಲಿ ಲಿಫ್ಟ್ ಒಳಗೆ ಬರುವ ಹಾಟ್ ವಿಡಿಯೋ ಇತ್ತು. ಡೀಪ್‌ನೆಕ್ ಡ್ರೆಸ್‌ನಲ್ಲಿ ಆಕೆ ಬಹಳ ಮಾದಕವಾಗಿ ಕಾಣಿಸಿಕೊಂಡಿದ್ದಳು. ಅದೇ ವಿಡಿಯೋಗೆ AI ತಂತ್ರಜ್ಞಾನ ಸಹಾಯದಿಂದ ರಶ್ಮಿಕಾ ಮುಖ ಅಂಟಿಸಿ, ರಶ್ಮಿಕಾ ಅಷ್ಟು ಹಾಟ್ ಆಗಿ ಕಾಣಿಸಿಕೊಂಡಂತೆ ಬಿಂಬಿಸಲಾಗಿತ್ತು.
ನೋಡ ನೊಡುತ್ತಿದ್ದಂತೆ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಬಳಿಕ ಇದೇ ರೀತಿ ನಟಿಯರಾದ ಕಾಜೋಲ್, ಆಲಿಯಾ ಭಟ್ ಹಾಗೂ ಕತ್ರೀನಾ ಕೈಫ್ ಫೇಕ್ ವಿಡಿಯೋಗಳು ವೈರಲ್ ಆಗಿದ್ದವು. ತಂತ್ರಜ್ಞಾನವನ್ನು ತಪ್ಪಾಗಿ ಬಳಸಿಕೊಳ್ಳುತ್ತಿರುವುದು ಹಾಗೂ ಡೀಪ್‌ಫೇಕ್ ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಸಹಿತ ಹಲವರು ಕಳವಳ ವ್ಯಕ್ತಪಡಿಸಿದ್ದರು.
ತಮ್ಮ ಡೀಪ್‌ಫೇಕ್ ವಿಡಿಯೋ ವೈರಲ್ ಆಗಿದ್ದು ಹಾಗೂ ಆ ಸಮಯದಲ್ಲಿ ಬೆಂಬಲಕ್ಕೆ ನಿಂತ ಎಲ್ಲರಿಗೂ ರಶ್ಮಿಕಾ ಮಂದಣ್ಣ ಧನ್ಯವಾದ ತಿಳಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. "ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ. ಆದರೂ ವೈರಲ್ ಆಗುತ್ತಿರುವ ನನ್ನ ಡೀಪ್‌ಫೇಕ್ ವೀಡಿಯೊ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೇ, ಈ ರೀತಿ ಏನಾದರೂ ಆಗುವುದು ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ"

"ಮಹಿಳೆಯಾಗಿ ಮತ್ತು ನಟಿನಾಗಿ, ನನ್ನ ರಕ್ಷಣೆಗೆ ಮತ್ತು ಬೆಂಬಲಕ್ಕೆ ಬಂದ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಇಂತಹ ಘಟನೆ ನಡೆದಿದ್ದರೇ, ನಾನು ಅದನ್ನು ಹೇಗೆ ನಿಭಾಯಿಸುತ್ತಿದ್ದೇ ಎಂಬುದು ನಿಜಕ್ಕೂ ನನಗೆ ಗೊತ್ತಿಲ್ಲ. ನಮ್ಮಲ್ಲಿ ಹೆಚ್ಚಿನವರು ಇಂತಹ ಕೆಟ್ಟ ಘಟನೆಗೆ ಸಾಕ್ಷಿಯಾಗುವ ಮೊದಲು ತುರ್ತಾಗಿ ಪರಿಹರಿಸಬೇಕಾಗಿದೆ" ಎಂದು ಕೇಳಿಕೊಂಡಿದ್ದರು.


Click it and Unblock the Notifications










