'ಸುಶಾಂತ್ ಸಾವಿಗೆ ನಾನೆ ಕಾರಣ ಎಂದು ಮಾಧ್ಯಮಗಳು ಬಿಂಬಿಸುತ್ತಿವೆ': ಮತ್ತೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ ರಿಯಾ
ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ದೂರು ದಾಖಲಿಸಿದ ಬಳಿಕ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ. ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಕುಟುಂಬ ಗಂಭೀರ ಆರೋಪ ಮಾಡಿದ್ದು, ವಿಚಾರಣೆ ನಡೆಯುತ್ತಿದೆ.
Recommended Video
ಈ ನಡುವೆ ರಿಯಾ ಮತ್ತೆ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಮವಾರ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಿಯಾ ಮಾಧ್ಯಮದ ವಿರುದ್ಧ ದೂರಿದ್ದಾರೆ. "ಮಾಧ್ಯಮಗಳ ವಿಚಾರಣೆ ಮತ್ತು ಸುಶಾಂತ್ ಸಿಂಗ್ ಸಾವಿಗೆ ನಾನೆ ಕಾರಣ ಎಂಬ ರೀತಿಯಲ್ಲಿ ಬಿಂಬಿಸುತ್ತಿವೆ. ನನ್ನನ್ನೆ ತಪ್ಪಿತಸ್ಥೆ ಎಂದು ಘೋಷಿಸುತ್ತಿವೆ" ಎಂದು ಅರ್ಜಿಯಲ್ಲಿ ದೂರಿದ್ದಾರೆ.
ಬಿಹಾರದಲ್ಲಿರುವ ಕೇಸ್ ಅನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. ಸುಶಾಂತ್ ಸಿಂಗ್ ಸಾವು ಮಾಧ್ಯಮಗಳು ಸೆನ್ಸೇಶನಲೈಸ್ ಮಾಡಿವೆ. ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ಅಲ್ಲದೆ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಹಿಂದಿ ಕಿರುತೆರೆಯ ಇಬ್ಬರು ಕಲಾವಿದರ ಬಗ್ಗೆಯೂ ಅರ್ಜಿಯಲ್ಲಿ ನಮೂದಿಸಿದ್ದಾರೆ. "ನಟರಾದ ಅಶುತೋಷ್ ಭಕ್ರೆ ಮತ್ತು ಸಮೀರ್ ಶರ್ಮಾ ಕಳೆದ 30 ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರ ಸಾವಿನ ಬಗ್ಗೆ ಎಲ್ಲೂ ಪಿಸುಮಾತಿಲ್ಲ. ಅವರ ಸಾವಿನ ಕಾರಣವೇನು ಎಂಬ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿಲ್ಲ. ಸುಶಾಂತ್ ಸಾವನ್ನು ಮಾತ್ರ ಪ್ರಧಾನವಾಗಿಸಿಕೊಂಡಿದೆ" ಎಂದಿದ್ದಾರೆ.
ಸುಶಾಂತ್ ಸಾವಿಗೆ ಸಂಬಂಧಿಸಿದ್ದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ ಮತ್ತೆ ಹಾಜರಾಗಿದ್ದರು. ರಿಯಾ ಚಕ್ರವರ್ತಿ ಮತ್ತು ಸಹೋದರ ಹಾಗೂ ತಂದೆ ಇಂದ್ರಜಿತ್ ಚಕ್ರವರ್ತಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ಮಾಡಿದೆ.


Click it and Unblock the Notifications











