For Quick Alerts
  ALLOW NOTIFICATIONS  
  For Daily Alerts

  ಮುಂಬೈ ಫಿಲಂ ಸಿಟಿಯಲ್ಲಿ ಹಿಂದಿ ಸಿನಿಮಾ ಚಿತ್ರೀಕರಣ ಆರಂಭಿಸಿದ ರಶ್ಮಿಕಾ

  |

  ಕನ್ನಡ, ತೆಲುಗು ಪ್ರೇಕ್ಷಕರ ಮನ ಗೆದ್ದಿರುವ ನಟಿ ರಶ್ಮಿಕಾ ಈಗ ಬಾಲಿವುಡ್‌ಗೆ ಲಗ್ಗೆಯಿಟ್ಟಿದ್ದಾರೆ. ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರ ನಟಿಸುತ್ತಿರುವ ಮಿಷನ್ ಮಜ್ನು ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿದ್ದು, ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದಾರೆ.

  ಹಿಂದಿ ಸಿನಿಮಾ ಶೂಟಿಂಗ್ ಹಿನ್ನೆಲೆ ಮುಂಬೈಗೆ ಆಗಮಿಸಿರುವ ರಶ್ಮಿಕಾ ಮಂದಣ್ಣ, ಇಂದಿನಿಂದ ಮುಂಬೈ ಫಿಲಂ ಸಿಟಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮೊದಲ ದಿನ ಶೂಟಿಂಗ್‌ಗೆ ಹಾಜರಾದ ನಟಿಯ ಫೋಟೋ ವೈರಲ್ ಆಗಿದೆ.

  ಮೊದಲ ದಿನ ಚಿತ್ರೀಕರಣ ಮುಗಿಸಿದ ಬಂದ ರಶ್ಮಿಕಾ ನಂತರ ತಮ್ಮ ಇನ್ಸ್ಟಾಗ್ರಾಂನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಈ ಅವಕಾಶ ನೀಡಿದ ನಿರ್ಮಾಪಕ, ನಟ ಸಿದ್ಧಾರ್ಥ್ ಮಲ್ಹೋತ್ರ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

  ಹೊಸ ವರ್ಷಕ್ಕೆ ಹೊಸ ಕಾರು ಖರೀದಿಸಿದ ರಶ್ಮಿಕಾ ಮಂದಣ್ಣ

  ಅಂದ್ಹಾಗೆ, 'ಮಿಷನ್ ಮಜ್ನು' ಸಿನಿಮಾ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದ್ದು, ಶಾಂತನು ಬಾಗ್ಚಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶಾಂತನು ಮೊದಲ ಸಿನಿಮಾ ಇದು.

  ನಿಮ್ಮನ್ನು ಅತೀ ಹೆಚ್ಚು ಭಯ ಪಡಿಸಿದ ವಿಚಾರ ಯಾವುದು?; ಅಭಿಮಾನಿ ಪ್ರಶ್ನೆಗೆ ರಶ್ಮಿಕಾ ಉತ್ತರ ಹೀಗಿದೆ

  ಆ ಕಡೆ ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಕಳೆದ ವಾರವಷ್ಟೇ ಹೈದರಾಬಾದ್‌ನಲ್ಲಿ ಪುಷ್ಪ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಅಲ್ಲಿಂದ ನೇರವಾಗಿ ಮುಂಬೈಗೆ ಬಂದ ಹಿಂದಿ ಚಿತ್ರ ಮಾಡುತ್ತಿದ್ದಾರೆ.

  English summary
  Kannada actress Rashmika Mandanna starts shooting 'Mission Majnu' movie with Siddharth Malhotra at Mumbai.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X