»   » ಉಸಿರಾಟದ ತೊಂದರೆ, ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಉಸಿರಾಟದ ತೊಂದರೆ, ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

Posted By:
Subscribe to Filmibeat Kannada

ಬಾಲಿವುಡ್ ನಲ್ಲಿ ಟ್ರ್ಯಾಜಿಡಿ ಕಿಂಗ್ ಅಂತಲೇ ಖ್ಯಾತಿ ಪಡೆದಿರುವ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ದಿಲೀಪ್ ಕುಮಾರ್ (93) ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಸುಮಾರು 2 ಗಂಟೆಗೆ ಉಸಿರಾಟದ ತೊಂದರೆ ಉಂಟಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು ಅಂತ ಕುಟುಂಬದ ಮೂಲಗಳು ತಿಳಿಸಿವೆ. [ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ]

respiratory-complaint-actor-dilip-kumar-hospitalized

ಕಳೆದ ಕೆಲ ದಿನಗಳಿಂದ ನ್ಯುಮೋನಿಯಾ ಕಾಯಿಲೆಯಿಂದ ದಿಲೀಪ್ ಕುಮಾರ್ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.[ಅಭಿನೇತೃ ದಿಲೀಪ್ ಕುಮಾರ್ ಬಗೆಗಿನ ಸುದ್ದಿ ನಿಜವೇ?]

ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ದಿಲೀಪ್ ಕುಮಾರ್ ಅವರಿಗೆ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂಬುದು ಅವರ ಅಪಾರ ಅಭಿಮಾನಿಗಳ ಹಾರೈಕೆ. (ಏಜೆನ್ಸೀಸ್)

-
-
-
-
-
-
-
-
-
-
-
-
-
-
-
-
-
-
-
-
-
-
English summary
Veteran Bollywood Actor Dilip Kumar was admitted to Leelavathi hospital, Mumbai at 2 am, Saturday (16th April) for a respiratory complaint.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada