For Quick Alerts
  ALLOW NOTIFICATIONS  
  For Daily Alerts

  'RRR' ಸಿನಿಮಾ: ಅಲಿಯಾ ಭಟ್ ಸೀತಾ ಪಾತ್ರವನ್ನು ವಿಸ್ತರಿಸಲು ಮುಂದಾಗಿದ್ದೇಕೆ ರಾಜಮೌಳಿ?

  |

  ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ

  ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ.

  ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ. ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ.

  ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

  ಯಾವ ಊರಿಗೆ ಯಾವಾಗ ಬರ್ತಾರೆ ಗೊತ್ತಾ ಪವರ್ ಸ್ಟಾರ್? | Yuvarathna | Puneeth Rajkumar | Filmibeat Kannada

  ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.

  English summary
  RRR movie makers will plan extend Alia Bhatt Sita role after release first look.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X