Breaking: ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್
ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
Recommended Video
ಕಳೆದ ಮೂರು ದಿನದಿಂದ ರಿಯಾ ಚಕ್ರವರ್ತಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಮೂರನೇ ದಿನ ಎನ್‌ಸಿಬಿ ಅಧಿಕಾರಿಗಳು ಸುಶಾಂತ್ ಪ್ರೇಯಸಿಯನ್ನು ಅಧಿಕೃತವಾಗಿ ಅರೆಸ್ಟ್ ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡುತ್ತಿರುವ ವೇಳೆ ಸುಶಾಂತ್ ಗೆ ರಿಯಾ ಚಕ್ರವರ್ತಿ ಡ್ರಗ್ ನೀಡುತ್ತಿದ್ದರು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆ ಎನ್‌ಸಿಬಿ ಅಧಿಕಾರಿಗಳು ತನಿಖೆ ಶುರು ಮಾಡಿದ್ದರು.

ಈ ಕೇಸ್‌ನಲ್ಲಿ ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಮತ್ತು ರಿಯಾ ಸಹೋದರ ಶೋವಿಕ್ ಚಕ್ರವರ್ತಿಯನ್ನು ಎನ್‌ಸಿಬಿ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದರು.
'ರಿಯಾ ಚಕ್ರವರ್ತಿಗಾಗಿ ಡ್ರಗ್ ಖರೀದಿಸುತ್ತಿದ್ದೆ' ಎಂದು ಸಹೋದರ ಶೋವಿಕ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರದಲ್ಲಿ ರಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಮೂರನೇ ದಿನ ಸುಶಾಂತ್ ಗೆಳತಿಯನ್ನು ಬಂಧಿಸಿದ್ದಾರೆ.


Click it and Unblock the Notifications











