ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ; ಕಸ್ಟಡಿಯಲ್ಲಿದ್ದ ವ್ಯಕ್ತಿ ಆತ್ಮಹತ್ಯೆ..!

ಕೇಳೊದಕ್ಕೆ ಇದು ವಿಚಿತ್ರವಾದ ಕಥೆ. ಆದ್ರೆ ಸತ್ಯಕಥೆ. ಈ ಸತ್ಯಕಥೆಯ ನಾಯಕ ಸಲ್ಮಾನ್ ಖಾನ್ ಆದರೆ, ಖಳನಾಯಕ ಲಾರೆನ್ಸ್ ಬಿಷ್ಣೋಯ್. ಈ ಕಥೆಯಲ್ಲಿ ಯಾವತ್ತು ಏನಾಗುತ್ತೆ ಅನ್ನುವುದು ಸದ್ಯಕ್ಕೆ ನಿಗೂಢವಾದರೂ, ಕಥೆಯಲ್ಲಿ ಸಲ್ಮಾನ್ ಖಾನ್ ಅವರನ್ನ ಕೊಲ್ಲಲು ಬಂದಿದ್ದ ವ್ಯಕ್ತಿಯೊಬ್ಬ ಸದ್ಯಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹೌದು, ಇತ್ತೀಚೆಗೆ ಸಲ್ಮಾನ್ ಖಾನ್ ಮನೆಯ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಸುಭಾಷ್ ಚಂದರ್ (37) ಮತ್ತು ಅನುಜ್ ಥಾಪನ್ (32) ಅವರನ್ನ ಬಂಧಿಸಿದ್ದರು. ವಿಚಾರಣೆಯನ್ನೂ ಮಾಡ್ತಿದ್ದರು. ಆದರೆ ಈಗ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ನೇಣು ಬಿಗಿದುಕೊಂಡು ಅನುಜ್ ಥಾಮಸ್ ಆತ್ಮಹತ್ಯೆ ಪ್ರಯತ್ನ ಮಾಡಿದ್ದಾನೆ. ಸಾವನ್ನಪ್ಪಿದ್ದಾನೆ.ಅನುಜ್​ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಯಾವ ಪ್ರಯೋಜನವಾಗಲಿಲ್ಲ. ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ.

salman-khan-house-shooting-incident-suspect-found-dead-in-police-custody

ಅಂದ್ಹಾಗೇ ಸಲ್ಮಾನ್ ಖಾನ್ ಮನೆಯ ಎದುರು ನಡೆದ ಗುಂಡಿನ ದಾಳಿ ಸಮಯದಲ್ಲಿ ಅನುಜ್ ಇರಲೇ ಇಲ್ಲ. ಆದರೆ.. ಈ ದಾಳಿಗೆ ಅನುಜ್ ಸಹಕರಿಸಿದ್ದ. ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದ. ಬಂಧಿತ ಇನ್ನೊಬ್ಬ ವ್ಯಕ್ತಿ ಸುಭಾಷ್ ಚಂದರ್ ಮೇಲೆ ಕೂಡ ಇದೇ ಆರೋಪ ಇದೆ. ಆದರೆ ಈಗ ಪೊಲೀಸ್ ಕಸ್ಟಡಿಯಲ್ಲಿ ಇರುವಾಗಲೇ ಅನುಜ್ ಸತ್ತು ಮಲಗಿದ್ದಾನೆ.

ಗುಂಡು ಹಾರಿಸಿದ್ದವರು ಈ ಇಬ್ಬರು

ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್‌ ಸೈಕಲ್‌ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

salman-khan-house-shooting-incident-suspect-found-dead-in-police-custody

ಲಾರೆನ್ಸ್ ಬಿಷ್ಣೋಯ್ ಮತ್ತು ಸಲ್ಮಾನ್ ಖಾನ್..!

ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಆದರೆ ಸಲ್ಮಾನ್ ಖಾನ್ ಮೇಲೆ ಕೃಷ್ಣ ಮೃಗ ಬೇಟೆಯಾಡಿದ ಆರೋಪ ಇತ್ತು. ಹತ್ತಾರು ಬಾರಿ ಸಲ್ಮಾನ್ ಈ ಪ್ರಕರಣದಲ್ಲಿ ಕೋರ್ಟು-ಕಛೇರಿ ಎಂದು ಅಲೆದಾಡಿದ್ದು ಇದೆ. ಆದರೆ 2016ರಲ್ಲಿ ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆಯಾಗಿತ್ತು. ಆ ದಿನ ಆ ಕ್ಷಣದಿಂದ ಸಲ್ಮಾನ್ ಖಾನ್ ಬೆನ್ನು ಹತ್ತಿರುವ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದುಕೊಂಡೆ ಸಲ್ಮಾನ್ ಖಾನ್ ಗೆ ಅನೇಕ ಬಾರಿ ಸ್ಕೆಚ್ ಹಾಕಿದ್ದಾನೆ. ಎರಡು ಮೂರು ಬಾರಿ ಸಲ್ಮಾನ್ ಖಾನ್ ಅವರನ್ನ ಕೊಲ್ಲುವ ಪ್ರಯತ್ನವನ್ನೂ ಮಾಡಿದ್ದಾನೆ.

ಉಳಿದಂತೆ ಉತ್ತರ ಭಾರತದ ಕುಖ್ಯಾತ ದರೋಡೆಕೋರ. ಕೊಲೆ ಮತ್ತು ಸುಲಿಗೆ ಸೇರಿದಂತೆ ಅನೇಕ ಕ್ರಿಮಿನಲ್ ಆರೋಪಗಳನ್ನು ಹೊತ್ತಿರುವ ಲಾರೆನ್ಸ್ ಬಿಷ್ಣೋಯ್, ಖಲಿಸ್ತಾನ್ ಚಳವಳಿ ಮತ್ತು ಇತರ ರೀತಿಯ ದೇಶ ವಿರೋಧಿ ಚಟುವಟಿಕೆಗಳಿಗೆ ಕೂಡ ಹೆಸರುವಾಸಿ. ಇನ್ನೂ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿಯೂ ಈ ವ್ಯಕ್ತಿಯ ಕೈವಾಡ ಇದೆ ಎಂದು ಹಿಂದೆ ಸುದ್ದಿಯಾಗಿತ್ತು

More from Filmibeat

English summary
Salman Khan Residence Shooting: Anuj Thapan, Arrested in Connection with Incident, Dies by Suicide in Mumbai Police Custody
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X