For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್ 3ನೇ ಸಿನಿಮಾಗೆ ಸಹಿ ಮಾಡಿದ ರಶ್ಮಿಕಾ ಮಂದಣ್ಣ

  |

  ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಬಹು ಬೇಡಿಕೆಯ ನಟಿ. ದಕ್ಷಿಣ ಭಾರತೀಯ ಸಿನಿಮಾಗಳ ಜೊತೆಗೆ ಬಾಲಿವುಡ್ ನಲ್ಲೂ ರಶ್ಮಿಕಾ ಸಖತ್ ಬ್ಯುಸಿಯಾಗಿದ್ದಾರೆ. ಬಾಲಿವುಡ್ ಮೊದಲ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗುವ ಮೊದಲೇ ರಶ್ಮಿಕಾ ಇನ್ನೂ ಎರಡು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ.

  ಮಿಷನ್ ಮಜ್ನು ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ, ನಟ ಸಿದ್ಧಾರ್ಥ್ ಮಲ್ಹೋತ್ರಾಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಳಿಕ ಬಿಗ್ ಬಿ ಅಮಿತಾಬ್ ಬಚ್ಚನ್ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಅಮಿತಾಬ್ ಮಗಳಾಗಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎರಡು ಸಿನಿಮಾಗಳ ಚಿತ್ರೀಕರಣ ಪ್ರಾರಂಭವಾಗುತ್ತಿದ್ದಂತೆ ಕೊರೊನಾ ಹಾವಳಿ ಜಾಸ್ತಿಯಾದ ಪರಿಣಾಮ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ.

  ಬಾಲಿವುಡ್‌ನಿಂದ ಬಂದಿದ್ದ ಮೊದಲ ಅವಕಾಶ ಕೈಬಿಟ್ಟಿದ್ದ ರಶ್ಮಿಕಾಬಾಲಿವುಡ್‌ನಿಂದ ಬಂದಿದ್ದ ಮೊದಲ ಅವಕಾಶ ಕೈಬಿಟ್ಟಿದ್ದ ರಶ್ಮಿಕಾ

  ಸದ್ಯ ರಶ್ಮಿಕಾ ಹೈದರಾಬಾದ್ ನಲ್ಲಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬಂದಿದ್ದ ರಶ್ಮಿಕಾ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಬಾಲಿವುಡ್ ಸಿನಿಮಾಗಳ ಬಗ್ಗೆ ಮಾತನಾಡಿದ ರಶ್ಮಿಕಾ ಸದ್ಯದಲ್ಲೇ 3ನೇ ಸಿನಿಮಾಗೆ ಸಹಿ ಮಾಡುವುದಾಗಿ ಹೇಳಿದ್ದಾರೆ. ಆದರೆ ಯಾವ ಸಿನಿಮಾ ಎನ್ನುವ ಮಾಹಿತಿ ಬಹಿರಂಗ ಪಡಿಸಿಲ್ಲ.

  ಎರಡು ಮಕ್ಕಳಾದ್ಮೇಲೂ ಫಿಟ್ ನೆಸ್ ಗಾಗಿ ಕರೀನಾ ಏನ್ ಮಾಡ್ತಿದ್ದಾರೆ ನೋಡಿ | Filmibeat Kannada

  ಬಾಲಿವುಡ್ ಸಿನಿಮಾಗಳ ಜೊತೆಗೆ ರಶ್ಮಿಕಾ ತೆಲುಗಿನ ಬಹುನಿರೀಕ್ಷೆಯ ಪುಷ್ಪ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ನಟನೆಯ ಪುಷ್ಪ ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಕೊನೆಯದಾಗಿ ರಶ್ಮಿಕಾ ಪೊಗರು ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

  English summary
  Rashmika Mandanna to sing her third bollywood movie after Mission Majnu and Goodbye.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X