For Quick Alerts
  ALLOW NOTIFICATIONS  
  For Daily Alerts

  ರಿಯಾ ಚಕ್ರವರ್ತಿ ಜಾಮೀನು ನಿರಾಕರಣೆ, ಸುಶಾಂತ್ ಪ್ರೇಯಸಿಗೆ ಜೈಲೇ ಗತಿ

  |

  ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ಆರೋಪದ ಮೇಲೆ ಬಂಧಿತವಾಗಿರುವ ನಟಿ ರಿಯಾ ಚಕ್ರವರ್ತಿಗೆ ಮುಂಬೈ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ.

  ರಿಯಾ ಚಕ್ರವರ್ತಿ ಮಾತ್ರವಲ್ಲ ಸಹೋದರ ಶೋಯಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಸೇರಿದಂತೆ ಇತರೆ ಆರೋಪಿಗಳಿಗೂ ಜಾಮೀನು ತಿರಸ್ಕರಿಸಿದೆ.

  ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್

  ಈ ಮೂಲಕ ಸೆಪ್ಟೆಂಬರ್ 22 ರವರೆಗೆ ರಿಯಾ ಚಕ್ರವರ್ತಿ ಬೈಕುಲ್ಲಾ ಜೈಲಿನಲ್ಲಿ ಉಳಿಯಬೇಕಿದೆ. ಇದಕ್ಕೂ ಮುಂಚೆ ಮ್ಯಾಜಿಸ್ಟ್ರೇಟ್ ಕೋರ್ಟ್‌ ಮುಂದೆ ರಿಯಾ ಅವರನ್ನು ಹಾಜರು ಪಡಿಸಿದಾಗ ಸೆಪ್ಟೆಂಬರ್ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಸೂಚಿಸಲಾಗಿತ್ತು.

  ಸುಶಾಂತ್ ಸಿಂಗ್‌ಗೆ ಡ್ರಗ್ಸ್ ನೀಡುತ್ತಿದ್ದರು ಎಂಬ ಆರೋಪದಲ್ಲಿ ಸತತ ಮೂರು ದಿನಗಳ ವಿಚಾರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು, ಮೂರನೇ ದಿನ ಮಂಗಳವಾರ ರಿಯಾ ಅವರನ್ನು ಬಂಧಿಸಿದರು. ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8 (ಸಿ), 20 (ಬಿ), 27 (ಎ), 28 ಮತ್ತು 29 ರ ಅಡಿಯಲ್ಲಿ ಕೇಸ್ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

  Rakesh Adiga spiritual Rap , ಕನ್ನಡಧ Rapperಗಳಿಗೆ ಕಿವಿಮಾತು | Filmibeat Kannada

  ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ವಿರುದ್ಧ ತಂದೆ ಕೆ.ಕೆ ಸಿಂಗ್ ಪಾಟ್ನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

  English summary
  Bail pleas of Showik Chakraborty, Rhea Chakraborty, Abdul Basit, Zaid Vilatra, Dipesh Sawant & Samuel Miranda have been rejected by a special court in Mumbai.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X