Just In
Don't Miss!
- News
'ಮಮತಾರನ್ನು 50 ಸಾವಿರ ಮತಗಳಿಂದ ಸೋಲಿಸದಿದ್ದರೆ ರಾಜಕೀಯ ತ್ಯಜಿಸುತ್ತೇನೆ'
- Automobiles
ಇನ್ಮುಂದೆ ಮನೆ ಬಾಗಿಲಿಗೆ ಡೀಸೆಲ್ ಪೂರೈಕೆ ಮಾಡಲಿದೆ ಹೊಸ ಸ್ಟಾರ್ಟ್ ಅಪ್ ಕಂಪನಿ
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಎಸ್ಎಲ್: ಚೆನ್ನೈಯಿನ್ ಎಫ್ಸಿ vs ಎಸ್ಸಿ ಈಸ್ಟ್ ಬೆಂಗಾಲ್, Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 18ರ ಚಿನ್ನ, ಬೆಳ್ಳಿ ದರ
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫೋಟೋ ವೈರಲ್; ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಲ್ಮಾನ್ ಖಾನ್
ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಗೆ ಇಂದು (ಡಿ.27) ಹುಟ್ಟುಹಬ್ಬದ ಸಂಭ್ರಮ. 55ನೇ ವಸಂತಕ್ಕೆ ಕಾಲಿಟ್ಟಿರುವ ನಟ ಸಲ್ಮಾನ್ ಖಾನ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಲ್ಮಾನ್ ಖಾನ್ ಹುಟ್ಟುಹಬ್ಬ ಅಂದರೆ ಸಾಕು ಅಭಿಮಾನಿಗಳು ಹಬ್ಬದಂತೆ ಆಚರಣೆ ಮಾಡುತ್ತಿದ್ದರು. ಸಲ್ಮಾನ್ ಖಾನ್ ಗ್ಯಾಲಕ್ಸಿ ಮನೆ ಮುಂದೆ ಸಜಸಾಗರವೇ ಹರಿದುಬರುತ್ತಿತ್ತು. ಆದರೆ ಈ ಬಾರಿ ಎಲ್ಲಾ ಆಚರಣೆ, ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಈ ವರ್ಷ ಕೊರೊನಾ ಹಾಗೂ ಇತರೆ ಕಾರಣಗಳಿಂದ ನಟ ಸಲ್ಮಾನ್ ಖಾನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಮುಂದೆ ಓದಿ..
ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಮಾಡಿದರು ಮನವಿ

ಅಭಿಮಾನಿಗಳಲ್ಲಿ ಸಲ್ಮಾನ್ ಖಾನ್ ಮನವಿ
ಈ ವರ್ಷ ಕೊರೊನಾ ಇರುವ ಕಾರಣ ಎಲ್ಲಾ ಸಂಭ್ರಮ, ಸಂತಸಕ್ಕೆ ಬ್ರೇಕ್ ಬಿದ್ದಿದೆ. ಹಾಗಾಗಿ ಸಲ್ಮಾನ್ ಖಾನ್ ಸಹ ಯಾರೂ ತಮ್ಮ ಮನೆಯ ಬಳಿ ಬರಬೇಡಿ, ಗುಂಪು ಸೇರಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಈ ವಿಚಾರವಾಗಿ ಸಲ್ಮಾನ್ ಖಾನ್ ಮನೆಯ ಗೇಟಿನ ಮುಂದೆ ದೊಡ್ಡ ನೋಟೀಸ್ ಸಹ ಅಂಟಿಸಿದ್ದಾರೆ.

ತೋಟದ ಮನೆಯಲ್ಲಿ ಹುಟ್ಟುಹಬ್ಬ ಆಚರಣೆ
ಪ್ರತಿವರ್ಷ ಅಭಿಮಾನಿಗಳ ಮಧ್ಯೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದ ಸಲ್ಮಾನ್ ಖಾನ್, ಈ ಬಾರಿ ತೋಟದ ಮನೆಯಲ್ಲಿ ಸರಳವಾಗಿ, ಕೆಲವೇ ಕೆಲವರ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹೌದು, ಕುಟುಂಬದರು ಮತ್ತು ಸ್ನೇಹಿತರ ಜೊತೆ ತಮ್ಮ ಪನ್ವೆಲ್ ತೋಟದ ಮನೆಯಲ್ಲಿ ಕೇಕ್ ಕತ್ತರಿಸಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಸಲ್ಮಾನ್ ಖಾನ್ ಅನ್ನು ದೇವಮಾನವ ಎಂದ ರೆಮೊ ಡಿಸೋಜಾ ಪತ್ನಿ: ಕಾರಣ?

ಹುಟ್ಟುಹಬ್ಬ ಆಚರಣೆಯ ಫೋಟೋಗಳು ವೈರಲ್
ಸಲ್ಮಾನ್ ಖಾನ್ ಹುಟ್ಟುಹಬ್ಬದ ಆಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾ ಕಾರಣದಿಂದ ಅಭಿಮಾನಿಗಳು ಮನೆಯ ಬಳಿ ಬಂದು, ಗುಂಪು ಸೇರುವುದು ಬೇಡ, ಈ ಸಮಯದಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ಬರೆದು ನೋಟಿಸ್ ಅನ್ನು ತಮ್ಮ ಮನೆಯ ಗೇಟ್ ಗೆ ಅಂಟಿಸಿದ್ದರು. ಹಾಗಾಗಿ ಅಭಿಮಾನಿಗಳು ದೂರದಿಂದನೆ ನೆಚ್ಚಿನ ನಟನಿಗೆ ವಿಶ್ ಮಾಡಿ ಸಂತಸ ಪಡುತ್ತಿದ್ದಾರೆ.

ರಾಧೆ ಸಿನಿಮಾ ಮುಗಿಸಿ, ಅಂತಿಮ್ ನಲ್ಲಿ ಸಲ್ಮಾನ್ ಖಾನ್ ಬ್ಯುಸಿ
ಸಲ್ಮಾನ್ ಖಾನ್ ಸದ್ಯ ರಾಧೆ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ರಾಧೆ ರಿಲೀಸ್ ಗೆ ಎದುರು ನೋಡುತ್ತಿರುವ ಸಲ್ಮಾನ್ ಆಗಲೇ ಅಂತಿಮ್ ಸಿನಿಮಾದ ಚಿತ್ರೀಕರಣ ಸಹ ಪ್ರಾರಂಭಿಸಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳ ನಿದ್ದೆ ಗೆಡಿಸಿದೆ. ಇನ್ನೂ ಸಿನಿಮಾಗಳ ಜೊತೆಗೆ ಸಲ್ಮಾನ್ ಖಾನ್ ಬಿಗ್ ಬಾಸ್ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿದ್ದಾರೆ. ಸದ್ಯ ಸಲ್ಮಾನ್ ಖಾನ್ ಮುಂದಿನ ಸಿನಿಮಾ ಯಾವುದು ಎನ್ನುವುದು ಕುತೂಹಲ ಮೂಡಿಸಿದೆ.